ರೈತರು ಕೃಷಿ ಕಾನೂನುಗಳನ್ನು ಮುರಿಯುತ್ತಾರೆ : ಶರದ್ ಪವಾರ್
ರೈತರನ್ನು ಪಂಜಾಬ್ ಮೂಲದವರು ಎಂದು ಉಲ್ಲೇಖಿಸಲಾಗಿದೆ. ಹಾಗಾದರೇ “ಪಂಜಾಬ್ ಅಂದರೇ, ಪಾಕಿಸ್ತಾನವೇ?"
Team Udayavani, Jan 25, 2021, 7:26 PM IST
ಮುಂಬಯಿ : ರೈತರ ಟ್ರ್ಯಾಕ್ಟರ್ ರ್ಯಾಲಿಗೆ ಕ್ಷಣಗಣನೆ ಇರುವಾಗ “ರೈತರು ಹೊಸ ಕೃಷಿ ಕಾನೂನನ್ನು ಮುರಿದು ಹಾಕುತ್ತಾರೆ” ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್ ಸಿ ಪಿ) ಅಧ್ಯಕ್ಷ ಶರದ್ ಪವಾರ್ ಕೇಂದ್ರ ಸರ್ಕಾರಕ್ಕೆ ಎಚ್ಚರಿಗೆ ನೀಡಿದ್ದಾರೆ.
ಮುಂಬೈನ ಆಜಾದ್ ಮೈದಾನದಲ್ಲಿ ರಾಷ್ಟ್ರ ರಾಜಧಾನಿ ದೆಹಲಿ ಬಳಿ ಪ್ರತಿಭಟನೆ ನಡೆಸುತ್ತಿರುವ ರೈತರಿಗೆ ಒಗ್ಗಟ್ಟನ್ನು ತೋರಿಸುವುದಕ್ಕಾಗಿ ಏರ್ಪಡಿಸಿದ್ದ ಪ್ರತಿಭಟನೆಯಲ್ಲಿ ಶರದ್ ಪವಾರ್ ಕಿಡಿ ಕಾರಿದ್ದಾರೆ.
ಓದಿ: ರೈತರ ಹೋರಾಟದಲ್ಲಿ ಕೆಲವು ಪಕ್ಷಗಳು ರಾಜಕೀಯ ಬೇಳೆ ಬೇಯಿಸಲು ಪ್ರಯತ್ನಿಸುತ್ತಿವೆ : HDK
ಆಡಳಿತ ಪಕ್ಷ ಸಂವಿಧಾನವನ್ನು ದುರ್ಬಲಗೊಳಿಸುವ ಹಿನ್ನೆಲೆಯಲ್ಲಿ ಯಾವುದೇ ಕಾನೂನನ್ನು ಅಂಗೀಕರಿಸಬಹುದು. ಜನ ಸಾಮಾನ್ಯರು, ರೈತರು ಸರ್ಕಾರ ವಿರುದ್ಧ ತಿರುಗಿ ಬಿದ್ದರೇ, ಸರ್ಕಾರವನ್ನೇ ಉರುಳಿಸಬಲ್ಲರು ಎಂದು ಅವರು ಹೇಳಿದ್ದಾರೆ.
“ಪಂಜಾಬ್, ಹರಿಯಾಣ, ಪಶ್ಚಿಮ ಉತ್ತರ ಪ್ರದೇಶ, ರಾಜಸ್ಥಾನದ ರೈತರು ದೆಹಲಿ ಬಳಿ ಪ್ರತಿಭಟನೆ ನಡೆಸಲಾರಂಭಿಸಿ 60 ದಿನಗಳು ಕಳೆದಿವೆ. ಕಳೆದ ಎರಡು ತಿಂಗಳಿನಿಂದ ದೆಹಲಿ ಗಡಿಯಲ್ಲಿ ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತರ ಸ್ಥಿತಿಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರು ವಿಚಾರಿಸಲಿಲ್ಲ. ರೈತರನ್ನು ಪಂಜಾಬ್ ಮೂಲದವರು ಎಂದು ಉಲ್ಲೇಖಿಸಲಾಗಿದೆ. ಹಾಗಾದರೇ “ಪಂಜಾಬ್ ಅಂದರೇ, ಪಾಕಿಸ್ತಾನವೇ?” ಎಂದು ಪವಾರ್ ಪ್ರಶ್ನಿಸಿದ್ದಾರೆ.
ಓದಿ: ಸರ್ಕಾರದಿಂದ ರೈತರಿಗೆ ಅನ್ಯಾಯ
ಮಸೂದೆಗಳ ಬಗ್ಗೆ ಚರ್ಚಿಸಲು ವಿರೋಧ ಪಕ್ಷಗಳು ಒತ್ತಾಯಿಸಿದರೂ ಕೃಷಿ ಕಾನೂನುಗಳನ್ನು ಸಂಸತ್ತಿನಲ್ಲಿ ವಿವರವಾದ ಚರ್ಚೆಯಿಲ್ಲದೆ ಅಂಗೀಕರಿಸಲಾಗಿದೆ. “ಮಸೂದೆಗಳನ್ನು ಆಯ್ಕೆ ಸಮಿತಿಯ ಮೂಲಕ ಚರ್ಚಿಸಬಹುದಿತ್ತು, ಆದರೆ ಅದು ಕೂಡ ಆಗಲಿಲ್ಲ” ಕೃಷಿ ಕಾನೂನುಗಳ ವಿರುದ್ಧ ರಾಜ್ಯದ ರೈತರು ಮೆಮೊರೆಂಡಮ್ ಸಲ್ಲಿಸಬೇಕಾದ ಸಮಯದಲ್ಲಿ ಮಹಾರಾಷ್ಟ್ರದ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯರಿ ಗೋವಾಕ್ಕೆ ತೆರಳಿರುವುದನ್ನು ಉಲ್ಲೇಖಿಸಿ, ಕೋಶ್ಯರಿ ಅವರಿಗೆ ರೈತರಿಗೆ ಸಮಯ ಕೊಡಲು ಆಗುವುದಿಲ್ಲ. ಆದರೆ, ಬಾಲಿವುಡ್ ನಟಿ ಕಂಗನಾ ರನೌತ್ ಅವರನ್ನು ಭೇಟಿ ಮಾಡಲು ಸಮಯವಿದೆ ಎಂದು ಕೋಶ್ಯರಿ ವಿರುದ್ಧ ಪವಾರ್ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಈ ಸಂದರ್ಭದಲ್ಲಿ, ಮಹಾರಾಷ್ಟ್ರದ ಕಂದಾಯ ಸಚಿವ ಮತ್ತು ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ಬಾಲಾ ಸಾಹೇಬ್ ಥೋರತ್, ಅಖಿಲ ಭಾರತ ಕಿಸಾನ್ ಸಭಾದ ಪ್ರಧಾನ ಕಾರ್ಯದರ್ಶಿ ಹನ್ನನ್ ಮೊಲ್ಲಾ ಮತ್ತು ಇತರರು ಉಪಸ್ಥಿತರಿದ್ದರು.
ಓದಿ: ಲಸಿಕೆ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಿದ್ರೆ ಕಠಿಣಕ್ರಮ ಕೈಗೊಳ್ಳಲು ರಾಜ್ಯಕ್ಕೆ ಕೇಂದ್ರ ಸೂಚನೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ನಾನು ಕೆಲವು ಜನರನ್ನು ನಂಬಿ ಮೋಸ ಹೋದೆ – ಡಾ| ಬಿ.ಆರ್.ಶೆಟ್ಟಿ
30 ನಿಮಿಷದಲ್ಲಿಯೇ ಕೊರೊನಾ ಲಸಿಕೆ ಸಂಪೂರ್ಣ ಪ್ರಕ್ರಿಯೆ ಪೂರ್ಣಗೊಳಿಸಿದರು
ದರೋಡೆಕೋರರನ್ನು ಅಟ್ಟಾಡಿಸಿದ ಜನರು.. ಯಾವ ಸಿನಿಮಾಗೂ ಕಡಿಮೆಯಿಲ್ಲ ಚೇಸಿಂಗ್ ದೃಶ್ಯ
ಕುಮಾರಸ್ವಾಮಿಯನ್ನು ನಂಬಬೇಡಿ, ಅವರೊಂದಿಗೆ ಹೊಂದಾಣಿಕೆ ಬೇಡ: ಬಿಜೆಪಿ ವರಿಷ್ಠರಿಗೆ ಯೋಗೀಶ್ವರ್
CoWin App ಸಮಸ್ಯೆ ! ಎರಡು ದಿನ ಲಸಿಕೆ ಹಂಚಿಕೆ ಇಲ್ಲ ! | Udayavani
ಹೊಸ ಸೇರ್ಪಡೆ
ವಿದ್ಯಾರ್ಥಿಗಳ ಮನೋಕಾಮನೆಗಳು ಪೂರ್ಣ, ನಿರಂತರ ಧನಾಗಮನ: ಹೇಗಿದೆ ಇಂದಿನ ಗ್ರಹಬಲ ?
ಸಿಇಟಿಗೆ ಪಠ್ಯಕಡಿತ, ನೀಟ್ಗೇಕಿಲ್ಲ? ದ್ವಿತೀಯ ಪಿಯುಸಿ ವಿಜ್ಞಾನ ವಿದ್ಯಾರ್ಥಿಗಳಿಗೆ ಆತಂಕ
ದಾವೂದ್ ಆಸ್ತಿ ಜಪ್ತಿಗೆ ಆದೇಶ : ಎಫ್ಎಟಿಎಫ್ ಕಪ್ಪುಪಟ್ಟಿಗೆ ತಪ್ಪಿಸಿಕೊಳ್ಳಲು ಪಾಕ್ ಉಪಾಯ
ಸಂಗೀತ ಇಲ್ಲದ ಸಿನೆಮಾ ಊಹಿಸಲಸಾಧ್ಯ
ಫ್ರಾನ್ಸ್ ಮಾಜಿ ಅಧ್ಯಕ್ಷ ನಿಕೋಲಸ್ಗೆ 1 ವರ್ಷ ಜೈಲು ಶಿಕ್ಷೆ