ಫೆ. 4ಕ್ಕೆ ಪ್ರಿಯಾಂಕಾ ರಾಜಕೀಯಕ್ಕೆ ಪ್ರವೇಶ
Team Udayavani, Jan 27, 2019, 2:28 AM IST
ಹೊಸದಿಲ್ಲಿ: ಗಾಂಧಿ-ನೆಹರೂ ಕುಟುಂಬದ ಕುಡಿ ಪ್ರಿಯಾಂಕಾ ವಾದ್ರಾ ಅವರು ಫೆ.4ರಂದು ಕುಂಭಮೇಳಕ್ಕೆ ತೆರಳಿ ಗಂಗೆಯಲ್ಲಿ ಪುಣ್ಯಸ್ನಾನ ಮಾಡುವ ಮೂಲಕ ಅಧಿಕೃತವಾಗಿ ತಮ್ಮ ರಾಜಕೀಯ ಪಯಣ ಆರಂಭಿಸಲಿದ್ದಾರೆ.
ಪ್ರಿಯಾಂಕಾ ಜತೆಗೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರೂ ಉತ್ತರಪ್ರದೇಶದ ಪ್ರಯಾಗ್ರಾಜ್ನಲ್ಲಿ ನಡೆಯುತ್ತಿರುವ ಕುಂಭಮೇಳಕ್ಕೆ ಭೇಟಿ ನೀಡಲಿದ್ದಾರೆ. ಇಬ್ಬರೂ ಶಾಹಿ ಸ್ನಾನದಲ್ಲಿ ಪಾಲ್ಗೊಂಡು, ಅನಂತರ ಉತ್ತರಪ್ರದೇಶ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹುದ್ದೆಯನ್ನು ಪ್ರಿಯಾಂಕಾ ವಹಿಸಿಕೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಒಂದು ವೇಳೆ, ಫೆ.4ರಂದು ಪುಣ್ಯಸ್ನಾನ ಮಾಡಲು ಅವಕಾಶ ದೊರೆಯದಿದ್ದರೆ. ಫೆ.10ರಂದು ವಸಂತ ಪಂಚಮಿ ಹಿನ್ನೆಲೆಯಲ್ಲಿ ನಡೆಯುವ 3ನೇ ಶಾಹಿ ಸ್ನಾನದಲ್ಲಿ ಅವರು ಪಾಲ್ಗೊಳ್ಳುವ ಸಾಧ್ಯತೆಯಿದೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ