ಪಣಜಿ: ಚಲಿಸುತ್ತಿದ್ದ ಕಾರಿಗೆ ಆಕಸ್ಮಿಕ ಬೆಂಕಿ
Team Udayavani, Aug 9, 2022, 11:21 AM IST
ಪಣಜಿ: ಚಲಿಸುತ್ತಿದ್ದ ಕಾರಿಗೆ ಬೆಂಕಿ ಹೊತ್ತಿಕೊಂಡ ಘಟನೆ ಪರ್ವರಿಯ ವಿದ್ಯಾ ಪ್ರಬೋಧನಿ ವಿದ್ಯಾಲಯದ ಬಳಿ ಭಾನುವಾರ ನಡೆದಿದೆ. ಈ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲವಾದರೂ ಹೆಚ್ಚಿನ ಹಾನಿ ಸಂಭವಿಸಿದೆ.
ಕರಂಜಾಲೆ ಪಣಜಿಯ ಸಂಜೀತ್, ತಮ್ಮ ಪತ್ನಿ ಹಾಗೂ ಏಳು ವರ್ಷದ ಮಗಳೊಂದಿಗೆ ಪರ್ವರಿಯಿಂದ ಪಣಜಿಗೆ ಕಾರಿನಲ್ಲಿ ತೆರಳುತ್ತಿದ್ದರು. ಪರ್ವರಿಯಲ್ಲಿರುವ ವಿದ್ಯಾ ಪ್ರಬೋಧಿನಿ ವಿದ್ಯಾಲಯದ ಬಳಿ ಅವರ ಕಾರಿನ ಲೈಟ್ಗಳು ಇದ್ದಕ್ಕಿದ್ದಂತೆ ಆಫ್ ಆಗಿದ್ದವು. ಈ ಕಾರಣದಿಂದಾಗಿ ಅವರು ಕಾರನ್ನು ರಸ್ತೆ ಬದಿಗೆ ಪಾರ್ಕ ಮಾಡಿ ಅದನ್ನು ಸರಿಪಡಿಸಲು ಯಾರನ್ನಾದರೂ ಕರೆಸುವ ಪ್ರಯತ್ನದಲ್ಲಿದ್ದರು.
ಆ ಸಮಯದಲ್ಲೇ ಕಾರಿನ ಇಂಜಿನ್ನಿಂದ ಹೊಗೆ ಬರುತ್ತಿರುವುದನ್ನು ಕಂಡ ಕೂಡಲೇ ಅವರು ಪತ್ನಿ ಮತ್ತು ಮಗಳೊಂದಿಗೆ ಕಾರಿನಿಂದ ಇಳಿದರು. ಕೆಲವೇ ಕ್ಷಣಗಳಲ್ಲಿ ಕಾರು ಬೆಂಕಿಗೆ ಆಹುತಿಯಾಯಿತು.
ಅಪಘಾತದ ಸಮಯದಲ್ಲಿ ಅವರ ಮೊಬೈಲ್ ಫೋನ್ ಕಾರಿನಲ್ಲಿಯೇ ಉಳಿದಿದ್ದರಿಂದ ಅದು ಕೂಡ ಸುಟ್ಟು ಹೋಗಿದೆ.
ಮಾಹಿತಿ ತಿಳಿದ ಕೂಡಲೇ ಅಗ್ನಿಶಾಮಕ ದಳ ಸ್ಥಳಕ್ಕೆ ಧಾವಿಸಿದೆ ಆದರೂ ಅದಾಗಲೇ ಕಾರು ಸಂಪೂರ್ಣ ಸುಟ್ಟು ಕರಕಲಾಗಿದೆ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!