ದೆಹಲಿಯಲ್ಲಿ ಮತ್ತೊಂದು ಅಗ್ನಿ ಅನಾಹುತ: ಮರದ ಕಾರ್ಖಾನೆಗೆ ಹಬ್ಬಿದ ಬೆಂಕಿಯ ಕೆನ್ನಾಲಿಗೆ

Team Udayavani, Dec 14, 2019, 8:30 AM IST

ದೆಹಲಿ: ಪಶ್ಚಿಮ ದೆಹಲಿಯ ಮುಂಡ್ಕಾ ಪ್ರದೇಶದ ಮರದ ಕಾರ್ಖಾನೆಯೊಂದರಲ್ಲಿ ಇಂದು ಬೆಳಿಗ್ಗೆ ಭಾರಿ ಬೆಂಕಿ ಕಾಣಿಸಿಕೊಂಡಿದ್ದು ಅದೃಷ್ಟವಶಾತ್ ಯಾವುದೇ ಸಾವುನೋವು ಸಂಭವಿಸಿಲ್ಲ.

ರಾಷ್ಟ್ರ ರಾಜಧಾನಿಯಲ್ಲಿನ ಝಾನ್ಸಿರಾಣಿ ರಸ್ತೆಯಲ್ಲಿರುವ ಕೃಷಿ ಮಾರುಕಟ್ಟೆ ಗೋದಾಮಿನ ಬಹುಮಹಡಿ ಕಟ್ಟಡದಲ್ಲಿ ವಾರದ ಹಿಂದೆ  ದಿಢೀರ್ ಅಗ್ನಿ ಅವಘಡ ಸಂಭವಿಸಿ, ಬೆಂಕಿಯ ಕೆನ್ನಾಲಗೆಗೆ ಸಿಲುಕಿ 43 ಜನ ಸಾವನ್ನಪ್ಪಿ, 21 ಜನ ಗಂಭೀರ ಗಾಯಗೊಂಡಿದ್ದರು. ಆ ಘಟನೆ ಮಾಸುವ ಮುನ್ನವೇ ಮತ್ತೊಂದು ದುರ್ಘಟನೆ ನಡೆದಿದೆ ಎಂದು ಎಎನ್‌ಐ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಮುಂಡ್ಕಾ ಮರದ ಕಾರ್ಖಾನೆಯಲ್ಲಿ ನಡೆದ ಅಗ್ನಿ ಅನಾಹುತಕ್ಕೆ ಶಾರ್ಟ್ ಸರ್ಕ್ಯೂಟ್ ಕಾರಣ ಎಂದು ಪ್ರಾಥಮಿಕ ವರದಿ ತಿಳಿಸಿದೆ, ಸ್ಥಳಕ್ಕೆ 20 ಅಗ್ನಿಶಾಮಕ ವಾಹನ ಆಗಮಿಸಿದ್ದು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿವೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ