ದೆಹಲಿ: ಕೋರ್ಟಿನ ಆವರಣದಲ್ಲೇ ಮಹಿಳೆ ಮೇಲೆ ಗುಂಡಿನ ದಾಳಿ
Team Udayavani, Apr 21, 2023, 11:22 AM IST
ದೆಹಲಿ: ಕೋರ್ಟಿನ ಆವರಣದಲ್ಲಿ ಮಹಿಳೆಯೊಬ್ಬರ ಮೇಲೆ ಗುಂಡಿನ ದಾಳಿ ನಡೆಸಿರುವ ಘಟನೆ ದೆಹಲಿಯ ಸಾಕೇತ್ ಜಿಲ್ಲಾ ನ್ಯಾಯಾಲಯದಲ್ಲಿ ಶುಕ್ರವಾರ (ಏ.21 ರಂದು) ನಡೆದಿದೆ.
ದೆಹಲಿಯ ಸಾಕೇತ್ ಜಿಲ್ಲಾ ಕೋರ್ಟಿನ ಆವರಣದಲ್ಲಿ ವಕೀಲರ ಧಿರಿಸಿನಲ್ಲಿ ಬಂದ ವ್ಯಕ್ತಿಯೊಬ್ಬ ಮಹಿಳೆ ಮೇಲೆ ಗುಂಡಿನ ದಾಳಿ ನಡೆಸಿದ್ದಾನೆ. ನಾಲ್ಕು ಸುತ್ತಿನ ಗುಂಡಿನ ದಾಳಿ ನಡೆಸಿದ್ದಾನೆ. ಗಂಭೀರ ಸ್ಥಿತಿಯಲ್ಲಿ ಮಹಿಳೆಯನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ವರದಿ ತಿಳಿಸಿದೆ.
ಇದನ್ನೂ ಓದಿ: 2nd PUC: 317 ಕಾಲೇಜುಗಳಲ್ಲಿ ಶೇ.100 ಫಲಿತಾಂಶ; 78 ಕಾಲೇಜುಗಳಲ್ಲಿ ಒಬ್ಬರೂ ಉತ್ತೀರ್ಣರಿಲ್ಲ
ಹಣಕಾಸಿನ ವಿವಾದಕ್ಕೆ ಸಂಬಂಧಿಸಿದ ಪ್ರಕರಣವೊಂದರ ವಿಚಾರಣೆಗಾಗಿ ಮಹಿಳೆ ನ್ಯಾಯಾಲಯಕ್ಕೆ ಬಂದಾಗ ವ್ಯಕ್ತಿಯೊಬ್ಬ ಆಕೆಯ ಮೇಲೆ ಗುಂಡು ಹಾರಿಸಿದ್ದಾನೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಗುಂಡಿನ ದಾಳಿಯ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಮೂಲಗಳ ಪ್ರಕಾರ, ಆರೋಪಿ ಕ್ರಿಮಿನಲ್ ಹಿನ್ನೆಲೆವುಳ್ಳವನಾಗಿದ್ದಾನೆ ಎನ್ನಲಾಗಿದೆ. ಸದ್ಯ ಈ ಬಗ್ಗೆ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI
WhatsApp ಚಾಟ್ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ
LPG Cylinder: ವಾಣಿಜ್ಯ ಎಲ್ಪಿಜಿ ಸಿಲಿಂಡರ್ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.
Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್ಗೆ 48 ಗಂಟೆ ಪ್ರಚಾರ ನಿಷೇಧ
Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್ ಮೈಂಡ್; ಗೋಲ್ಡಿ ಬ್ರಾರ್ ಶೂಟೌಟ್ – ವರದಿ