ಉ.ಪ್ರ.ದಲ್ಲಿ ಕಾರು-ಟ್ರಕ್ ಢಿಕ್ಕಿ: ಮಹಿಳೆ, ಮಗು ಸಹಿತ ಐವರ ಸಾವು
Team Udayavani, Aug 9, 2017, 11:18 AM IST
ಲಖೀಂಪುರ, ಖೇರಿ, ಉತ್ತರ ಪ್ರದೇಶ : ಇಲ್ಲಿನ ಮೊಹಮ್ಮದೀ ಶಹಜಹಾನ್ ಪುರ ರಸ್ತೆಯಲ್ಲಿ ನಿನ್ನೆ ಮಂಗಳವಾರ ತಡ ರಾತ್ರಿ ಟ್ರಕ್ ಒಂದು ಎಸ್ಯುವಿ ಕಾರಿಗೆ ಢಿಕ್ಕಿ ಹೊಡೆದು ಉಂಟಾದ ಭೀಕರ ಅಪಘಾತದಲ್ಲಿ ಓರ್ವ ಮಹಿಳೆ ಮತ್ತು ಒಂದು ಮಗು ಸೇರಿದಂತೆ ಐವರು ದಾರುಣವಾಗಿ ಮೃತಪಟ್ಟು ಇನ್ನಿಬ್ಬರು ಗಾಯಗೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಶಂಕರಪುರ ಕ್ರಾಸಿಂಗ್ನಲ್ಲಿ ನಡೆದಿದ್ದ ಈ ಅವಘಡದಲ್ಲಿ ಮಹಿಳೆ ಸ್ಥಳದಲ್ಲೇ ಮೃತಪಟ್ಟರೆ ಮಗು ಅನಂತರ ಆಸ್ಪತ್ರೆಯಲ್ಲಿ ಮೃತಪಟ್ಟಿತು. ಅಪಘಾತ ಸಂಭವಿಸಿದೊಡನೆಯೇ ಟ್ರಕ್ ಚಾಲಕ ಪರಾರಿಯಾಗಿದ್ದಾನೆ.
ಮೃತರನ್ನು ದಿನೇಶ್ 30, ವಿಪಿನ್ 22, ವಿಪಿನ್ನ ತಾಯಿ ವಿಜಯ ಕುಮಾರಿ 45, ಮತ್ತು ಮೋನು ಎಂದು ಗುರುತಿಸಲಾಗಿದೆ. ಇವರೆಲ್ಲರೂ ಮೊಹಮ್ಮದಿ ಯ ನಗರ ಗ್ರಾಮದ ನಿವಾಸಿಗಳಾಗಿದ್ದಾರೆ. ಇಬ್ಬರು ಗಾಯಾಳುಗಳ ಗುರುತು ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ