ಜಿಎಸ್‌ಟಿ ಸರಳೀಕರಣ ಸಭೆ

Team Udayavani, Nov 17, 2019, 6:16 AM IST

ಹೊಸದಿಲ್ಲಿ: ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ)ಯನ್ನು ಇನ್ನಷ್ಟು ಸರಳೀ ಕೃತಗೊಳಿಸುವ ಮತ್ತು ಜಿಎಸ್‌ಟಿ ರಿಟರ್ನ್ಸ್ ಫೈಲಿಂಗ್‌ ಪ್ರಕ್ರಿಯೆಯನ್ನು ಬಳಕೆದಾರ ಸ್ನೇಹಿಯಾಗಿಸುವ ಉದ್ದೇಶದಿಂದ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಶನಿವಾರ ಚಾರ್ಟರ್ಡ್‌ ಅಕೌಂಟೆಂಟ್‌ಗಳು, ವರ್ತಕರು ಮತ್ತು ಇತರರೊಂದಿಗೆ ಸಭೆ ನಡೆಸಿದ್ದಾರೆ.

ಜಿಎಸ್‌ಟಿ ವಿಚಾರದಲ್ಲಿ ವರ್ತಕರಿಗೆ ಸಮಸ್ಯೆ ಆಗುತ್ತಿರುವುದು ಎಲ್ಲಿ ಎಂಬುದನ್ನು ಅರಿಯುವ ಉದ್ದೇಶದಿಂದ ಈ ಸಭೆ ನಡೆಸಲಾಗಿದೆ. ನೂತನ ಜಿಎಸ್‌ಟಿ ರಿಟರ್ನ್ ವಿತ್ತ ಸಚಿವಾಲಯದ ಪೋರ್ಟಲ್‌ನಲ್ಲಿ ಲಭ್ಯವಿದೆ. ಅದರ ಸಾಧಕ ಬಾಧಕಗಳ ಬಗ್ಗೆ ತಿಳಿದುಕೊಳ್ಳುವ ಸಲುವಾಗಿ ಡಿ. 7ರಂದು ದೇಶಾದ್ಯಂತ ಇಂಥ ಸಭೆಗಳನ್ನು ನಡೆಸುವ ಮೂಲಕ ಜನರ ಸಮಸ್ಯೆಗಳಿಗೆ ಅರಿತು, ಜಿಎಸ್‌ಟಿ ಸರಳೀಕರಣದ ಸಲಹೆಗಳನ್ನು ಅಳವಡಿಸಿಕೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.


ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ