ಗೋವಾ ಸಮುದ್ರ ತೀರದಲ್ಲಿ ಮದುವೆಯಾಗುವ ಕನಸು ಕಾಣುತ್ತಿದ್ದವರಿಗೆ ಇನ್ನು ಹೆಚ್ಚು ಖರ್ಚು

Team Udayavani, Mar 26, 2023, 4:22 PM IST

goa marriage

ಪಣಜಿ: ಮದುವೆಯನ್ನು ಅನೇಕ ಜೋಡಿಗಳು ಹೆಚ್ಚಿನ ವೆಚ್ಚದಲ್ಲಿ ಆಚರಿಸುತ್ತಾರೆ. ಅನೇಕ ಜನರು ಹಣಕ್ಕಿಂತ ಹೆಚ್ಚಾಗಿ ತಮ್ಮ ಮದುವೆಯನ್ನು ಸ್ಮರಣೀಯವಾಗಿಸಲು ಪ್ರಯತ್ನಿಸುತ್ತಾರೆ. ಅದಕ್ಕಾಗಿಯೇ ಅನೇಕ ಜನರು ಗೋವಾದ ಸಮುದ್ರತೀರದಲ್ಲಿ ಮದುವೆಯಾಗಲು ಆಯ್ಕೆ ಮಾಡುತ್ತಾರೆ. ಆದರೆ ಇದೀಗ ಗೋವಾದ ಸಮುದ್ರ ತೀರದಲ್ಲಿ ಮದುವೆಯಾಗುವ ಕನಸು ಕಾಣುತ್ತಿದ್ದವರಿಗೆ ಹೆಚ್ಚಿನ ಹಣ ಖರ್ಚು ಮಾಡುವ ಅನಿವಾರ್ಯತೆ ಎದುರಾಗಿದೆ.

ಈಗ ಗೋವಾದ ಕಡಲತೀರದಲ್ಲಿ ಮದುವೆಯಾಗುವವರು ಹೆಚ್ಚಿನ ಹಣವನ್ನು ಖರ್ಚು ಮಾಡಬೇಕಾಗುತ್ತದೆ. ಗೋವಾ ಕರಾವಳಿ ವಲಯ ನಿರ್ವಹಣಾ ಪ್ರಾಧಿಕಾರ (ಸಿಜೆಡ್‍ಎಂಎ) ಈ ನಿರ್ಧಾರ ಕೈಗೊಂಡಿದೆ. ಹಠಾತ್ ಮದುವೆ ಸಮಾರಂಭ ಕುರಿತಂತೆ ಈ ನಿರ್ಧಾರವನ್ನು ತೆಗೆದುಕೊಂಡ ನಂತರ, ವಧು ವರರು ಮದುವೆಗಾಗಿ ಈ ಆಸೆಯನ್ನು ಪೂರೈಸಲು ಹೆಚ್ಚು ಹಣವನ್ನು ಖರ್ಚು ಮಾಡಬೇಕಾದ ಅನಿವಾರ್ಯತೆ ಎದುರಾಗಿದೆ. ಸಿಜೆಡ್‍ಎಂಎ ಕಡಲ ತೀರದಲ್ಲಿ ತಾತ್ಕಾಲಿಕ ಮದುವೆ ಸೆಟ್ ನಿರ್ಮಿಸಲು ಮತ್ತು ಪರವಾನಗಿಗಳಿಗೆ ಶುಲ್ಕವನ್ನು ದ್ವಿಗುಣಗೊಳಿಸಿದೆ. ಕಡಲತೀರದ ಮದುವೆಗಳು, ಕಡಲತೀರದ ಇತರ ಕಾರ್ಯಕ್ರಮಗಳಿಗೆ ದಿನಕ್ಕೆ 50,000 ರೂ. ದಿಂದ ಶುಲ್ಕ ಈಗ ದಿನಕ್ಕೆ 1 ಲಕ್ಷ ರೂ. ಗೆ ಹೆಚ್ಚಳ ಮಾಡಲಾಗಿದೆ. ಇದರಿಂದಾಗಿ ಗೋವಾ ಬೀಚ್‍ಗಳಲ್ಲಿ ಮದುವೆಯಾಗುವ ಹಲವರ ಕನಸು ನನಸಾಗಲು ಹೆಚ್ಚಿನ ಹಣ ವ್ಯಯಿಸಬೇಕಾಗಲಿದೆ.

ಪ್ರಾಧಿಕಾರವು ಈಗ ಪ್ರತಿ ಚದರ ಮೀಟರ್‍ಗೆ 500 ರೂ.ಗಳಿಂದ  ಪ್ರತಿ ಚದರ ಮೀಟರ್‍ಗೆ 1,000 ರೂ. ಗಳಿಗೆ ಹೆಚ್ಚಳ ಮಾಡಿದೆ. ದಡದಲ್ಲಿರುವ ಗುಡಿಸಲು ಮತ್ತು ಕಾಟೇಜ್‍ಗಳಿಗೆ ಮದುವೆ ನಡೆಸಲು ಪ್ರತಿ ಚದರ ಮೀಟರ್‍ಗೆ 100 ರೂ.ನಿಂದ 500 ರೂ. ಗೆ ಹೆಚ್ಚಳ ಮಾಡಲಾಗಿದೆ. ಬೀಚ್‍ಗಳಲ್ಲಿ ಶಿಕ್ಷಣ ಸಂಸ್ಥೆಗಳ ಕಾರ್ಯಕ್ರಮಗಳಿಗೆ ಕೇವಲ ಶೇ.75ರಷ್ಟು ರಿಯಾಯಿತಿ ನೀಡಲಾಗುವುದು. ಸರ್ಕಾರಿ ಮತ್ತು ಅನುದಾನರಹಿತ ಸಂಸ್ಥೆಗಳಿಗೆ ಶೇ 50 ರಷ್ಟು ರಿಯಾಯಿತಿ ನೀಡಲಾಗುವುದು. ಬೀಚ್ ಪರಿಸರದಲ್ಲಿ ಹೊಸ ಹೋಟೆಲ್ ನಿರ್ಮಾಣಕ್ಕೆ ಈಗ ಪ್ರತಿ ಚದರ ಮೀಟರ್‍ಗೆ 500 ರೂ. ಗಳಿಂದ 1,000 ರೂ.ಗೆ ಶುಲ್ಕ ಹೆಚ್ಚಳ ಮಾಡಲಾಗಿದೆ.

ಮರದ ಜೆಟ್ಟಿ ನಿರ್ಮಿಸಲು ಅಥವಾ ತೇಲುವ ಜೆಟ್ಟಿ ನಿರ್ಮಾಣಕ್ಕೆ 1 ಲಕ್ಷ ರೂ., ತಾತ್ಕಾಲಿಕ ಜೆಟ್ಟಿಗೆ 2 ಲಕ್ಷ ರೂ. ನಿವಾಸಿಗಳು ತಡೆಗೋಡೆಗೆ ರೂ 25,000 ಪಾವತಿಸಬೇಕಾಗುತ್ತದೆ ಮತ್ತು ವ್ಯಾಪಾರಗಳು ರೂ 50,000 ರೂ ಶುಲ್ಕ  ಪಾವತಿಸಬೇಕಾಗುತ್ತದೆ ಎಂದು ಗೋವಾ ಕರಾವಳಿ ವಲಯ ನಿರ್ವಹಣಾ ಪ್ರಾಧಿಕಾರ ಸ್ಪಷ್ಟಪಡಿಸಿದೆ.

ಟಾಪ್ ನ್ಯೂಸ್

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Exam

NEET ಟಾಪರ್‌ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.