ಛತ್ತೀಸ್ಗಢ ಮಾಜಿ ಸಿಎಂ ಜೋಗಿ ತೀವ್ರ ಅಸ್ವಸ್ಥ; ವೆಂಟಿಲೇಟರ್ನಲ್ಲಿ
Team Udayavani, May 31, 2018, 12:28 PM IST
ಗುರುಗ್ರಾಮ: ಛತ್ತೀಸ್ಗಢ ಮಾಜಿ ಮುಖ್ಯಮಂತ್ರಿ ಅಜಿತ್ ಜೋಗಿ ತೀವ್ರ ಅಸ್ವಸ್ಥರಾಗಿದ್ದು ಅವರನ್ನು ಹರಿಯಾಣದ ಗುರುಗ್ರಾಮದ ಮೇದಾಂತ ಆಸ್ಪತ್ರೆಗೆ ಸೇರಿಸಲಾಗಿದೆ; ಅವರಿಗೆ ಕೃತಕ ಉಸಿರಾಟದ ವ್ಯವಸ್ಥೆಯನ್ನು ಅಳವಡಿಸಲಾಗಿದೆ.
ಜೋಗಿ ಅವರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರು “ಜೋಗಿ ಅವರ ದೇಹಸ್ಥಿತಿ ಸ್ಥಿರವಾಗಿದೆ’ ಎಂದು ಹೇಳಿದ್ದಾರೆ.
ನ್ಯೂಮೋನಿಯಾ ಪೀಡಿತರಾಗಿದ್ದ ಮಾಜಿ ಐಎಎಸ್ ಅಧಿಕಾರಿ ಹಾಗೂ ಛತ್ತೀಸ್ಗಢದ ಮೊದಲ ಮುಖ್ಯಮಂತ್ರಿಯಾಗಿರುವ ಅಜಿತ್ ಜೋಗಿ ಅವರನ್ನು ನಿನ್ನೆ ಬುಧವಾರ ಅಂಬುಲೆನ್ಸ್ನಲ್ಲಿ ಮೇದಾಂತ ಆಸ್ಪತ್ರೆಗೆ ತರಲಾಗಿತ್ತು.
72ರ ಹರೆಯದ ಛತ್ತೀಸ್ಗಢದ ಜನತಾ ಕಾಂಗ್ರೆಸ್ ಪಕ್ಷದ ಮುಖ್ಯಸ್ಥರಾಗಿರುವ ಜೋಗಿ ಅವರು ರಾಯ್ಪುರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಜೋಗಿ ಅವರು ಪ್ರಕೃತ ವೆಂಟಿಲೇಟರ್ನಲ್ಲಿ ಇದ್ದಾರೆ; ಆದರೂ ಅವರ ದೇಹಸ್ಥಿತಿ ಸ್ಥಿರವಾಗಿದೆ ಎಂದು ಹಿರಿಯ ಮೆಡಿಕಲ್ ಸುಪರಿಂಟೆಂಡೆಂಟ್ ಡಾ. ಎ ಕೆ ದುಬೆ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ