ಗುಜರಾತ್ ಮಾಜಿ ಮುಖ್ಯಮಂತ್ರಿ ಶಂಕರ್ ಸಿಂಗ್ ವಘೇಲಾ ಗೆ ಕೋವಿಡ್ ಸೋಂಕು ದೃಢ
Team Udayavani, Jun 28, 2020, 11:53 AM IST
ಗಾಂಧಿನಗರ: ಗುಜರಾತ್ ರಾಜ್ಯದ ಮಾಜಿ ಮುಖ್ಯಮಂತ್ರಿ ಶಂಕರ್ ಸಿಂಗ್ ವಘೇಲಾ ಅವರಿಗೆ ಕೋವಿಡ್-19 ಸೋಂಕು ದೃಢವಾಗಿದೆ.
ಶಂಕರ್ ಸಿಂಗ್ ವಘೇಲಾ ಅವರಿಗೆ ತೀವ್ರ ಜ್ವರ ಕಂಡುಬಂದು ಹಿನ್ನಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ವೇಳೆ ಅವರಿಗೆ ಕೋವಿಡ್-19 ಪರೀಕ್ಷೆ ನಡೆಸಿದ್ದು, ಪಾಸಿಟಿವ್ ವರದಿಯಾಗಿದೆ.
ಶಂಕರ್ ಸಿಂಗ್ ವಘೇಲಾ ಅವರಿಗೆ ಕೋವಿಡ್ -19 ಸೋಂಕು ದೃಢವಾದ ಮಾಹಿತಿ ತಿಳಿದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಕರೆ ಮಾಡಿ ಆರೋಗ್ಯ ವಿಚಾರಿಸಿದ್ದಾರೆ ಎನ್ನಲಾಗಿದೆ.
79 ವರ್ಷ ಪ್ರಾಯದ ಶಂಕರ್ ಸಿಂಗ್ ವಘೇಲಾ ಅವರು, ಬಿಜೆಪಿ ಪಕ್ಷದಿಂದ ರಾಜಕೀಯ ಪ್ರಾರಂಭಿಸಿದವರು. ನಂತರ ರಾಷ್ಟ್ರೀಯ ಜನತಾ ಪಕ್ಷ, ಕಾಂಗ್ರೆಸ್ ಸೇರಿದ ಅವರು ಸದ್ಯ ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದಲ್ಲಿದ್ದಾರೆ. 1996ರ ಅಕ್ಟೋಬರ್ ನಿಂದ 1997ರ ಅಕ್ಟೋಬರ್ ವರೆಗೆ ಗುಜರಾತ್ ರಾಜ್ಯದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ
VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್
Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು