ಮಾಜಿ ಪ್ರಧಾನಿ ಡಾ| ಮನಮೋಹನ್ ಸಿಂಗ್ ಡಿಸ್ಚಾರ್ಜ್
Team Udayavani, May 13, 2020, 9:17 AM IST
ಹೊಸದಿಲ್ಲಿ: ಎದೆನೋವು ಹಾಗೂ ಬಳಲಿಕೆಯಿಂದಾಗಿ ಹೊಸದಿಲ್ಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಪ್ರಧಾನಿ ಡಾ| ಮನಮೋಹನ್ ಸಿಂಗ್ ಮಂಗಳವಾರ ಡಿಸ್ಚಾರ್ಜ್ ಆಗಿದ್ದಾರೆ. ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದ ಹಿನ್ನೆಲೆಯಲ್ಲಿ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ ಎಂದು ಏಮ್ಸ್ ಮೂಲಗಳು ತಿಳಿಸಿವೆ. ಹೊಸ ಔಷಧವೊಂದನ್ನು ಸೇವಿಸಿದ ಪರಿಣಾಮ ಅದು ರಿಯಾಕ್ಷನ್ ಆಗಿ, ಅವರಲ್ಲಿ ಎದೆನೋವು ಮತ್ತು ಬಳಲಿಕೆ ಕಾಣಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ರವಿವಾರ ರಾತ್ರಿ ಅವರು ಆಸ್ಪತ್ರೆಗೆ ದಾಖಲಾಗಿದ್ದರು. ಜತೆಗೆ ಅವರಲ್ಲಿ ಜ್ವರವೂ ಕಾಣಿಸಿ ಕೊಂಡಿತ್ತು. ಹೀಗಾಗಿ ಕೋವಿಡ್ ಪರೀಕ್ಷೆಯನ್ನೂ ನಡೆಸಲಾಗಿದ್ದು, ವರದಿ ನೆಗೆಟಿವ್ ಎಂದು ಬಂದಿತ್ತು. ಪ್ರಸ್ತುತ ಅವರು ಗುಣಮುಖರಾಗಿದ್ದು, ಮನೆಗೆ ತೆರಳಿದ್ದಾರೆ ಎಂದು ಮೂಲಗಳು ಹೇಳಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?
JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA