ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರಿಗೆ ಝಡ್ ಪ್ಲಸ್ ಭದ್ರತೆ
Team Udayavani, Sep 7, 2022, 7:14 PM IST
ನವದೆಹಲಿ: ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರಿಗೆ ಕೇಂದ್ರ ಅರೆಸೇನಾ ಪಡೆಯ ‘ಝಡ್ ಪ್ಲಸ್’ ವರ್ಗದ ವಿಐಪಿ ಭದ್ರತೆಯನ್ನು ಕೇಂದ್ರವು ನೀಡಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.
ಕೋವಿಂದ್ ಅವರಿಗೆ ಅಖಿಲ ಭಾರತ ಆಧಾರದ ಮೇಲೆ ಸಶಸ್ತ್ರ ಬೆಂಗಾವಲು ನೀಡಲಾಗುವುದು ಮತ್ತು ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್ಪಿಎಫ್) ವಿಐಪಿ ಭದ್ರತಾ ಕಮಾಂಡೋ ಘಟಕವು ಕಾರ್ಯವನ್ನು ನಿರ್ವಹಿಸುತ್ತದೆ. ಕೇಂದ್ರ ಗುಪ್ತಚರ ಸಂಸ್ಥೆಗಳು ಮಾಡಿದ ಶಿಫಾರಸಿನ ಆಧಾರದ ಮೇಲೆ ಕೇಂದ್ರ ಗೃಹ ಸಚಿವಾಲಯವು ಇತ್ತೀಚೆಗೆ ಭದ್ರತೆಯನ್ನು ಮಂಜೂರು ಮಾಡಿದೆ ಮತ್ತು ಸೆ. 5 ರಂದು ಪಡೆ ಈ ಕಾರ್ಯವನ್ನು ವಹಿಸಿಕೊಂಡಿದೆ.ಕೇಂದ್ರ ದೆಹಲಿಯ ಜನಪಥ್ ರಸ್ತೆಯಲ್ಲಿರುವ ಮಾಜಿ ರಾಷ್ಟ್ರಪತಿಯವರ ಮನೆಗೂ ಪಡೆ ಭದ್ರತೆ ನೀಡಲಿದೆ.
14 ನೇ ರಾಷ್ಟ್ರಪತಿಯಾಗಿ ಸೇವೆ ಸಲ್ಲಿಸಿದ್ದ 76 ವರ್ಷದ ಕೋವಿಂದ್ ಅವರು ಜುಲೈನಲ್ಲಿ ಅಧಿಕಾರ ಅವಧಿ ಮುಕ್ತಾಯಗೊಂಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ
ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್ಕಮ್ ಹೊಟೇಲ್ನಲ್ಲಿ ವ್ಯವಸ್ಥೆ
VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್
Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು
IPL;ಮುಂಬೈ ಇಂಡಿಯನ್ಸ್ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ