ಕೇರಳದ ಎಲ್ಲಾ ಜನರಿಗೂ ಉಚಿತವಾಗಿ ಕೋವಿಡ್ ಲಸಿಕೆ ನೀಡಲಾಗುವುದು: ಪಿಣರಾಯಿ ವಿಜಯನ್
Team Udayavani, Dec 13, 2020, 4:40 PM IST
ತಿರುವನಂತಪುರ: ಕೇರಳದ ಎಲ್ಲಾ ಜನರಿಗೂ ಉಚಿತವಾಗಿ ಕೋವಿಡ್ ಲಸಿಕೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತಿಳಿಸಿದ್ದಾರೆ.
ಶನಿವಾರ ಸುದ್ದಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಕೇಂದ್ರದಿಂದ ರಾಜ್ಯಕ್ಕೆ ಎಷ್ಟು ಲಸಿಕೆ ಲಭ್ಯವಿದೆ ಎಂಬುವುದು ಇನ್ನೂ ಸರಿಯಾಗಿ ತಿಳಿದಿಲ್ಲ. ಆದರೆ ಈ ಮಾಹಿತಿಗಳನ್ನು ತಿಳಿದುಕೊಂಡು ನಂತರ ರಾಜ್ಯದ ಪ್ರತಿಯೊಬ್ಬರಿಗೂ ಯಾವುದೆ ಹಣ ಪಡೆಯದೆ ಲಸಿಕೆ ನೀಡಲಾಗುವುದು ಎಂದಿದ್ದಾರೆ.
ಈಗಾಗಾಲೇ ಮಧ್ಯಪ್ರದೇಶ ಹಾಗೂ ತಮಿಳುನಾಡು ರಾಜ್ಯಗಳು, ತಮ್ಮ ಜನರಿಗಾಗಿ ಉಚಿತವಾಗಿ ಕೋವಿಡ್ ಲಸಿಕೆ ನೀಡುವುದಾಗಿ ನಿರ್ಧರಿಸಿದೆ ಎಂದ ಇವರು, ಬೇರೆ ರಾಜ್ಯಗಳಿಗೆ ಹೋಲಿಸಿದರೆ ನಮ್ಮ ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಇಳಿಮುಖವಾಗಿದೆ. ಆದರೆ ರಾಜ್ಯದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಯುತ್ತಿರುವುದರಿಂದ ಈ ಸಂದರ್ಭದಲ್ಲಿ ಮತ್ತೆ ಸೋಂಕಿನ ಪ್ರಮಾಣ ಹೆಚ್ಚಳವಾಗುವ ಚಿಂತೆ ಎದುರಾಗಿದೆ ಎಂದಿದ್ದಾರೆ.
ಕೇರಳದಲ್ಲಿ ಸೋಂಕು ದಾಖಲಾದ ಮೊದಲ ಪ್ರಕರಣದಿಂದ ಆರಂಭಗೊಂಡು ಪ್ರತಿಯೊಬ್ಬ ಸೋಂಕಿತರಿಗೂ ಉಚಿತವಾಗಿ ಚಿಕಿತ್ಸೆ ನೀಡಲಾಗುತ್ತಿದೆ. ಹಾಗೂ ಪ್ರತಿ ಜಿಲ್ಲೆಯಲ್ಲಿಯೂ ಕೋವಿಡ್ ಚಿಕಿತ್ಸೆಗೆ ಸಂಬಂಧಿಸಿದಂತೆ ಚಿಕಿತ್ಸಾ ಕೇಂದ್ರಗಳನ್ನು ತೆರೆಯಲಾಗಿದೆ. ಸೋಂಕಿಗೆ ಒಳಪಟ್ಟ ಪ್ರತಿಯೊಬ್ಬರಿಗೂ ಉಚಿತವಾಗಿ ಔಷಧಿ ಮತ್ತು ಆಹಾರದ ಸೇವೆಯನ್ನು ನೀಡಲಾಗುತ್ತಿದೆ ಎಂದು ವರದಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಜಗತ್ತಿಗಿಂತ ಮೊದಲು ಪಾಕ್ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್ ದಾಳಿ ಬಗ್ಗೆ ಪ್ರಧಾನಿ
Encounter: ಛತ್ತೀಸ್ಗಢದಲ್ಲಿ ಎನ್‌ಕೌಂಟರ್… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ
Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್
Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ
MUST WATCH
ಹೊಸ ಸೇರ್ಪಡೆ
ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ
Kollywood: ಕಮಲ್ ಹಾಸನ್ ʼಥಗ್ ಲೈಫ್ʼ ಅಖಾಡಕ್ಕೆ ಬಾಲಿವುಡ್ನ ಖ್ಯಾತ ನಟರು ಎಂಟ್ರಿ?
ಮೋದಿಯಿಂದ ಬಡತನ ಮುಕ್ತ ಭಾರತ: ಬಸವರಾಜ ಬೊಮ್ಮಾಯಿ
Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ
Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ