ದೆಹಲಿಯಲ್ಲಿ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಕೋವಿಡ್ ಲಸಿಕೆ ಫ್ರೀ : ಕೇಜ್ರಿವಾಲ್
Team Udayavani, Apr 26, 2021, 2:19 PM IST
ನವದೆಹಲಿ : ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೋವಿಡ್ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಶನಿವಾರದಿಂದ ಉಚಿತ ಲಸಿಕೆ ನೀಡುವುದಾಗಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.
18 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಲಸಿಕೆ ನೀಡಲು ದೆಹಲಿ ಸರ್ಕಾರ ನಿರ್ಧರಿಸಿದೆ, ಇಂದು 1.34 ಕೋಟಿ ಲಸಿಕೆ ಖರೀದಿಸಲು ಅನುಮೋದನೆ ನೀಡಲಾಗಿದೆ ಎಂದು ಅರವಿಂದ್ ಕೇಜ್ರಿವಾಲ್ ತಿಳಿಸಿದ್ದಾರೆ. ಇನ್ನು ದೆಹಲಿ ಸರ್ಕಾರದ ಆಸ್ಪತ್ರೆಗಳಲ್ಲಿ ಮಾತ್ರ ಉಚಿತ ಕೋವಿಡ್ ಲಸಿಕೆ ನೀಡಲಾಗುತ್ತದೆ. ಆದ್ರೆ ಖಾಸಗಿ ಆಸ್ಪತ್ರೆಗಳಲ್ಲಿ ನೀಡಲಾಗುವ ಲಸಿಕೆಗೆ ಹಣ ನೀಡಬೇಕಾಗುತ್ತದೆ ಎಂದು ತಿಳಿಸಲಾಗಿದೆ.
ಕೋವಿಡ್ ಲಸಿಕೆ ತಯಾರಿಕೆ ಮಾಡುವ ಕಂಪನಿಗಳು ಕಡಿಮೆ ಹಣದಲ್ಲಿ ಪೂರೈಸಬೇಕು ಎಂದು ಸಿಎಂ ಕೇಜ್ರಿವಾಲ್ ಆಗ್ರಹಿಸಿದ್ದಾರೆ. ಅಲ್ಲದೆ ಲಸಿಕೆಗೆ 150 ರುಪಾಯಿ ನಿಗದಿ ಪಡಿಸುವಂತೆ ಅವರು ಮನವಿ ಮಾಡಿದ್ದಾರೆ.