ದಿಲ್ಲಿಯಲ್ಲಿ ಪಟಾಕಿ ನಿಷೇಧ ಮುಂದುವರಿಕೆ ಕೋರಿ ಸುಪ್ರೀಂಗೆ ಅರ್ಜಿ

Team Udayavani, Oct 27, 2017, 3:52 PM IST

ಹೊಸದಿಲ್ಲಿ : ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲಿ ಅಕ್ಟೋಬರ್‌ 31ರ ಬಳಿಕವೂ ಪಟಾಕಿ ಮಾರಾಟ ನಿಷೇಧವನ್ನು ಮುಂದುವರಿಸಬೇಕೆಂದು ಕೋರುವ ಹೊಸ ಅರ್ಜಿಯನ್ನು ಸುಪ್ರೀಂ ಕೋರ್ಟಿಗೆ ಸಲ್ಲಿಸಲಾಗಿದೆ

ಈ ಅರ್ಜಿಯನ್ನು ತುರ್ತಾಗಿ ವಿಚಾರಣೆಗೆ ಎತ್ತಿಕೊಳ್ಳಬೇಕೇ ಬೇಡವೇ ಎಂಬುದನ್ನು ಪರಿಶೀಲಿಸಲಾಗುವುದು ಎಂದು ವರಿಷ್ಠ ನ್ಯಾಯಮೂರ್ತಿ ದೀಪಕ್‌ ಮಿಶ್ರಾ ಮತ್ತು ಜಸ್ಟಿಸ್‌ಗಳಾದ ಎ ಎ ಖಾನ್‌ವಿಲ್ಕರ್‌ ಮತ್ತು ಡಿ ವೈ ಚಂದ್ರಚೂಡ್‌ ಅವರನ್ನು ಒಳಗೊಂಡ ಪೀಠ ಹೇಳಿತು.

ದಿಲ್ಲಿಯಲ್ಲಿನ ಈಗಿನ ವಾಯು ಮಾಲಿನ್ಯ ಮಟ್ಟ ಗಂಭೀರ ಇರುವುದನ್ನು ಪರಿಗಣಿಸಿ ಈ ಹೊಸ ಅರ್ಜಿಯಲ್ಲಿನ ಕೋರಿಕೆಯ ಪ್ರಕಾರ ಅ.31ರ ಬಳಿಕವೂ ದಿಲ್ಲಿಯಲ್ಲಿ ಪಟಾಕಿ ಮಾರಾಟ ನಿಷೇಧವನ್ನು ಮುಂದುವರಿಸಬೇಕು ಎಂದು ಅರ್ಜಿದಾರ ಅರ್ಜುನ್‌ ಗೋಪಾಲ್‌ ಅವರ ವಕೀಲರು ಪೀಠದ ಮುಂದೆ ನಿವೇದಿಸಿದರು. 

ಈ ಹಿಂದೆಯೂ ಅರ್ಜಿದಾರ ಅರ್ಜುನ್‌ ಗೋಪಾಲ್‌ ಸಲ್ಲಿಸಿದ್ದ ಅರ್ಜಿಯನ್ನು ಪರಿಗಣಿಸಿ ಸುಪ್ರೀಂ ಕೋರ್ಟ್‌ ದಿಲ್ಲಿಯಲ್ಲಿ ಪಟಾಕಿ ಮಾರಾಟವನ್ನು ನಿಷೇಧಿಸಿ ಆದೇಶ ಹೊರಡಿಸಿತ್ತು. 

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ