Jalandhar: ಫ್ರಿಡ್ಜ್ ಕಂಪ್ರೆಸ್ಸರ್ ಸ್ಫೋಟ: 3 ಮಕ್ಕಳು ಸೇರಿ ಒಂದೇ ಕುಟುಂಬದ ಐವರು ಮೃತ್ಯು
Team Udayavani, Oct 9, 2023, 12:10 PM IST
ಚಂಡೀಗಢ: ಫ್ರಿಡ್ಜ್ ಕಂಪ್ರೆಸ್ಸರ್ ಸ್ಪೋಟಗೊಂಡು ಮೂವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಐವರು ಮೃತಪಟ್ಟಿರುವ ಘಟನೆ ಪಂಜಾಬ್ನ ಜಲಂಧರ್ನಲ್ಲಿ ನಡೆದಿರುವುದಾಗಿ ಪಂಜಾಬ್ ಪೊಲೀಸರು ತಿಳಿಸಿದ್ದಾರೆ.
ಮೃತರನ್ನು ಯಶಪಾಲ್ ಘಾಯ್ (70), ರುಚಿ ಘಾಯ್ (40), ಮನ್ಶಾ (14), ದಿಯಾ (12) ಮತ್ತು ಅಕ್ಷಯ್ (10) ಎಂದು ಗುರುತಿಸಲಾಗಿದೆ.
ನಗರದ ಅವತಾರ್ ನಗರ ಪ್ರದೇಶದಲ್ಲಿ ಭಾನುವಾರ ರಾತ್ರಿ ಈ ಘಟನೆ ನಡೆದಿದೆ. ಸ್ಫೋಟದ ನಂತರ ಮನೆಗೆ ಬೆಂಕಿ ಹೊತ್ತಿಕೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಐವರನ್ನು ಜಲಂಧರ್ ಸಿವಿಲ್ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅಷ್ಟೋತ್ತಿಗಾಗಲೇ ಅವರ ಪ್ರಾಣ ಪಕ್ಷಿ ಹಾರಿಹೋಗಿತ್ತು ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ಘಟನಾ ಸ್ಥಳಕ್ಕೆ ವಿಧಿ ವಿಜ್ಞಾನ ತಂಡ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು ಮಾದರಿಗಳನ್ನು ಸಂಗ್ರಹಿಸಿದೆ.
ಘಟನೆ ಕುರಿತು ಮಾಹಿತಿ ನೀಡಿದ ಹಿರಿಯ ಪೊಲೀಸ್ ಅಧಿಕಾರಿ, ಅವತಾರ್ ನಗರದ ಮನೆಯೊಂದರಲ್ಲಿ ಫ್ರಿಡ್ಜ್ ಕಂಪ್ರೆಸ್ಸರ್ ಸ್ಫೋಟಗೊಂಡಿರುವ ಕುರಿತು ಮಾಹಿತಿ ಬಂದಿದ್ದು ಕೂಡಲೇ ರಕ್ಷಣಾ ತಂಡ ಹಾಗೂ ಸಿಬಂದಿಗಳ ಜೊತೆ ಘಟನಾ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯ ನಡೆಸಿ ಐವರನ್ನು ರಕ್ಷಣೆ ಮಾಡಿ ಆಸ್ಪತ್ರೆಗೆ ದಾಖಲಿಸಿದೆವು ಆದರೆ ಘಟನೆಯಲ್ಲಿ ಯಾರು ಬದುಕುಳಿಯಲಿಲ್ಲ ಎಂದು ಹೇಳಿದ್ದಾರೆ.
ಸ್ಪೋಟದ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: CWC2023: ಪ್ಲ್ಯಾನ್ ಮಾಡಿದ್ದು ಒಂದು, ಆಗಿದ್ದು ಮತ್ತೊಂದು; ರಾಹುಲ್ ಈ ಅಚ್ಚರಿಯ ಕಾರಣ ಬಹಿರಂಗ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
MUST WATCH
ಹೊಸ ಸೇರ್ಪಡೆ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ