10 ರೂ. ಗೆ ನಡೆಯಿತು ಕೊಲೆ! ಸಾರಾಯಿ ಕುಡಿಯಲು ಹಣ ಕೊಡದ ಸ್ನೇಹಿತನನ್ನೇ ಕೊಂದರು!
Team Udayavani, Oct 28, 2021, 9:31 AM IST
ಮುಂಬೈ: ಸಾರಾಯಿ ಕುಡಿಯಲು 10 ರೂ. ಕೊಡಲು ನಿರಾಕರಿಸಿದ ವ್ಯಕ್ತಿಯನ್ನು ಆತನ ಇಬ್ಬರು ಸ್ನೇಹಿತರು ಕೊಲೆ ಮಾಡಿದ ಘಟನೆ ಮಹಾರಾಷ್ಟ್ರದ ಬುಲ್ಧಾನಾ ಜಿಲ್ಲೆಯಲ್ಲಿ ನಡೆದಿದೆ.
ಮೃತ ವ್ಯಕ್ತಿಯನ್ನು 50 ವರ್ಷದ ಭಗವತ್ ಸೀತಾರಾಮ್ ಎಂದು ಗುರುತಿಸಲಾಗಿದೆ. ಆತನ ಆರೋಪಿ ಸ್ನೇಹಿತರಾದ 40 ವರ್ಷದ ವಿನೋದ್ ಲಕ್ಷ್ಮಣ್ ವಾಂಖೆಡೆ ಮತ್ತು 35 ವರ್ಷದ ದಿಲೀಪ್ ತ್ರ್ಯಂಬಕ್ ಬೊಡ್ಡೆ ಕೊಲೆಗೈದ ಆರೋಪಿಗಳು.
ಮೂವರು ಸ್ನೇಹಿತರು ಒಟ್ಟಿಗೆ ಮದ್ಯದಂಗಡಿಗೆ ಕುಡಿಯಲು ಹೋಗಿದ್ದರು. ಈ ವೇಳೆ ವಿನೋದ್ ಲಕ್ಷ್ಮಣ್ ವಾಂಖೆಡೆ ಮತ್ತು ದಿಲೀಪ್ ತ್ರ್ಯಂಬಕ್ ಮದ್ಯ ಕುಡಿಯಲು ಸೀತಾರಾಮ್ ನಿಂದ 10 ರೂ. ಕೇಳಿದ್ದಾರೆ. ಆದರೆ ಸೀತಾರಾಂ ಅವರಿಗೆ ಹಣ ನೀಡಲು ನಿರಾಕರಿಸಿದ್ದಾನೆ. ಬಳಿಕ ಸೀತಾರಾಮ್ ಅಂಗಡಿಯಿಂದ ಹೊರಗೆ ಹೋಗುತ್ತಿದ್ದಾಗ ಆರೋಪಿಗಳು ಮರದ ದೊಣ್ಣೆಯಿಂದ ಆತನ ತಲೆಗೆ ಹಿಂದಿನಿಂದ ಹೊಡೆದು ಹಲ್ಲೆ ನಡೆಸಿದ್ದಾರೆ. ಈ ವೇಳೆ ಭಗವತ್ ಸೀತಾರಾಮ್ ತಲೆಗೆ ಪೆಟ್ಟಾಗಿ ಕೆಳಗೆ ಬಿದ್ದು ಕೊನೆಯುಸಿರೆಳೆದರು.
ಇದನ್ನೂ ಓದಿ:ವಲಸೆ ಕಾರ್ಮಿಕರ ಹತ್ಯೆಗೆ ನೆರವು ನೀಡುತ್ತಿದ್ದ ಉಗ್ರನನ್ನು ಹತ್ಯೆ ಮಾಡಿದ ಭದ್ರತಾ ಪಡೆ
ಘಟನೆ ನಡೆದ ಒಂದು ಗಂಟೆಯೊಳಗೆ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಸೀತಾರಾಮ್ ದೇಹವು ರಕ್ತದ ಮಡುವಿನಲ್ಲಿ ಕಂಡುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪೊಲೀಸ್ ಅಧಿಕಾರಿ ಪ್ರಲ್ಹಾದ್ ಕಾಟ್ಕರ್ ಮಾತನಾಡಿ, ಮದ್ಯದಂಗಡಿಯಲ್ಲಿ ವ್ಯಕ್ತಿಯೊಬ್ಬರು ರಕ್ತದ ಮಡುವಿನಲ್ಲಿ ಬಿದ್ದಿರುವ ಬಗ್ಗೆ ದೂರವಾಣಿ ಕರೆ ಮಾಡಿ ಮಾಹಿತಿ ಬಂದಿದ್ದು, ನಾವು ಸ್ಥಳಕ್ಕಾಗಮಿಸುವಷ್ಟರಲ್ಲಿ ವ್ಯಕ್ತಿ ಮೃತಪಟ್ಟಿದ್ದರು. ಒಂದು ಗಂಟೆಯೊಳಗೆ ಹಂತಕರನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದೇವೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಕ್ರಿಯ ರಾಜಕಾರಣಕ್ಕೆ ಕಾಲಿಟ್ಟ ಸುಷ್ಮಾ ಸ್ವರಾಜ್ ಪುತ್ರಿ ಬಾನ್ಸುರಿ; ಕಾನೂನು ಪದವೀಧರೆ
4 ಮಕ್ಕಳೊಂದಿಗೆ ಬಾವಿಗೆ ಹಾರಿ,ಹಗ್ಗ ಹಿಡಿದು ತನ್ನನು ಹಾಗೂ ಹಿರಿ ಮಗಳನ್ನು ರಕ್ಷಿಸಿದ ತಾಯಿ.!
ಸಾವರ್ಕರ್ ಅವರನ್ನು ಅವಮಾನಿಸಿದರೆ… ರಾಹುಲ್ ಗಾಂಧಿ ಹೇಳಿಕೆಗೆ ಉದ್ಧವ್ ಠಾಕ್ರೆ ಆಕ್ರೋಶ
ರಾಘವ್ ಛಡ್ಡಾ-ಪರಿಣಿತಿ ಛೋಪ್ರಾ ಶೀಘ್ರವೇ ಎಂಗೇಜ್
ಉದ್ಯೋಗ ಖಾತ್ರಿ ಕೂಲಿ ಹೆಚ್ಚಳಕ್ಕೆ ಕೇಂದ್ರ ಸರ್ಕಾರ ನಿರ್ಧಾರ
MUST WATCH
ಹೊಸ ಸೇರ್ಪಡೆ
ಇಡಬ್ಲೂಎಸ್ ಅನುಷ್ಠಾನಗೊಳಿಸುವಲ್ಲಿ ರಾಜ್ಯ ಸರಕಾರದಿಂದ ನಿರ್ಲಕ್ಷ್ಯ: ಹನುಮಂತ ಡಂಬಳ
ಹರಪನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಟಿಕೆಟ್ ಗಾಗಿ ಬಿಗ್ ಫೈಟ್
ಇಸ್ರೇಲ್ ನಲ್ಲಿ ಪ್ರಧಾನಿ ನೆತನ್ಯಾಹು ವಿರುದ್ಧ ಭುಗಿಲೆದ್ದ ಆಕ್ರೋಶ,ಪ್ರತಿಭಟನೆ; ಏನಿದು ವಿವಾದ
’20 ವರ್ಷಗಳ ಹಿಂದೆ ನನಗೆ ಅರಿವಿರಲಿಲ್ಲ…’; ಮರು ಮದುವೆ ಬಗ್ಗೆ ಮಾತನಾಡಿದ ಶಿಖರ್ ಧವನ್
ಕ್ಷೇತ್ರದ ಅಭಿವೃದ್ಧಿಗೆ ಸಂಕಲ್ಪ ಮಾಡೋಣ