ಜಗತ್ತಿನಾದ್ಯಂತ ಮಹಾತ್ಮನಿಗೆ ಗೌರವ
Team Udayavani, Oct 3, 2020, 12:20 AM IST
ಅಹ್ಮದಾಬಾದ್/ಹೊಸದಿಲ್ಲಿ: ಮಹಾತ್ಮಾ ಗಾಂಧಿ ಅವರ 151ನೇ ಜನ್ಮದಿನವನ್ನು ದೇಶಾದ್ಯಂತ ಮತ್ತು ಜಗತ್ತಿನ ಹಲವು ಭಾಗಗಳಲ್ಲಿ ಶುಕ್ರವಾರ ಆಚರಿಸಲಾಯಿತು. ಅಹ್ಮದಾಬಾದ್‌ನಲ್ಲಿರುವ ಸಾಬರಮತಿ ಆಶ್ರಮದಲ್ಲಿ ಸರ್ವ ಧರ್ಮಗಳ ಪ್ರಾರ್ಥನ ಸಭೆ ಆಯೋಜಿಸಲಾಗಿತ್ತು. ಕೋವಿಡ್ ಹಿನ್ನೆಲೆಯಲ್ಲಿ ಸೀಮಿತ ಜನರನ್ನು ಮಾತ್ರ ಆಹ್ವಾನಿಸಲಾಗಿತ್ತು.
ಹೊಸದಿಲ್ಲಿಯಲ್ಲಿ ರಾಷ್ಟ್ರಪತಿ ರಾಮನಾಥ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ, ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ರಾಜಘಾಟ್‌ನಲ್ಲಿ ಮಹಾತ್ಮ ಗಾಂಧಿ ಅವರ ಸಮಾಧಿಗೆ ಪುಷ್ಪನಮನ ಸಲ್ಲಿಸಿದ್ದಾರೆ. ಬಳಿಕ ವಿಜಯ ಘಾಟ್‌ನಲ್ಲಿ ಮಾಜಿ ಪ್ರಧಾನಿ ದಿ| ಲಾಲ್ ಬಹದ್ದೂರ್ ಶಾಸ್ತ್ರಿ ಸಮಾಧಿಗೆ ತೆರಳಿ ರಾಷ್ಟ್ರಪತಿ, ಪ್ರಧಾನಿ, ದಿಲ್ಲಿ ಸಿಎಂ ಗೌರವ ಅರ್ಪಿಸಿದರು.
ಮಹಾತ್ಮನಿಗೆ ಪುಷ್ಪ ನಮನ ಸಲ್ಲಿಸಿದ ಬಳಿಕ ಮಾತನಾಡಿದ ಪ್ರಧಾನಿ ಮೋದಿ, “ಮಹಾತ್ಮ ಅವರ ಜೀವನ ಮತ್ತು ಚಿಂತನೆಗಳಿಂದ ಕಲಿಯುವುದು ಬಹಳಷ್ಟಿದೆ’ ಎಂದಿದ್ದಾರೆ.
ಯಶಸ್ಸು ಕಾಣಲಿದೆ
ಇದೇ ವೇಳೆ, ಗಾಂಧಿಯನ್ನು ಸ್ಮರಿಸುತ್ತಾ ಕೃಷಿ ಕಾಯ್ದೆ ಕುರಿತು ಪ್ರಸ್ತಾವಿಸಿರುವ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಮಹಾತ್ಮಾ ಗಾಂಧಿಯವರು ತೋರಿದ ದಾರಿಯಲ್ಲಿ ರೈತರು ಪ್ರತಿಭಟನೆ ನಡೆಸುತ್ತಿ ದ್ದಾರೆ. ಆ ಹೋರಾಟಕ್ಕೆ ನಿಶ್ಚಿತವಾಗಿಯೂ ಜಯ ಸಿಗಲಿದೆ ಎಂದಿದ್ದಾರೆ.
ಚಿತ್ರ ಪ್ರದರ್ಶನ
ಯುಎಇ ರಾಜಧಾನಿ ದುಬಾೖಯ ಲ್ಲಿರುವ ಬುರ್ಜ್ ಖಲೀಫಾ ಕಟ್ಟಡದಲ್ಲಿ ಗಾಂಧಿ ಜಯಂತಿ ಪ್ರಯುಕ್ತ ಲೇಸರ್ ಚಿತ್ರಗಳನ್ನು ಪ್ರದರ್ಶಿಸಲಾಯಿತು. ಸಾಮಾಜಿಕ ಜಾಲತಾಣಗಳಲ್ಲಿ ಅದರ ನೇರ ಪ್ರದರ್ಶನ ನಡೆಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಂಬೈ-ಪುಣೆ ಎಕ್ಸ್ಪ್ರೆಸ್ವೇ: ಬಸ್ಗೆ ಕಾರು ಢಿಕ್ಕಿ; ಎನ್ಸಿಪಿ ಶಾಸಕ ಸಂಗ್ರಾಮ್ ಪಾರು
ಅಮರನಾಥ ಯಾತ್ರೆ ಭದ್ರತಾ ವ್ಯವಸ್ಥೆ: 2 ಮಹತ್ವದ ಸಭೆ ನಡೆಸಿದ ಅಮಿತ್ ಶಾ
2ಜಿ ಯುಗ ಭ್ರಷ್ಟಾಚಾರದ ಸಂಕೇತವಾಗಿತ್ತು, ಈಗ ಪಾರದರ್ಶಕತೆ ಇದೆ: ಪ್ರಧಾನಿ
ಜ್ಞಾನವಾಪಿ ಮಸೀದಿಯಲ್ಲಿ ಸಿಕ್ಕಿದ್ದು ಶಿವಲಿಂಗವಲ್ಲ; ಅದು ಫೌಂಟನ್: ಮಸೀದಿಯ ಆಡಳಿತ ಮಂಡಳಿ ವಾದ
ಮಾಜಿ ಕೇಂದ್ರ ಸಚಿವ ಚಿದಂಬರಂ ಆಸ್ತಿ ಮೇಲೆ ಸಿಬಿಐ ದಾಳಿ; ಪುತ್ರನ ವಿರುದ್ಧ ಹೊಸ ಕೇಸ್
MUST WATCH
ಉದ್ಘಾಟನೆಗೆ ಶಾಸಕರೇ ಬರಬೇಕಂತೆ; ಕಾಫಿನಾಡಲ್ಲಿ ರಸ್ತೆಗೆ ಬೀಗ ಹಾಕಿದ ಬಿಜೆಪಿ ಸದಸ್ಯರು!
ಜ್ಞಾನವಾಪಿ ಮಸೀದಿ ಸರ್ವೇ ಸಂಪೂರ್ಣ; ಬಾವಿಯಲ್ಲಿ ‘ಶಿವಲಿಂಗ’ಪತ್ತೆ
ದತ್ತ ಜಯಂತಿ ಸಮಯದಲ್ಲಿ ಹೋಮದ ಹೊಗೆ.. ಬೇರೆ ಸಮಯದಲ್ಲಿ ಮಾಂಸದ ಹೊಗೆ
ಶಾಲಾ ಪ್ರಾರಂಭೋತ್ಸವ ಹಿರಿಯಡ್ಕ ಸರಕಾರಿ ಪಬ್ಲಿಕ್ ಸ್ಕೂಲ್ ನಲ್ಲಿ ಮಕ್ಕಳಿಗೆ ಸಂಭ್ರಮದ ಸ್ವಾಗತ
ಶಂಕರನಾರಾಯಣ : ಶಾಲಾರಂಭದ ದಿನದಂದೇ ಸರಕಾರಿ ಶಾಲೆಯಲ್ಲಿ ಪ್ರತಿಭಟನೆ ಬಿಸಿ
ಹೊಸ ಸೇರ್ಪಡೆ
ಪ್ರತಿಯೊಂದು ಸಮುದಾಯವನ್ನು ಸಂಘಟನೆ ತಲುಪಬೇಕು: ಶಾಸಕ ಸಿದ್ದು ಸವದಿ
ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗವು ನಿಖರವಾಗಿ ಎಲ್ಲಿ ಕಂಡುಬಂದಿದೆ ?: ವಿವರ ಕೇಳಿದ ಸುಪ್ರೀಂ
ದೇವದುರ್ಗ ತಾಲೂಕಲ್ಲಿ 193 ಶಿಥಿಲಗೊಂಡ ಕಟ್ಟಡ: ಮಕ್ಕಳಿಗೆ ಬಯಲಲ್ಲೇ ಪಾಠ
ಮುಂಬೈ-ಪುಣೆ ಎಕ್ಸ್ಪ್ರೆಸ್ವೇ: ಬಸ್ಗೆ ಕಾರು ಢಿಕ್ಕಿ; ಎನ್ಸಿಪಿ ಶಾಸಕ ಸಂಗ್ರಾಮ್ ಪಾರು
ಜ್ವರ ಇದ್ದಲ್ಲಿ ರಕ್ತ ಪರೀಕ್ಷೆ ಮಾಡಿಸಿಕೊಳ್ಳಿ