800 ವಿಮಾನಗಳನ್ನು ರದ್ದುಗೊಳಿಸಿದ ಜರ್ಮನ್ ವಿಮಾನಯಾನ ಸಂಸ್ಥೆ ಲುಫ್ಥಾನ್ಸಾ
ದೆಹಲಿಯಲ್ಲಿ ಪ್ರಯಾಣಿಕರು ಮತ್ತು ಸಂಬಂಧಿಕರ ಆಕ್ರೋಶ
Team Udayavani, Sep 2, 2022, 12:24 PM IST
ಬರ್ಲಿನ್ : ಪೈಲಟ್ಗಳು ಮುಷ್ಕರ ನಡೆಸುತ್ತಿರುವ ಕಾರಣ ಜರ್ಮನ್ ವಿಮಾನಯಾನ ಸಂಸ್ಥೆ ಲುಫ್ಥಾನ್ಸಾ ಶುಕ್ರವಾರ 800 ವಿಮಾನಗಳನ್ನು ರದ್ದುಗೊಳಿಸಿದೆ.
ಪೈಲಟ್ಗಳ ಒಕ್ಕೂಟವು ಒಂದು ದಿನದ ಮುಷ್ಕರವನ್ನು ಘೋಷಿಸಿದ ನಂತರ 130,000 ಪ್ರಯಾಣಿಕರ ಮೇಲೆ ಪರಿಣಾಮ ಬೀರುತ್ತದೆ ಎಂದು ರಾಯಿಟರ್ಸ್ ವರದಿ ಮಾಡಿದೆ
ಫ್ರಾಂಕ್ಫರ್ಟ್ ಮತ್ತು ಮ್ಯೂನಿಚ್ಗೆ ತೆರಳುವ 2 ಲುಫ್ಥಾನ್ಸಾ ವಿಮಾನಗಳನ್ನು ರದ್ದುಗೊಳಿಸಿದ್ದರಿಂದ ದೆಹಲಿ ಐಜಿಐ ವಿಮಾನ ನಿಲ್ದಾಣದ ಮುಂಭಾಗದ ಮುಖ್ಯ ರಸ್ತೆಯಲ್ಲಿ150 ಜನರು ಬೆಳಗ್ಗೆ 12 ಗಂಟೆಯ ಸುಮಾರಿಗೆ ನಿರ್ಗಮನ ಗೇಟ್ ನಂ.1, ಟರ್ಮಿನಲ್ 3 ರಲ್ಲಿ ಜಮಾಯಿಸಿ, ಹಣವನ್ನು ಮರುಪಾವತಿಸಲು ಅಥವಾ ಅವರ ಸಂಬಂಧಿಕರಿಗೆ ಪರ್ಯಾಯ ವಿಮಾನಗಳನ್ನು ವ್ಯವಸ್ಥೆ ಮಾಡುವಂತೆ ಒತ್ತಾಯಿಸಿದರು.
ಜನಜಂಗುಳಿಯಿಂದ ವಾಹನ ಸಂಚಾರ ನಿಧಾನವಾಗಿದ್ದು, ಸಿಐಎಸ್ಎಫ್ ಜೊತೆಗೆ ಐಜಿಐ ವಿಮಾನ ನಿಲ್ದಾಣದ ಸಿಬಂದಿ ಪರಿಸ್ಥಿತಿಯನ್ನು ನಿಭಾಯಿಸಿದರು ಮತ್ತು ಗುಂಪನ್ನು ಚದುರಿಸಿದರು. ವಿಮಾನಯಾನ ಸಂಸ್ಥೆಗಳಿಂದ ಪ್ರಯಾಣಿಕರಿಗೆ ಪರ್ಯಾಯ ವ್ಯವಸ್ಥೆ ಮಾಡಲು ಪ್ರಯತ್ನಗಳು ನಡೆಯುತ್ತಿವೆ ಎಂದು ಐಜಿಐ ವಿಮಾನ ನಿಲ್ದಾಣ ಡಿಸಿಪಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್ ಘೋಷಣೆ ಬರೆದ ವಿದ್ಯಾರ್ಥಿ ಪಾಸ್: ಪ್ರಾಧ್ಯಾಪಕ ಅಮಾನತು!
ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್