Ghaziabad: ಬಿಜೆಪಿ ಕಾರ್ಯಕ್ರಮದ ವೇದಿಕೆಯಲ್ಲಿ ಯುವತಿಯ ಅಸಭ್ಯ ನೃತ್ಯ; ವಿಡಿಯೋ ವೈರಲ್
Team Udayavani, Dec 31, 2023, 3:10 PM IST
ಲಕ್ನೋ: ಬಿಜೆಪಿ ಪಕ್ಷದ ಕಾರ್ಯಕ್ರಮದ ವೇದಿಕೆಯಲ್ಲಿ ಯುವತಿಯೊಬ್ಬಳು ಅಸಭ್ಯವಾಗಿ ಡ್ಯಾನ್ಸ್ ಮಾಡಿರುವ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಭೋಜ್‌ಪುರ ಪ್ರದೇಶದ ಗಾಜಿಯಾಬಾದ್‌ನ ಮೋದಿನಗರ ಪ್ರದೇಶದಲ್ಲಿ ನಡೆದ ಬಿಜೆಪಿಯ ʼವಿಕಸಿತ ಭಾರತ ಸಂಕಲ್ಪ ಯಾತ್ರೆʼಯ ವೇದಿಕೆಯಲ್ಲಿ ಅಸಭ್ಯ ನೃತ್ಯದ ಪ್ರದರ್ಶನ ಆಗಿದೆ ಎನ್ನಲಾಗಿದೆ.
ಗಾಜಿಯಾಬಾದ್‌ನ ಭೋಜ್‌ಪುರದ ಶಕುರ್‌ಪುರ ಗ್ರಾಮದಲ್ಲಿ ನಡೆದ ಕಾರ್ಯಕ್ರಮದಲ್ಲಿ ಗ್ರಾಮದ ಮುಖ್ಯಸ್ಥ ಮತ್ತು ಅವರ ಪತ್ನಿ, ಸ್ಥಳೀಯ ಶಾಸಕ ಮತ್ತು ಸಂಸದ ಸತ್ಯಪಾಲ್ ಸಿಂಗ್ ವೇದಿಕೆಯಲ್ಲಿದ್ದರು.
ನೂರಾರು ಮಂದಿ ಇದ್ದ ವೇಳೆಯೇ ಯುವತಿಯ ನೃತ್ಯ ಕಾರ್ಯಕ್ರಮವಿತ್ತು. ಅಸಭ್ಯ ರೀತಿಯ ನೃತ್ಯವನ್ನು ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ಶಾಸಕ, ಸಂಸದ ಹಾಗೂ ಅತಿಥಿಗಳ ಸಮ್ಮುಖದಲ್ಲೇ ಈ ರೀತಿಯ ಅಸಭ್ಯ ನೃತ್ಯ ಪ್ರದರ್ಶನ ಮಾಡಿದ್ದಕ್ಕೆ ಅನೇಕರಿಂದ ವಿರೋಧ ವ್ಯಕ್ತವಾಗಿದೆ. ವಿಡಿಯೋ ವೈರಲ್ ಆಗುತ್ತಿದ್ದಂತೆ, ವೇದಿಕೆಯಲ್ಲಿ ಅತಿಥಿಗಳು ಇದ್ದಾಗ ಈ ನೃತ್ಯ ಆಗಿಲ್ಲ ಎಂದು ಕಾರ್ಯಕ್ರಮಕ್ಕೆ ಸಂಬಂಧಿಸಿದ ಅಧಿಕಾರಿಗಳು ಹೇಳಿದ್ದಾರೆ.
ಕಾರ್ಯಕ್ರಮ ಸರಿಯಾದ ಪ್ರೋಟೋಕಾಲ್‌ಗಳೊಂದಿಗೆ ನಡೆದಿದೆ. ಅತಿಥಿಗಳು ಹೋದ ನಂತರವೇ ನೃತ್ಯ ಪ್ರದರ್ಶನ ನಡೆದಿದೆ ಎಂದು ಅಧಿಕಾರಿಯೊಬ್ಬರು ಹೇಳಿರುವುದಾಗಿ ವರದಿಯಾಗಿದೆ.
“विकसित भारत संकल्प यात्रा”
📍गाजियाबाद, उत्तर प्रदेश pic.twitter.com/8jBHnW2cXP
— Sachin Gupta (@SachinGuptaUP) December 31, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ