ಪ್ರಿಯಕರನ ಜೊತೆ ಓಡಿ ಬಂದ ಯುವತಿ ಮೇಲೆ ಸಾಮೂಹಿಕ ದೈಹಿಕ ದೌರ್ಜನ್ಯ: ಪ್ರಿಯಕರನ ಮುಂದೆಯೇ ಕೃತ್ಯ

Team Udayavani, Jul 17, 2023, 10:25 AM IST

ಪ್ರಿಯಕರನ ಜೊತೆ ಓಡಿ ಬಂದ ಯುವತಿ ಮೇಲೆ ಸಾಮೂಹಿಕ ದೈಹಿಕ ದೌರ್ಜನ್ಯ: ಪ್ರಿಯಕರನ ಮುಂದೆಯೇ ಕೃತ್ಯ

ಜೈಪುರ: ಪ್ರಿಯಕರನ ಮುಂದೆಯೇ ಅಪ್ರಾಪ್ತೆ ಯುವತಿಯ ಮೇಲೆ ಸಾಮೂಹಿಕವಾಗಿ ದೈಹಿಕ ದೌರ್ಜನ್ಯವಸೆಗಿದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.

ರಾಜಸ್ಥಾನದ ಜೋಧ್‌ ಪುರದಲ್ಲಿ ಈ ಘಟನೆ ನಡೆದಿದ್ದು, 17 ವರ್ಷದ ಯುವತಿ ತನ್ನ ಪ್ರಿಯಕರನೊಂದಿಗೆ ಮನೆಬಿಟ್ಟು ಓಡಿ ಬಂದಿದ್ದಾಳೆ. ಈ ವೇಳೆ ಸಹಾಯ ಮಾಡುವ ನೆಪದಲ್ಲಿ ಮೂವರು ಕಾಲೇಜು ವಿದ್ಯಾರ್ಥಿಗಳು ಸಾಮೂಹಿಕವಾಗಿ ದೈಹಿಕ ದೌರ್ಜನ್ಯವೆಸಗಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಘಟನೆ ಹಿನ್ನೆಲೆ: ಶನಿವಾರ(ಜು.15 ರಂದು) ಅಜ್ಮೀರ್‌ನಿಂದ ತನ್ನ ಪ್ರಿಯಕರನ ಜೊತೆ 17 ವರ್ಷದ ಅಪ್ರಾಪ್ತೆ ಓಡಿ ಬಂದಿದ್ದಾಳೆ. ಅಲ್ಲಿಂದ ಬಸ್ಸೊಂದನ್ನು ಹಿಡಿದು ರಾತ್ರಿ 10:30 ರ ಸಮಯಕ್ಕೆ ಜೋಧ್‌ ಪುರಕ್ಕೆ ಬಂದು ತಲುಪಿದ್ದಾರೆ. ಆದಾದ ಬಳಿಕ ಗೆಸ್ಟ್‌ ಹೌಸ್‌ ವೊಂದಕ್ಕೆ ತಲುಪಿದ್ದಾರೆ. ಆದರೆ ಗೆಸ್ಟ್‌ ಹೌಸ್‌ ಸಿಬ್ಬಂದಿಯೊಬ್ಬ ಯುವತಿ ಜೊತೆ ಅಸಭ್ಯವಾಗಿ ವರ್ತಿಸಿದ ಕಾರಣ, ಯುವ ಜೋಡಿ ಅಲ್ಲಿಂದ ಹೊರ ಬಂದಿದೆ. ಇದಾದ ನಂತರ ಇಬ್ಬರು ಪೌಟಾ ಚೌರಾಹಾಗೆ ಹೋಗಿದ್ದಾರೆ. ಅಲ್ಲಿ ಮೂವರು ಆರೋಪಿಗಳಾದ ಸಮಂದರ್ ಸಿಂಗ್ ಭಾಟಿ, ಧರ್ಮಪಾಲ್ ಸಿಂಗ್ ಮತ್ತು ಭಟ್ಟಮ್ ಸಿಂಗ್ (20-22 ವರ್ಷ) ಅವರನ್ನು ಅನಿರೀಕ್ಷಿತವಾಗಿ  ಭೇಟಿ ಆಗಿದ್ದಾರೆ. ಆರೋಪಿಗಳು ಮೊದಲು ಜೋಡಿಗೆ ಅನ್ನ, ಆಹಾರವನ್ನು ನೀಡಿದೆ. ಆ ಬಳಿಕ ಅವರು ಓಡಿ ಬಂದಿರುವ ಬಗ್ಗೆ ಕೇಳಿದ್ದಾರೆ. ಸಹಾಯ ಮಾಡುತ್ತೇವೆ ಎಂದು, ಭಾನುವಾರ ಮುಂಜಾನೆ 4 ಗಂಟೆಯ ವೇಳೆಗೆ (ಜು.16 ರಂದು) ರೈಲ್ವೇ ಸ್ಟೇಷನ್‌ ಗೆ ಕರೆತರುವ ನೆಪದಲ್ಲಿ ಜೈ ನಾರಾಯಣ ವ್ಯಾಸ್ ವಿಶ್ವವಿದ್ಯಾಲಯದ ಹಾಕಿ ಗ್ರೌಂಡ್‌ ಗೆ ಇಬ್ಬರನ್ನು ಕರೆ ತಂದಿದ್ದಾರೆ. ನಂತರ ಪ್ರಿಯಕರನ ಮೇಲೆ ಹಲ್ಲೆಗೈದು ಆತನನ್ನು ಕಟ್ಟಿ ಹಾಕಿ, ಯುವತಿಯ ಮೇಲೆ ಸಾಮೂಹಿಕವಾಗಿ ದೈಹಿಕ ದೌರ್ಜನ್ಯವೆಸಗಿದ್ದಾರೆ. ಮುಂಜಾನೆ ವಾಕಿಂಗ್‌ ಮಾಡುವವರು ಬಂದ ವೇಳೆ ಅಲ್ಲಿಂದ ಆರೋಪಿಗಳು ಪರಾರಿಯಾಗಿದ್ದಾರೆ. ವಾಕಿಂಗ್‌ ಹೋಗುವವರು ಘಟನೆ ಬಗ್ಗೆ ನಮಗೆ ಮಾಹಿತಿ ನೀಡಿದ್ದಾರೆ ಎಂದು ಉಪ ಪೊಲೀಸ್ ಆಯುಕ್ತ (ಪೂರ್ವ) ಅಮೃತಾ ದುಹಾನ್ ಹೇಳಿದ್ದಾರೆ.

ತಕ್ಷಣ ಪೊಲೀಸರು ಕಾರ್ಯಪ್ರವೃತ್ತರಾಗಿ ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ. ಶ್ವಾನದಳ ಮತ್ತು ವಿಧಿ ವಿಜ್ಞಾನ ಪ್ರಯೋಗಾಲಯ (ಎಫ್‌ಎಸ್‌ಎಲ್) ತಂಡವೂ ಸ್ಥಳಕ್ಕೆ ಬಂದು ತನಿಖೆ ಆರಂಭಿಸಿದೆ.

ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಆರೋಪಿಗಳು ಜೋಧಪುರದ ರತನಾಡ ಸಮೀಪದ ಗಣೇಶಪುರದ ಮನೆಯೊಂದರಲ್ಲಿ ಪತ್ತೆಯಾಗಿದ್ದಾರೆ. ಪೊಲೀಸರನ್ನು ಕಂಡ ಕೂಡಲೇ ಇಬ್ಬರು ಆರೋಪಿಗಳು ಪರಾರಿಯಾಗಲು ಯತ್ನಿಸಿ ಕಾಲಿಗೆ ಗಾಯ ಮಾಡಿಕೊಂಡಿದ್ದಾರೆ. ಮೂವರನ್ನು ಬಂಧಿಸಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಆರೋಪಿಗಳಲ್ಲಿ ಸಮಂದರ್ ಸಿಂಗ್ ಜೆಎನ್‌ವಿಯುನಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿ, ಧರ್ಮ್ ಪಾಲ್ ಸಿಂಗ್ ಜೆಎನ್‌ವಿಯುನಲ್ಲಿ ಸ್ನಾತಕೋತ್ತರ ವಿದ್ಯಾರ್ಥಿ ಮತ್ತು ಭಟ್ಟಮ್ ಸಿಂಗ್ ಅಜ್ಮೀರ್‌ನಿಂದ ಬಿಎಡ್ ವ್ಯಾಸಂಗ ಮಾಡುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದರೊಂದಿಗೆ ಪೊಲೀಸರು ಗೆಸ್ಟ್‌ ಹೌಸ್‌ ಸಿಬ್ಬಂದಿ ಸುರೇಶ್ ಜಾಟ್ ಅವರನ್ನು ಕೂಡ ಬಂಧಿಸಿದ್ದಾರೆ ಎಂದು ವರದಿ ತಿಳಿಸಿದೆ.

ಆರೋಪಿಗಳು ವಿದ್ಯಾರ್ಥಿ ಸಂಘದ ಚುನಾವಣೆಗೆ ಆರ್‌ಎಸ್‌ಎಸ್‌ನ ವಿದ್ಯಾರ್ಥಿ ವಿಭಾಗ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಟಿಕೆಟ್‌ಗಾಗಿ ವಿದ್ಯಾರ್ಥಿ ನಾಯಕನಿಗೆ ಪ್ರಚಾರ ನಡೆಸುತ್ತಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಆದರೆ ಈ ಆರೋಪಿಗಳು ನಮ್ಮ ಸಂಘಟನೆಯ ಭಾಗವಲ್ಲ ಎಂದು ಎಬಿವಿಪಿ ಹೇಳಿ ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದೆ.

ಟಾಪ್ ನ್ಯೂಸ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಉತ್ತರದವರು ಸಿಎಂ ಆಗಲು ಬಿಜೆಪಿ ಗೆಲ್ಲಿಸಿ; ಬಸನಗೌಡ ಪಾಟೀಲ

ಉತ್ತರದವರು ಸಿಎಂ ಆಗಲು ಬಿಜೆಪಿ ಗೆಲ್ಲಿಸಿ; ಬಸನಗೌಡ ಪಾಟೀಲ

1-sirsi

Modi ಬಂದಿದ್ದು ಕಾಂಗ್ರೆಸ್‌ಗೆ ಅಡ್ಡ ಪರಿಣಾಮ ಏನಿಲ್ಲ: ಭೀಮಣ್ಣ ನಾಯ್ಕ

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 2 ರಂದು ಕುಬೇರ ಲಕ್ಷ್ಮಿ ಪ್ರತಿಷ್ಠಾ ವರ್ಧಂತಿ

ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 2 ರಂದು ಕುಬೇರ ಲಕ್ಷ್ಮಿ ಪ್ರತಿಷ್ಠಾ ವರ್ಧಂತಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.