ಅಕ್ರಮದಲ್ಲಿ ತೊಡಗಿರುವ ಸಚಿವರ ಹೆಸರು ಬಹಿರಂಗಪಡಿಸಿ : ಗೋವಾ ಮುಖ್ಯಮಂತ್ರಿಗೆ ಚೋಡಂಕರ್ ಆಗ್ರಹ

Team Udayavani, Sep 4, 2022, 2:09 PM IST

ಅಕ್ರಮದಲ್ಲಿ ತೊಡಗಿರುವ ಸಚಿವರ ಹೆಸರು ಬಹಿರಂಗಪಡಿಸಿ : ಗೋವಾ ಮುಖ್ಯಮಂತ್ರಿಗೆ ಚೋಡಂಕರ್ ಆಗ್ರಹ

ಪಣಜಿ: ಗೋವಾದ ಸಾಲ್ವದೋರ್ ನಲ್ಲಿ ಅಕ್ರಮವಾಗಿ ಜಮೀನು ಕಬಳಿಸಿದ ಆ ಸಚಿವರ ಹೆಸರನ್ನು ಬಹಿರಂಗ ಪಡಿಸಿ ಸಚಿವ ಸಂಪುಟದಿಂದ ಅವರನ್ನು ವಜಾಗೊಳಿಸಬೇಕು ಎಂದು ಗೋವಾ ಕಾಂಗ್ರೇಸ್ ಮಾಜಿ ಪ್ರದೇಶಾಧ್ಯಕ್ಷ ಗಿರೀಶ್ ಚೋಡಂಕರ್ ಗೋವಾ ಮುಖ್ಯಮಂತ್ರಿ ಪ್ರಮೋದ ಸಾವಂತ್ ರವರನ್ನು ಅಗ್ರಹಿಸಿದ್ದಾರೆ.

ಪಣಜಿಯಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು- ಅಕ್ರಮದಲ್ಲಿ ತೊಡಗಿರುವ ಈ ಸಚಿವರ ವಿರುದ್ಧ ಮುಖ್ಯಮಂತ್ರಿಗಳು ಕ್ರಮ ಕೈಗೊಳ್ಳಲಿ, ಇಲ್ಲವೇ ಸಂಪುಟದಲ್ಲಿ ಯಾರೂ ಭೂಮಿ ಕಬಳಿಕೆ ಮಾಡಿಲ್ಲ ಎಂದು ಘೋಷಣೆ ಮಾಡಲಿ ಎಂದು ಚೋಡಂಕರ್ ಸವಾಲು ಹಾಕಿದರು.

2022ರ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಾಜಿ ಸಚಿವ ಮಿಲಿಂದ್ ನಾಯ್ಕ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಗಿರೀಶ್ ಚೋಡಂಕರ್ ಅವರು ಹಂತ ಹಂತವಾಗಿ ಪ್ರಕರಣದ ಮಾಹಿತಿಯನ್ನು ಬಹಿರಂಗಪಡಿಸಿದ್ದರು. ಕೊನೆಗೆ ನಾಯ್ಕ್ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ರಾಜ್ಯದಲ್ಲಿ ನಕಲಿ ದಾಖಲೆ ಸೃಷ್ಟಿಸಿ ಭೂಕಬಳಿಕೆ ಮಾಡಿರುವ ಪ್ರಕರಣಗಳ ತನಿಖೆ ಎಸ್‍ಐಟಿ ಮೂಲಕ ನಡೆಯುತ್ತಿದೆ. ಪ್ರಕರಣವನ್ನು ಈಗಾಗಲೇ ವಿಜಿಲೆನ್ಸ್ ಇಲಾಖೆಗೆ ಹಸ್ತಾಂತರಿಸಲಾಗಿದ್ದು, ಅವರು ಅದನ್ನು ಎಸ್‍ಐಟಿಗೆ ಹಸ್ತಾಂತರಿಸಬೇಕು. ಆದ್ದರಿಂದ ಇತರೆ ಪ್ರಕರಣಗಳಿಗಿಂತ ಈ ಪ್ರಕರಣವನ್ನು ಆದ್ಯತೆಯಾಗಿ ಪರಿಗಣಿಸಿ ಈ ಸಚಿವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಯಾಕೆಂದರೆ ಈ ಸಚಿವರೇ ಇಂತಹ ಹಲವು ಪ್ರಕರಣಗಳ ಮಾಸ್ಟರ್ ಮೈಂಡ್ ಎಂದು ಗಿರೀಶ್ ಚೋಡಣಕರ್ ಆರೋಪಿಸಿದರು.

ಈ ಬಗ್ಗೆ ಇನ್ನೂ ಯಾವುದೇ ಕ್ರಮ ಕೈಗೊಂಡಿಲ್ಲ. ಮುಂಬೈನ ಉದ್ಯಮಿಗಳು ಗೋಮಾಂತಕೀಯರ ಭೂಮಿಯನ್ನು ಕಬಳಿಸಿ ಈ ಜಾಗದಲ್ಲಿ ಕಟ್ಟಡ ನಿರ್ಮಾಣ ಆರಂಭಿಸಿದ್ದಾರೆ ಎಂದು ಚೋಡಂಕರ್ ಆರೋಪಿಸಿದರು. ಈ ಪ್ರಕರಣದಲ್ಲಿ ಕೂಡಲೇ ಕ್ರಮ ಕೈಗೊಳ್ಳಬೇಕು, ಇಲ್ಲವಾದಲ್ಲಿ ಎಸ್‍ಐಟಿಗೆ ಹೊಸದಾಗಿ ದೂರು ದಾಖಲಿಸಿ ಶೀಘ್ರವೇ ಮತ್ತೊಂದು ಪ್ರಕರಣವನ್ನು ಬಹಿರಂಗಪಡಿಸುತ್ತೇವೆ ಎಂದು ಚೋಡಂಕರ್ ಹೇಳಿದರು.

ಟಾಪ್ ನ್ಯೂಸ್

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.