Udayavni Special

ಗೋವಾ ಬಿಜೆಪಿಗೆ ಬಿಗ್ ಶಾಕ್ : ಎನ್‍ಡಿಎಯಿಂದ ಹೊರ ಬಂದ ಜಿಎಫ್‍ಪಿ

ಜಿಎಫ್‍ಪಿ ಅಧ್ಯಕ್ಷ ವಿಜಯ್ ಸರ್ದೇಸಾಯಿ ಅವರು, ಈ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದಿದ್ದಾರೆ.

Team Udayavani, Apr 13, 2021, 6:13 PM IST

sdfvsds

ಪಣಜಿ : ಗೋವಾ ರಾಜ್ಯ ಬಿಜೆಪಿಗೆ ಬಿಗ್ ಶಾಕ್ ಎದುರಾಗಿದೆ. ಎನ್‍ಡಿಎ ಕೂಟದಿಂದ ಗೋವಾ ಫಾರ್ವರ್ಡ್ ಪಾರ್ಟಿ ಹೊರಕ್ಕೆ ಬಂದಿದೆ. ಬಿಜೆಪಿ ಮೈತ್ರಿಕೂಟ ‘ಎನ್‍ಡಿಎ’ದಿಂದ ಗೋವಾ ಫಾರ್ವರ್ಡ್ ಪಾರ್ಟಿ ಸಖ್ಯ ಕಡಿದುಕೊಂಡಿದೆ. ಇಂದು (ಏ.13) ಅಧಿಕೃತವಾಗಿ ಈ ಬಗ್ಗೆ ಘೋಷಿಸಿರುವ ಜಿಎಫ್‍ಪಿ, ತನ್ನ ಈ ನಿಲುವಿಗೆ ಬಿಜೆಪಿಯ ಗೋವಾ ವಿರೋಧಿ ನೀತಿಯೇ ಪ್ರಮುಖ ಕಾರಣ ಎಂದು ಹೇಳಿದೆ.

40 ಸಂಖ್ಯಾಬಲದ ಗೋವಾ ವಿಧಾನಸಭೆಯಲ್ಲಿ ಗೋವಾ ಫಾರ್ವರ್ಡ್ ಪಕ್ಷ ಮೂರು ಸ್ಥಾನಗಳನ್ನು ಹೊಂದಿದೆ. 2017 ರಲ್ಲಿ ಈ ಪಕ್ಷ ಎನ್‍ಡಿಎಗೆ ತನ್ನ ಬೆಂಬಲವನ್ನು ಸೂಚಿಸಿತ್ತು. ಅಂದಿನ ಬಿಜೆಪಿ ನಾಯಕ ದಿ.ಮನೋಹರ್ ಪರಿಕ್ಕರ್ ಅವರನ್ನು ಗೋವಾ ಮುಖ್ಯಮಂತ್ರಿ ಮಾಡುವ ನಿಟ್ಟಿನಲ್ಲಿ ಬೆಂಬಲ ಸೂಚಿಸಿತ್ತು. 2019 ರಲ್ಲಿ ಮನೋಹರ್ ಪರಿಕ್ಕರ್ ನಿಧನರಾದ ಬಳಿಕ ಜಿಎಫ್‍ಪಿ ಹಾಗೂ ಬಿಜೆಪಿ ಸಂಬಂಧದ ನಡುವೆ ಮೈಮನಸ್ಸು ಮೂಡಿತು. ಮುಖ್ಯಮಂತ್ರಿ ಪ್ರಮೋದ ಸಾವಂತ್ ಸಂಪುಟದಲ್ಲಿ ಜಿಎಫ್‍ಪಿ ನಾಯಕರನ್ನು ಕೈಬಿಟ್ಟಿದ್ದು ಉಭಯ ಪಕ್ಷಗಳ ನಡುವಿನ ಸಂಬಂಧಕ್ಕೆ ಹುಳಿ ಹಿಂಡಿತ್ತು.

ಇದೀಗ ಬಿಜೆಪಿ ಗೆಳೆತನಕ್ಕೆ ಗುಡ್ ಬೈ ಹೇಳಲು ನಿರ್ಧರಿಸಿರುವ ಗೋವಾ ಫಾರ್ವರ್ಡ್ ಪಕ್ಷದ ನಾಯಕರು ಇಂದು ಪಣಜಿಯಲ್ಲಿ ಸಭೆ ಸೇರಿ ಒಮ್ಮತ ತೀರ್ಮಾನಕ್ಕೆ ಬಂದಿದ್ದಾರೆ. ಸಭೆಯ ನಂತರ ತಮ್ಮ ನಿರ್ಧಾರವನ್ನು ಪ್ರಕಟಿಸಿರುವ ಜಿಎಫ್‍ಪಿ ಅಧ್ಯಕ್ಷ ವಿಜಯ್ ಸರ್ದೇಸಾಯಿ ಅವರು, ಈ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರಿದಿದ್ದೇವೆ ಎಂದಿದ್ದಾರೆ.

ಎನ್‍ಡಿಎದಿಂದ ಹೊರ ಬರುವ ಬಗ್ಗೆ ಅಮಿತ್ ಶಾ ಅವರಿಗೆ ಇಂದು ಪತ್ರ ಬರೆದಿದ್ದೇವೆ. 2019ರ ಜುಲೈನಲ್ಲಿಯೇ ನಮ್ಮ ಹಾಗೂ ಬಿಜೆಪಿಯ ಸಂಬಂಧ ಮುರಿದು ಬಿದ್ದಿತ್ತು. ಕಳೆದ ಎರಡು ವರ್ಷಗಳಿಂದ ಬಿಜೆಪಿ ಗೋವಾ ವಿರೋಧಿ ನೀತಿ ಅನುಸರಿಸಿಕೊಂಡು ಬರುತ್ತಿದೆ ಎಂದು ಅವರು ಹೇಳಿದ್ದಾರೆ.

ಇನ್ನು 2022ರಲ್ಲಿ ಗೋವಾ ವಿಧಾನಸಭೆಗೆ ಚುನಾವಣೆ ನಡೆಯಲಿದೆ. ಮತ್ತೊಮ್ಮೆ ಗೋವಾ ಗದ್ದುಗೆ ಏರಲು ಯೋಜನೆ ರೂಪಿಸುತ್ತಿರುವ ಬಿಜೆಪಿಗೆ ಜಿಎಫ್‍ಪಿ ನಡೆ ಆಘಾತವನ್ನುಂಟು ಮಾಡಿದಂತಾಗಿದೆ.

ಟಾಪ್ ನ್ಯೂಸ್

DXSvcad

ಶವ ಹಸ್ತಾಂತರಿಸುವಾಗ ಅದಲು-ಬದಲು!

Udaya Garudachar Statement On war Room and Bed Blocking

ಬಿಬಿಎಂಪಿ ವಾರ್ ರೂಂನಲ್ಲಿ ಒಂದು ಕೋಮಿನ ವಿರುದ್ಧ ದುರ್ವತನೆ ತೋರಿಲ್ಲ: ಉದಯ್ ಗರುಡಾಚಾರ್

covid effect

ಜಿಲ್ಲೆಯಲ್ಲಿ 1,550ಕ್ಕೂ ಹೆಚ್ಚು ಜನ ಘರ್‌ ವಾಪ್ಸಿ

battele-ground

ಹೊಸ ಅವತಾರದಲ್ಲಿ ಲಗ್ಗೆಯಿಡುತ್ತಿದೆ ಪಬ್ ಜಿ: ಗೇಮ್ ಆಡಲು ಈ ನಿಯಮಗಳನ್ನು ಪಾಲಿಸಲೇಬೇಕು !

ಲಾಕ್‌ಡೌನ್‌ ಮಾಡಿದರೆ ಇಂದಿರಾ ಕ್ಯಾಂಟೀನ್‌ನಲ್ಲಿ ಉಚಿತ ಆಹಾರ ಕೊಡಿ : ಉಗ್ರಪ್ಪ ಆಗ್ರಹ

ಲಾಕ್‌ಡೌನ್‌ ಮಾಡಿದರೆ ಇಂದಿರಾ ಕ್ಯಾಂಟೀನ್‌ನಲ್ಲಿ ಉಚಿತ ಆಹಾರ ಕೊಡಿ : ಉಗ್ರಪ್ಪ ಆಗ್ರಹ

ಹುಬ್ಬಳ್ಳಿ: ಮೃತ ದೇಹ ಒಯ್ಯುತ್ತಿದ್ದಾಗ ವಿದ್ಯುತ್ ತಂತಿ ತಗುಲಿ ಓರ್ವ ಸಾವು

ಹುಬ್ಬಳ್ಳಿ: ಮೃತ ದೇಹ ಒಯ್ಯುತ್ತಿದ್ದಾಗ ವಿದ್ಯುತ್ ತಂತಿ ತಗುಲಿ ಓರ್ವ ಸಾವು

COVID-19: Why India is Pfizer’s shot at redemption

ಜಗತ್ತಿನ ದುಬಾರಿ  ಕೋವಿಡ್ ಲಸಿಕೆ  ಫೈಜರ್..!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೇಶಕ್ಕೆ ಸಿಗಲಿದೆ ಹೆಚ್ಚುವರಿ 50 ಲಕ್ಷ ಡೋಸ್‌ ಕೊವಿಶೀಲ್ಡ್‌ ಲಸಿಕೆ

ದೇಶಕ್ಕೆ ಸಿಗಲಿದೆ ಹೆಚ್ಚುವರಿ 50 ಲಕ್ಷ ಡೋಸ್‌ ಕೊವಿಶೀಲ್ಡ್‌ ಲಸಿಕೆ

ಗೋವಾದಲ್ಲಿ 15ದಿನ ಕರ್ಫ್ಯೂ ಜಾರಿ, ಪ್ರವಾಸಿಗರಿಗೆ ಕೋವಿಡ್ ನೆಗೆಟಿವ್ ವರದಿ ಕಡ್ಡಾಯ

ಗೋವಾದಲ್ಲಿ 15ದಿನ ಕರ್ಫ್ಯೂ ಜಾರಿ, ಪ್ರವಾಸಿಗರಿಗೆ ಕೋವಿಡ್ ನೆಗೆಟಿವ್ ವರದಿ ಕಡ್ಡಾಯ

ಒಂದು ವೇಳೆ ಕಠಿಣ ಕ್ರಮ ತೆಗೆದುಕೊಂಡರೆ 3ನೇ ಕೋವಿಡ್ ಅಲೆಯನ್ನು ತಡೆಗಟ್ಟಬಹುದು: ಕೇಂದ್ರ

ಒಂದು ವೇಳೆ ಕಠಿಣ ಕ್ರಮ ತೆಗೆದುಕೊಂಡರೆ 3ನೇ ಕೋವಿಡ್ ಅಲೆಯನ್ನು ತಡೆಗಟ್ಟಬಹುದು: ಕೇಂದ್ರ

Goa new lokayuktha

ಗೋವಾ ನೂತನ ಲೋಕಾಯುಕ್ತರಾಗಿ ನಿವೃತ್ತ ನ್ಯಾಯಮೂರ್ತಿ ಅಂಬಾದಾಸ್ ಜೋಶಿ ಪ್ರಮಾಣವಚನ ಸ್ವೀಕರ

underworld don chhota rajan not died due to covid 19 : AIMS

ಮಾಜಿ ಭೂಗತ ಪಾತಕಿ ಛೋಟಾ ರಾಜನ್ ಮೃತ ಪಟ್ಟಿಲ್ಲ : ಏಮ್ಸ್

MUST WATCH

udayavani youtube

ನಿಮ್ಮ ಜಿಲ್ಲೆಗೆ ಎಷ್ಟು ಕೋಟಾ ಬೇಕು ಅದನ್ನ ಸಿಎಂ ಬಳಿ ತಿಳಿಸಿ : ಸಂಸದ ಪ್ರತಾಪ್ ಸಿಂಹ

udayavani youtube

ಮಂಗಳೂರಿನ ಪದವಿನಂಗಡಿಯಲ್ಲಿ ಬೈಕ್ ಗಳ ನಡುವೆ ಅಪಘಾತಭೀಕರ ಅಪಘಾತದ ದೃಶ್ಯ

udayavani youtube

ಹೋಂ ಐಸೋಲೇಷನ್ ಸಂದರ್ಭ ನಾವು ಹೇಗಿರಬೇಕು ?

udayavani youtube

ಗಾರ್ಮೆಂಟ್ ಆಸ್ಪತ್ರೆಗೆ ಹೋದ್ರೆ ಸಾಯುತ್ತಾರೆ ; ಡಿಕೆ ಶಿವಕುಮಾರ್‌ ಸರ್ಕಾರದ ವಿರುದ್ಧ ಕಿಡಿ

udayavani youtube

Junior NTR ಮಾಸ್ಕ್ ಧರಿಸಿ, ಸ್ಯಾನಿಟೈಸರ್ ಬಳಸಿ ಅಂತ ಕನ್ನಡದಲ್ಲಿ ಹೇಳಿದ್ದಾರೆ.

ಹೊಸ ಸೇರ್ಪಡೆ

7-18

ಬೆಡ್‌-ಆಕ್ಸಿಜನ್‌ ಪೂರೈಕೆಗೆ ಕ್ರಮ ಕೈಗೊಳ್ಳಿ

7-17

ಎಲ್ಲರೂ ಒಟ್ಟಾಗಿ ಶ್ರಮಿಸಿ ಕೊರೊನಾ ತಡೆಯೋಣ

7-16

ಸೋಂಕಿತರಿಗೆ ಧೈರ್ಯ ತುಂಬಿದ ಶಾಸಕ ಲಮಾಣಿ

DXSvcad

ಶವ ಹಸ್ತಾಂತರಿಸುವಾಗ ಅದಲು-ಬದಲು!

7-15

ಕೊರೊನಾ ಸೋಂಕಿತರಿಗೆ ಸೌಲಭ್ಯ ಕಲ್ಪಿಸಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.