ಸ್ಥಳೀಯ ಯುವಕರಿಗೆ ಉದ್ಯೋಗಾವಕಾಶ ಹಿನ್ನೆಲೆ: ಸ್ವಯಂಪೂರ್ಣ ಯುವಾ ಕಾರ್ಯಕ್ರಮ
Team Udayavani, Oct 26, 2021, 4:42 PM IST
ಪಣಜಿ: ಸ್ಥಳೀಯ ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸಿಕೊಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರದ ಕಾರ್ಮಿಕ ಇಲಾಖೆಯ ವತಿಯಿಂದ ಅಕ್ಟೋಬರ್ 27 ರಂದು ಮಾಪ್ಸಾದಲ್ಲಿ ಮತ್ತು ಅಕ್ಟೋಬರ್ 30 ರಂದು ಪೊಂಡಾದಲ್ಲಿ ಸ್ವಯಂಪೂರ್ಣ ಯುವಾ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ದೇಶದ 60 ಕ್ಕೂ ಹೆಚ್ಚು ಕಂಪನಿಗಳು ಪಾಲ್ಗೊಳ್ಳಲಿದೆ ಎಂದು ಮುಖ್ಯಮಂತ್ರಿ ಪ್ರಮೋದ ಸಾವಂತ್ ಮಾಹಿತಿ ನೀಡಿದರು.
ಪಣಜಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು- ಈ ಹಿಂದೆ ಕೂಡ ರಾಜ್ಯದ ಸಾಖಳಿ, ತಾಳಗಾಂವನಲ್ಲಿ ಇಂತಹ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಇದೀಗ ಈ ಕಾರ್ಯಕ್ರಮದಲ್ಲಿ ಕೆಲ ಬದಲಾವಣೆಯನ್ನು ತರಲಾಗಿದ್ದು ಅನೇಕ ಖಾಸಗಿ ಉದ್ಯೋಗ, ಸಂಸ್ಥೆಗಳನ್ನು ಕರೆಯಿಸಲಾಗುತ್ತಿದೆ. ಈ ಕಾರ್ಯಕ್ರಮದಲ್ಲಿ 1000 ಕ್ಕೂ ಹೆಚ್ಚು ಜನರಿಗೆ ಉದ್ಯೋಗಾವಕಾಶ ಲಭಿಸಲಿದೆ. ಇದಕ್ಕಾಗಿ ಸರ್ಕಾರಿ ಪೋರ್ಟಲ್ನಲ್ಲಿ ಹೆಸರು ನೋಂದಾಯಿಸಬೇಕು ಅಥವಾ ಅಂದು ಬೆಳಿಗ್ಗೆ ಖುದ್ದಾಗಿ ತಾವೇ ಬಂದು ಹೆಸರು ನೋಂದಾಯಿಸಿಕೊಳ್ಳಬಹುದಾಗಿದೆ ಎಂದು ಮುಖ್ಯಮಂತ್ರಿ ಪ್ರಮೋದ ಸಾವಂತ್ ಮಾಹಿತಿ ನೀಡಿದರು.
ಇದನ್ನೂ ಓದಿ:ಚಿಗ್ಗಾವಿ ಗ್ರಾಮದಲ್ಲಿ ಹಣ-ಆಸ್ತಿಗಾಗಿ ತಂದೆಯಿಂದಲೇ ಮಗನಿಗೆ ಹಿಂಸೆ
ರಾಜ್ಯ ಸರ್ಕಾರದ ವತಿಯಿಂದ ಪ್ರಸಕ್ತ ವರ್ಷ 10,000 ಜನ ಯುವಕರಿಗೆ ಉದ್ಯೋಗ ಕಲ್ಪಿಸಿಕೊಡುವ ಭರವಸೆ ನೀಡಲಾಗಿತ್ತು. ಈ ಪೈಕಿ ಇದುವರೆಗೂ 8000 ನೌಕರಿಯ ಜಾಹೀರಾತು ನೀಡಲಾಗಿದ್ದು, 1000 ಕ್ಕೂ ಹೆಚ್ಚು ನೌಕರಿಯ ಎಲ್ಲ ಪ್ರಕ್ರಿಯೆಗಳನ್ನು ಡಿಸೆಂಬರ್ 19 ರ ಒಳಗೆ ಪೂರ್ಣಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಪ್ರಮೋದ ಸಾವಂತ್ ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
MUST WATCH
ಹೊಸ ಸೇರ್ಪಡೆ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ