ಬ್ಯಾಟ್ ನಿಂದ ತಲೆಗೆ ಹೊಡೆದು ಸಹೋದರಿಯನ್ನು ಕೊಲೆಗೈದ ಸಹೋದರ: ಆರೋಪಿಯನ್ನು ಬಂಧಿಸಿದ ಪೋಲಿಸರು


Team Udayavani, Jun 12, 2021, 6:04 PM IST

ಬ್ಯಾಟ್ ನಿಂದ ತಲೆಗೆ ಹೊಡೆದು ಸಹೋದರಿಯನ್ನು ಕೊಲೆಗೈದ ಸಹೋದರ: ಆರೋಪಿಯನ್ನು ಬಂಧಿಸಿದ ಪೋಲಿಸರು

ಪಣಜಿ: ಸಹೋದರನೊಬ್ಬ ತನ್ನ ಸಹೋದರಿಯ ತಲೆಗೆ ಕ್ರಿಕೆಟ್ ಬ್ಯಾಟ್‍ನಿಂದ ಹಲ್ಲೆ ನಡೆಸಿ ಕೊಲೆಗೈದ ಪ್ರಕರಣ ಶುಕ್ರವಾರ ಸಂಜೆ ಬೆಳಕಿಗೆ ಬಂದ ನಂತರ ಗೋವಾ ಹಣಜುಣಾ ಪೋಲಿಸರು ಕರ್ನಾಟಕ ಪೋಲಿಸರ ಸಹಕಾರದೊಂದಿಗೆ ಕರ್ನಾಟಕದ ಗದಗದಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ.

ಪೋಲಿಸರಿಂದ ಲಭ್ಯವಾಗಿರುವ ಮಾಹಿತಿಯ ಅನುಸಾರ- ಆರೋಪಿ ಶೇಖಪ್ಪ ಪರಸಪ್ಪ ಲಮಾಣಿ (20)  ಆರೋಪಿಯನ್ನು ಕರ್ನಾಟಕದಲ್ಲಿ ಪೋಲಿಸರು ಬಂಧಿಸಿದ್ದಾರೆ.

ಇದನ್ನೂ ಓದಿ: ಬಿಜೆಪಿಯವರು ವ್ಯಾಪಾರಸ್ಥರು; ಕೇಂದ್ರ ಸರ್ಕಾರ ಜನರ ರಕ್ತ ಹೀರುವ ಕಾರ್ಯ ಮಾಡುತ್ತಿದೆ- ಉಮಾಶ್ರೀ

ಆರೋಪಿ  ಹಾಗೂ ಸಹೋದರಿ ಅನುಸೂಯಾ ಲಮಾಣಿ (26) ಮತ್ತು  ತಾಯಿ ಇವರು ಗೋವಾದ ಹಣಜುಣ ಪರಿಸರಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು. ಕಳೆದ ಬುಧವಾರ ರಾತ್ರಿ ಸಹೋದರ ಸಹೋದರಿ ಇವರ ನಡುವೆ ಹಣದ ವಿಷಯಕ್ಕೆ ಸಂಬಂಧಿಸಿದಂತೆ ಜಗಳ ಆರಂಭವಾಯಿತು. ಸಿಟ್ಟಿನಲ್ಲಿ ಸಹೋದರನು ಸಹೋದರಿಯ ತಲೆಗೆ ಬ್ಯಾಟ್‍ನಿಂದ ಹಲ್ಲೆ ಮಾಡಿದ ನಂತರ ಸಹೋದರಿಯ ಮೃತದೇಹವನ್ನು ರೂಂನಲ್ಲಿ ತುಂಬಿಟ್ಟು ಬಾಗಿಲಿಗೆ ಬೀಗ ಹಾಕಿ ಕರ್ನಾಟಕದ ಗದಗಕ್ಕೆ ಪಲಾಯನಗೈದಿದ್ದ. ಕಳೆದ ಕೆಲ ದಿನಗಳ ಹಿಂದಷ್ಟೇ ತನ್ನ ತಾಯಿಯನ್ನು ಗದಗಕ್ಕೆ ಕಳುಹಿಸಿಬಂದಿದ್ದ. ಇದರಿಂದಾಗಿ ಗೋವಾದ ಮನೆಯಲ್ಲಿ ಇವರಿಬ್ಬರೇ ಇದ್ದರು.

ಸಹೋದರಿಯು ಅಂಗಡಿಯೊಂದಕ್ಕೆ ಕೆಲಸಕ್ಕೆ ತೆರಳುತ್ತಿದ್ದಳು. ಇದರಿಂದಾಗಿ ಕೆಲಸಕ್ಕೆ ಬಾರದೇ ಕೆಲ ದಿನಗಳು ಕಳೆದಿದ್ದರಿಂದ ಈಕೆ ಯಾಕೆ ಬರಲಿಲ್ಲ ಎಂದು ಕೇಳಲು ಅಂಗಡಿ ಮಾಲೀಕ ಮನೆಗೆ ಬಂದರು. ಆದರೆ ಮನೆಗೆ ಬೀಗ ಹಾಕಿತ್ತು, ಮನೆಯೊಳಗಿಂದ ದುರ್ವಾಸನೆ ಬರುತ್ತಿದ್ದುದರಿಂದ ಕೂಡಲೆ ಅವರು ಪೋಲಿಸರಿಗೆ ದೂರು ನೀಡಿದರು. ಪೋಲಿಸರು ಮನೆಯ ಬೀಗ ಮುರಿದು ಒಳಗೆ ತೆರಳಿ ನೋಡಿದರೆ ಕೊಲೆಯಾದ ತರುಣಿಯ ದೇಹ ರಕ್ತದ ಓಕುಳಿಯಲ್ಲಿತ್ತು.

ಆರೋಪಿ ಶೇಖಪ್ಪ ಈತನು ನಿರುದ್ಯೋಗಿಯಾಗಿದ್ದು ಹಣಕ್ಕಾಗಿ ಸಹೋದರಿಯನ್ನು ಪೀಡಿಸುತ್ತಿದ್ದ ಎನ್ನಲಾಗಿದೆ.

ಟಾಪ್ ನ್ಯೂಸ್

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.