ಪ್ರವಾಸಿಗರಿಂದ ಹೆಚ್ಚಿನ ಶುಲ್ಕ ವಸೂಲಿ: ಕೆಲ ಟ್ಯಾಕ್ಸಿ ಚಾಲಕರ ವರ್ತನೆಯಿಂದ ಪ್ರವಾಸೋದ್ಯಮಕ್ಕೆ ಧಕ್ಕೆ

Team Udayavani, Dec 18, 2022, 5:06 PM IST

ಪ್ರವಾಸಿಗರಿಂದ ಹೆಚ್ಚಿನ ಶುಲ್ಕ ವಸೂಲಿ: ಟ್ಯಾಕ್ಸಿ ಚಾಲಕರ ವರ್ತನೆಯಿಂದ ಪ್ರವಾಸೋದ್ಯಮಕ್ಕೆ ಧಕ್ಕೆ

ಪಣಜಿ: ಸದ್ಯ ಗೋವಾದಲ್ಲಿ ಪ್ರವಾಸಿಗರನ್ನು ನಿಲ್ಲಿಸಿ ಟ್ಯಾಕ್ಸಿ ಚಾಲಕರು ಸೃಷ್ಟಿಸುತ್ತಿರುವ ಅವ್ಯವಸ್ಥೆ ತೀರಾ ತಪ್ಪು. ಅವರ ವರ್ತನೆಯಿಂದ ಗೋವಾದಲ್ಲಿ ಇಡೀ ಪ್ರವಾಸೋದ್ಯಮ ವ್ಯವಹಾರಕ್ಕೆ ಧಕ್ಕೆಯಾಗಿದೆ ಎಂದು ಪ್ರವಾಸೋದ್ಯಮ ನಿಗಮದ ಅಧ್ಯಕ್ಷ ಗಣೇಶ್ ಗಾಂವ್ಕರ್ ಹೇಳಿದ್ದಾರೆ.

ಗೋವಾದ ದೂದ್ ಸಾಗರ ಜಲಪಾತದ ಆನ್‍ಲೈನ್ ಬುಕಿಂಗ್ ವೆಬ್‍ಸೈಟ್‍ನ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡುತ್ತಿದ್ದರು.

ಗೋವಾದ ಧಾರಾಬಾಂದೋಡಾದಲ್ಲಿ ಆಯೋಜಿಸಿದ್ದ ಈ ಸಮಾರಂಭದಲ್ಲಿ  ಮೀಸಲು ಅರಣ್ಯ ಇಲಾಖೆಯ ಉಪ ಅರಣ್ಯಾಧಿಕಾರಿ ಆನಂದ್ ಜಾಧವ್, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಸುವರ್ಣಾ ತೆಂಡೂಲ್ಕರ್, ದೂದ್ ಸಾಗರ ಜಿಪಂ ಅಧ್ಯಕ್ಷ ಅಶೋಕ್ ಖಂಡೇಪಾರ್ಕರ್ ಹಾಗೂ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

ದೂದ್ ಸಾಗರ ಜಲಪಾತ ಪ್ರವಾಸಿ ತಾಣಕ್ಕೆ ಬರುವ ಪ್ರವಾಸಿಗರ ಅನುಕೂಲಕ್ಕಾಗಿ ಸರ್ಕಾರ ಆನ್‍ಲೈನ್ ಬುಕಿಂಗ್ ವ್ಯವಸ್ಥೆಯನ್ನು ಅಳವಡಿಸಿಕೊಂಡಿದೆ. ಇದು ಪ್ರವಾಸೋದ್ಯಮ ವ್ಯವಹಾರಕ್ಕೆ ಹೆಚ್ಚಿನ ಪ್ರಯೋಜನವಾಗಲಿದೆ. ದೂದ್ ಸಾಗರ ಪ್ರವಾಸೋದ್ಯಮ ವ್ಯವಹಾರಕ್ಕೆ ಉತ್ತಮ ಸೇವೆ ಒದಗಿಸುವ ನಿಟ್ಟಿನಲ್ಲಿ ಈ ಸ್ಥಳದಲ್ಲಿ ಎಲ್ಲ ಸೌಲಭ್ಯಗಳನ್ನು ಒದಗಿಸುತ್ತೇವೆ ಎಂದು ಡಾ. ಗಣೇಶ ಗಾಂವಕರ್ ಹೇಳಿದರು.

ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ದೂದ್ ಸಾಗರ ಜೀಪ್ ಅಸೋಸಿಯೇಶನ್ ಅಧ್ಯಕ್ಷ ಅಶೋಕ್ ಖಾಂಡೆಪಾರ್ಕರ್ ಮಾತನಾಡಿ-  ದೂದ್ ಸಾಗರ ಜಲಪಾತಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಿದ್ದಾರೆ. ಈ ವ್ಯವಹಾರದಲ್ಲಿ ತೊಡಗಿರುವ ಕೆಲವು ಜೀಪ್ ಸವಾರರು ಪ್ರವಾಸಿಗರಿಗೆ ಹೆಚ್ಚಿನ ಶುಲ್ಕ ವಿಧಿಸಿ ದರೋಡೆ ಮಾಡುತ್ತಿದ್ದರು. ಸರ್ಕಾರ ಆನ್‍ಲೈನ್ ವೆಬ್‍ಸೈಟ್ ಪ್ರಾರಂಭಿಸಿರುವುದರಿಂದ ಪ್ರವಾಸಿಗರು ಜೀಪ್ ಪ್ರಯಾಣದ  ಬೆಲೆಯನ್ನು ಹೆಚ್ಚಿಸಿ ಸುಲಿಗೆ ಮಾಡಲು ಸಾಧ್ಯವಾಗುವುದಿಲ್ಲ. ಸರ್ಕಾರದ ಆನ್‍ಲೈನ್ ಉಪಕ್ರಮವನ್ನು ನಾವು ಸ್ವಾಗತಿಸುತ್ತೇವೆ ಎಂದರು.

ಇದನ್ನೂ ಓದಿ: ದಾವಣಗೆರೆ: ವೀರಶೈವ ಲಿಂಗಾಯತ ಮಹಾಸಭಾದ 23 ನೇ ಅಧಿವೇಶನ ಮುಂದೂಡಿಕೆ

ಟಾಪ್ ನ್ಯೂಸ್

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.