ಮಕ್ಕಳ ಸಾವಿನ ಸಂಖ್ಯೆ 79ಕ್ಕೆ !;ಆಸ್ಪತ್ರೆಗೆ ಯೋಗಿ, ನಡ್ಡಾ ದೌಡು

Team Udayavani, Aug 13, 2017, 3:44 PM IST

ಗೋರಖ್ಪುರ: ಎರಡು ದಿನಗಳಲ್ಲಿ 30 ಮಕ್ಕಳ ಸಾವಿಗೆ ಕಾರಣವಾದ ಗೋರಖ್ಪುರದ ಬಾಬಾ ರಾಘವ್‌ ದಾಸ್‌ ವೈದ್ಯಕೀಯ ಕಾಲೇಜಿನಲ್ಲಿ ಕಳೆದ ಆರು ದಿನಗಳಲ್ಲಿ ಮೃತಪಟ್ಟ ಮಕ್ಕಳ ಸಂಖ್ಯೆ ಭಾನುವಾರ  79ಕ್ಕೇರಿದೆ.

ಆಸ್ಪತ್ರೆಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಮತ್ತು ಕೇಂದ್ರ ಆರೋಗ್ಯ ಸಚಿವ ಜೆ.ಪಿ.ನಡ್ಡಾ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ವೈದ್ಯರ ಬಳಿ ಮಾಹಿತಿ ಪಡೆದು ಎಲ್ಲಾ ತುರ್ತು ಅಗತ್ಯಗಳನ್ನು ಪೂರೈಸಲು ಕೇಂದ್ರ ಮತ್ತು ರಾಜ್ಯ ಸರ್ಕಾರ ಸಿದ್ದವಿದೆ ಎಂದರು. 

ಭಾನುವಾರ ಒಂದೇ ದಿನ ಚಿಂತಾಜನಕ ಸ್ಥಿತಿಯಲ್ಲಿದ್ದ 16 ಮಕ್ಕಳು ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದೆ.

ಸಿಎಂ ಆದಿತ್ಯನಾಥ್‌ ಅವರು ಈ ಬಗ್ಗೆ ಮ್ಯಾಜಿಸ್ಟ್ರೇಟ್‌ ತನಿಖೆಗೆ ಆದೇಶಿಸಿದ್ದು, ವರದಿಯಲ್ಲಿ ಯಾರದ್ದೇ ಕರ್ತವ್ಯ ಲೋಪ ಕಂಡು ಬಂದಲ್ಲಿ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ. 

ಪ್ರಧಾನಿ ನರೇಂದ್ರ ಮೋದಿ ಅವರೂ ಮಕ್ಕಳ ಸಾವಿನ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ್ದು ಕೇಂದ್ರದ ಅಧಿಕಾರಿಗಳಿಗೆ ಎಲ್ಲಾ ರೀತಿಯ ತುರ್ತು ನೆರವು ನೀಡಲು ಸೂಚನೆ ನೀಡಿದ್ದಾರೆ. 

ಮೆದುಳಿನ ಉರಿಯೂತಕ್ಕೆ ಕಾರಣವಾಗುವ  ಎನ್‌ಸೆಫ‌ಲಿಟೀಸ್‌ ಎನ್ನುವ ಮಾರಣಾಂತಿಕ ಕಾಯಿಲೆಗೆ ಮಕ್ಕಳು ಬಲಿಯಾಗಿದ್ದಾರೆ ಎನ್ನಲಾಗಿದೆ.  

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ

  • ಶಹಾಪುರ: ಶಾಲಾ ದಿನಗಳಲ್ಲಿ ಮಕ್ಕಳಿಗೆ ಶಿಸ್ತು, ಸಂಯಮ ಹಾಗೂ ರಾಷ್ಟ್ರ ಪ್ರಜ್ಞೆ ಅರಿವು ಮಾಡಿಕೊಡುವ ಕರ್ನಾಟಕ ಪೊಲೀಸ್‌ ಇಲಾಖೆ ಯೋಜನೆಯೇ ಎಸ್‌ಪಿಸಿ ತುಂಬಾ ಉಪಯುಕ್ತವಾದದು...

  • ಕಲಬುರಗಿ: ನಮಗೆ ಪೆಟ್ಟು ಬಿದ್ದ ತಕ್ಷಣ "ಅಮ್ಮ' ಎನ್ನುತ್ತೇವೆ ಹೊರತು, "ಅಂಟಿ' ಅನ್ನಲ್ಲ. ಅಮ್ಮ ಎನ್ನುವ ಪದ ಹೃದಯದಿಂದ ಬರುವಂತದ್ದು, ಹಾಗೆ ಕನ್ನಡ ಭಾಷೆ ಕಣ- ಕಣದಲ್ಲಿ...

  • ಹನುಮಸಾಗರ: ಕೊಪ್ಪಳ ಜಿಲ್ಲೆಯ ಅತಿ ದೊಡ್ಡ ಗ್ರಾಪಂ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಹನುಮಸಾಗರ ಗ್ರಾಮದ ಪ್ರವಾಸಿ ಮಂದಿರ(ಐಬಿ) ಕುಡಿಯುವ ನೀರು ಹಾಗೂ ಸಿಬ್ಬಂದಿ...

  • ಚಡಚಣ: ಮನೆಗೊಂದು ಶೌಚಾಲಯ ಎಷ್ಟು ಮುಖ್ಯವೋ ಅಷ್ಟೇ ಗ್ರಾಮಕ್ಕೊಂದು ಗ್ರಂಥಾಲಯ ಮುಖ್ಯ. ಗ್ರಾಮದಲ್ಲಿ ಗ್ರಂಥಾಲಯವಿದ್ದರೆ ವಿದ್ಯಾರ್ಥಿಗಳ ಭವಿಷ್ಯ ಉಜ್ವಲವಾಗುವುದರ...

  • ಕೊಪ್ಪಳ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ತನ್ನ ಮೊದಲ ಅಧಿಕಾರ ಅವ ಧಿಯಲ್ಲಿಯೇ ಕೊಪ್ಪಳ ಜಿಲ್ಲೆಗೆ ಘೋಷಣೆ ಮಾಡಿರುವ "ಉಡಾನ್‌ ಯೋಜನೆ' ವರ್ಷಗಳು...