ಮೊಮ್ಮಗಳ ಮೇಲೆ ಅತ್ಯಾಚಾರಗೈದು 10ರೂ. ನೀಡಿದ 60 ವರ್ಷದ ಅಜ್ಜ!
Team Udayavani, Mar 17, 2023, 7:30 AM IST
ಗೋರಖ್ಪುರ: 15 ವರ್ಷದ ಮೊಮ್ಮಗಳನ್ನು ಅತ್ಯಾಚಾರ ಮಾಡಿದ ಆರೋಪದಲ್ಲಿ 60 ವರ್ಷದ ವ್ಯಕ್ತಿಯನ್ನು ಉತ್ತರ ಪ್ರದೇಶದ ಗೋರಖ್ಪುರ ಪೊಲೀಸರು ಬಂಧಿಸಿದ್ದಾರೆ.
ಬುಧವಾರ ಸಂಜೆ ಸೊಸೆ ಮತ್ತು ಮೊಮ್ಮಗಳು ಕುರಿಗಳನ್ನು ಮೇಯಿಸುತ್ತಿದ್ದರು. ಈ ವೇಳೆ ಅಲ್ಲಿಗೆ ಬಂದ ಅಜ್ಜ, ಸೊಸೆಯನ್ನು ಮನೆಗೆ ಹೋಗುವಂತೆ ಹೇಳಿದ್ದಾನೆ. ಅಲ್ಲದೇ ಕಟ್ಟಿಗೆ ಕಡಿಯಲು ಕೊಡಲಿ ತರುವಂತೆ ಮೊಮ್ಮಗಳಿಗೆ ತಿಳಿಸಿದ್ದಾನೆ. ಮೊಮ್ಮಗಳು ಮನೆಗೆ ಹೋಗಿ ಕೊಡಲಿ ತಂದಾಗ, ಆಕೆಯನ್ನು ನಿರ್ಜನ ಸ್ಥಳಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ. ಅಲ್ಲದೇ ಈ ಬಗ್ಗೆ ಯಾರಿಗೂ ಹೇಳಬಾರದು ಎಂದು ಮೊಮ್ಮಗಳಿಗೆ 10 ರೂ. ನೀಡಿದ್ದಾನೆ.
ಈ ವೇಳೆ ಗ್ರಾಮಸ್ಥನೊಬ್ಬ ಕಂಡು, ಜನ ಸೇರಿಸಿ, ಅಜ್ಜನನ್ನು ಹಿಡಿದು ಥಳಿಸಿ, ಪೊಲೀಸರಿಗೆ ಒಪ್ಪಿಸಿದ್ದಾರೆ. ಪೊಲೀಸರು ಬಾಲಕಿಯನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಿದ್ದು, ಈ ಸಂಬಂಧ ತನಿಖೆ ಮುಂದುವರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ
Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ
ಜಗತ್ತಿಗಿಂತ ಮೊದಲು ಪಾಕ್ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್ ದಾಳಿ ಬಗ್ಗೆ ಪ್ರಧಾನಿ
Encounter: ಛತ್ತೀಸ್ಗಢದಲ್ಲಿ ಎನ್ಕೌಂಟರ್… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ