ತೈಲಗಳ ಅಬಕಾರಿ ಸುಂಕ ಇಳಿಕೆ ಸಾಧ್ಯವಿಲ್ಲ
Team Udayavani, Sep 5, 2018, 7:35 AM IST
ಹೊಸದಿಲ್ಲಿ: ಪೆಟ್ರೋಲ್-ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಇಳಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. ದಿನೇ ದಿನೆ ಏರುತ್ತಿರುವ ತೈಲ ಬೆಲೆಯನ್ನು ನಿಯಂತ್ರಿಸಲು ಅಬಕಾರಿ ಸುಂಕ ಇಳಿಸಬೇಕೆಂದು ಕೇಳಿಬಂದಿರುವ ಆಗ್ರಹಕ್ಕೆ ಕೇಂದ್ರ ಈ ರೀತಿ ಉತ್ತರಿಸಿದೆ. ಇತ್ತೀಚೆಗಷ್ಟೇ, ಪೆಟ್ರೋಲ್, ಡೀಸೆಲ್ಗಳನ್ನು ಜಿಎಸ್ಟಿ ವ್ಯಾಪ್ತಿಗೆ ತರುವುದಿಲ್ಲ ಎಂದು ಕೇಂದ್ರ ಸ್ಪಷ್ಟನೆ ನೀಡಿತ್ತು.
ಅಬಕಾರಿ ಸುಂಕದ ವಿನಾಯ್ತಿ ಸಾಧ್ಯ ಏಕಿಲ್ಲ ಎಂಬ ಬಗ್ಗೆ ಮಾಹಿತಿ ನೀಡಿರುವ ಕೇಂದ್ರದ ಹಿರಿಯ ಅಧಿಕಾರಿಯೊಬ್ಬರು, ಡಾಲರ್ ವಿರುದ್ಧ ರೂಪಾಯಿ ಮೌಲ್ಯ ಕುಸಿಯುತ್ತಿರುವ ಹಿನ್ನೆಲೆಯಲ್ಲಿ ಉಂಟಾಗುತ್ತಿರುವ ಹಣದುಬ್ಬರದಿಂದ ಆರ್ಥಿಕ ಬೆಳವಣಿಗೆಯ ಗುರಿ ಹುಸಿಯಾಗದಂತೆ ನೋಡಿಕೊಳ್ಳಬೇಕಿದೆ. ಹಾಗಾಗಿ, ತೈಲಗಳ ಮೇಲಿನ ಅಬಕಾರಿ ಸುಂಕ ಕೈಬಿಡಲು ಸಾಧ್ಯವಿಲ್ಲ ಎಂದಿದ್ದಾರೆ. ಮಂಗಳವಾರ, ಡಾಲರ್ ವಿರುದ್ಧ ರೂಪಾಯಿ ಮೌಲ್ಯ 71.54ಕ್ಕೆ ಕುಸಿದಿದ್ದರಿಂದಾಗಿ ಪೆಟ್ರೋಲ್, ಡೀಸೆಲ್ ಬೆಲೆ ಮತ್ತಷ್ಟು ಹೆಚ್ಚಿದ್ದರಿಂದ ಅಬಕಾರಿ ಸುಂಕ ಕೈಬಿಡುವ ಕೂಗು ಕೇಳಿ ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tapi River; ಸಲ್ಮಾನ್ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!
MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್ ನಿಂದ ವಿವರ ಕೇಳಿದ ಭಾರತ
Loksabha Election; ಬಿಜೆಪಿ 14ನೇ ಪಟ್ಟಿ: ಲಡಾಖ್ ಹಾಲಿ ಸಂಸದ ನಮ್ಗ್ಯಾಲ್ ಗೆ ಕೊಕ್
Video| ರಾಮನ ಫೋಟೋ ಇರುವ ತಟ್ಟೆಯಲ್ಲಿ ಬಿರಿಯಾನಿ: ವಿವಾದ
Reliance Jio Profit; ರಿಲಯನ್ಸ್ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ