
ಒಳನುಗ್ಗುವವರು ಬುಡಕಟ್ಟು ಹೆಣ್ಣುಮಕ್ಕಳನ್ನು ಬಲವಂತವಾಗಿ ಮದುವೆಯಾಗುತ್ತಾರೆ: ಶಾ
2024ರ ಲೋಕಸಭೆ ಚುನಾವಣೆಗೂ ಮುನ್ನ ದೇಶ ನಕ್ಸಲ್ ಹಾವಳಿಯಿಂದ ಮುಕ್ತ
Team Udayavani, Jan 7, 2023, 7:40 PM IST

ಚೈಬಾಸಾ: ಮುಖ್ಯಮಂತ್ರಿ ಹೇಮಂತ್ ಸೋರೆನ್ ನೇತೃತ್ವದ ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ಸರ್ಕಾರವು “ಬುಡಕಟ್ಟು ವಿರೋಧಿ” ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಶನಿವಾರ ಹೇಳಿದ್ದಾರೆ ಮತ್ತು ಜೆಎಂಎಂ ಸರ್ಕಾರದ ಆಡಳಿತದಲ್ಲಿ ರಾಜ್ಯದಲ್ಲಿ ಭ್ರಷ್ಟಾಚಾರವು ಗಗನಕ್ಕೇರಿದೆ ಎಂದು ಆರೋಪಿಸಿದರು.
ಜಾರ್ಖಂಡ್‌ನ ಚೈಬಾಸಾದಲ್ಲಿ ವಿಜಯ ಸಂಕಲ್ಪ್ ಸಮಾವೇಶದಲ್ಲಿ ಮಾತನಾಡಿ,“ ಹೇಮಂತ್ ಸೊರೇನ್ ಸರ್ಕಾರ ಬುಡಕಟ್ಟು ವಿರೋಧಿಯಾಗಿದೆ. ಅವರ ಅಧಿಕಾರಾವಧಿಯಲ್ಲಿ ಭ್ರಷ್ಟಾಚಾರ ಉತ್ತುಂಗಕ್ಕೇರಿದ್ದು, ಮಧ್ಯವರ್ತಿಗಳು ಮತ್ತು ಬುಡಕಟ್ಟು ಜನಾಂಗದವರ ಭೂಮಿಯನ್ನು ಕಸಿದುಕೊಳ್ಳುವ ಸಮಯ ಬಂದಿದೆ ಎಂದು ಅಮಿತ್ ಶಾ ಉದ್ಯೋಗದ ಹೆಸರಿನಲ್ಲಿ ಬುಡಕಟ್ಟು ಜನಾಂಗದ ಯುವಕರನ್ನು ವಂಚಿಸಲಾಗಿದೆ”ಎಂದರು.
“ಬುಡಕಟ್ಟು ಹೆಣ್ಣು ಮಕ್ಕಳನ್ನು ಬಲವಂತವಾಗಿ ಮದುವೆಯಾಗಿ ಅವರ ಭೂಮಿಯನ್ನು ಕಸಿದುಕೊಳ್ಳುತ್ತಿದ್ದಾರೆ. ನಾನು ಇಂದು ಹೇಮಂತ್ ಸೋರೆನ್ ಸರ್ಕಾರಕ್ಕೆ ಎಚ್ಚರಿಕೆ ನೀಡುತ್ತೇನೆ, ಒಳನುಗ್ಗುವವರ ಈ ದುಸ್ಸಾಹಸವನ್ನು ನಿಲ್ಲಿಸಿ. ಇಲ್ಲದಿದ್ದರೆ, ಜಾರ್ಖಂಡ್ ಜನರು ನಿಮ್ಮನ್ನು ಕ್ಷಮಿಸುವುದಿಲ್ಲ. ಬುಡಕಟ್ಟು ಕಲ್ಯಾಣಕ್ಕಿಂತ ವೋಟ್ ಬ್ಯಾಂಕ್ ದುರಾಸೆ ದೊಡ್ಡದಲ್ಲ” ಎಂದು ಶಾ ಗುಡುಗಿದರು.
ಶಿಕ್ಷಣದ ಹೆಸರಿನಲ್ಲಿ ಮಕ್ಕಳನ್ನು ವಂಚಿಸಲಾಗಿದೆ. ಕಲ್ಯಾಣ ಯೋಜನೆಗಳ ಹೆಸರಿನಲ್ಲಿ ಬುಡಕಟ್ಟು ಸಮುದಾಯವನ್ನು ವಂಚಿಸಲಾಗಿದೆ, ”ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ರಾಜ್ಯದಲ್ಲಿ ಕೆಲವೇ ದಿನಗಳಲ್ಲಿ ನಕ್ಸಲಿಸಂ ಕೊನೆಗೊಳ್ಳಲಿದೆ ಮತ್ತು ಶೀಘ್ರದಲ್ಲೇ ಅಭಿವೃದ್ಧಿಯ ಹೊಸ ಮಾರ್ಗಗಳನ್ನು ತೆರೆಯಲಾಗುವುದು ಎಂದರು.
ಬಿಜೆಪಿ ಬುಡಕಟ್ಟು ಕಲ್ಯಾಣಕ್ಕಾಗಿ ತಮ್ಮ ಬಜೆಟ್ ಅನ್ನು 86 ಸಾವಿರ ಕೋಟಿ ರೂ.ಗೆ ಹೆಚ್ಚಿಸಿದೆ ಎಂದು ಸೇರಿಸಿದ ಗೃಹ ಸಚಿವರು, ಕನಿಷ್ಠ 1 ಕೋಟಿ ಬುಡಕಟ್ಟು ಜನಾಂಗದವರಿಗೆ ಆಹಾರ, ಉದ್ಯೋಗ ಮತ್ತು ಶಿಕ್ಷಣ, ಕುಡಿಯುವ ನೀರು ಸಹ ಒದಗಿಸಿದ್ದೇವೆ ಎಂದು ಹೇಳಿದರು.
ನಕ್ಸಲ್ ಹಾವಳಿಯಿಂದ ಮುಕ್ತ
ಕಳೆದ ದಶಕದಲ್ಲಿ ನಕ್ಸಲೀಯರ ಹಿಂಸಾಚಾರ ಕಡಿಮೆಯಾಗಿದ್ದು, 2024ರ ಲೋಕಸಭೆ ಚುನಾವಣೆಗೂ ಮುನ್ನ ದೇಶವನ್ನು ನಕ್ಸಲ್ ಹಾವಳಿಯಿಂದ ಮುಕ್ತಗೊಳಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ಅಮಿತ್ ಶಾ ಶನಿವಾರ ಹೇಳಿದ್ದಾರೆ.
ಮಾವೋವಾದಿ ಹಿಂಸಾಚಾರದಿಂದ ಪೀಡಿತ ರಾಜ್ಯವಾದ ಛತ್ತೀಸ್‌ಗಢದ ಕೊರ್ಬಾ ನಗರದ ಇಂದಿರಾ ಕ್ರೀಡಾಂಗಣದಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿ, ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಭೂಪೇಶ್ ಬಘೇಲ್ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ಮತ ಹಾಕುವಂತೆ ಬಿಜೆಪಿ ನಾಯಕ ಜನರನ್ನು ಒತ್ತಾಯಿಸಿದರು. 2024 ರಲ್ಲಿ ಮತ್ತೊಮ್ಮೆ ನರೇಂದ್ರ ಮೋದಿ ಅವರನ್ನು ಪ್ರಧಾನಿಯನ್ನಾಗಿ ನೋಡಬೇಕಾದರೆ ಜನರು ಬಿಜೆಪಿಗೆ ಮತ ಹಾಕಬೇಕು ಎಂದರು. ಅಪರಾಧ ಮತ್ತು ಭ್ರಷ್ಟಾಚಾರದ ಏರಿಕೆಗೆ ಬಘೇಲ್ ಸರ್ಕಾರ ಕಾರಣ ಎಂದು ದೂಷಿಸಿದರು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ

ದೆಹಲಿ-ಎನ್‌ಸಿಆರ್‌ನಲ್ಲಿ ಗುಡುಗು ಸಹಿತ ಮಳೆ; 9 ವಿಮಾನಗಳು ಬೇರೆಡೆಗೆ

ಜಿಲ್ಲೆಯಲ್ಲಿ 1,239 ರೌಡಿಶೀಟರ್ ಗಳು: ವಿಜಯಪುರ ಡಿಸಿ ಡಾ.ವಿ.ಬಿ.ದಾನಮ್ಮನವರ

ಚುನಾವಣಾ ಕರ್ತವ್ಯಕ್ಕೆ ಹಾಜರಾಗದ ಅಧಿಕಾರಿ ವಿರುದ್ಧ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

ಅಭ್ಯರ್ಥಿಗಳು ಅಪರಾಧದ ಬಗ್ಗೆ ಪತ್ರಿಕೆಗಳಲ್ಲಿ ಪ್ರಕಟಿಸಬೇಕು: ಬಳ್ಳಾರಿ ಡಿಸಿ ಪವನ್ ಕುಮಾರ್

ಅಭ್ಯರ್ಥಿಗಳು ತಮ್ಮ ಅಪರಾಧದ ಬಗ್ಗೆ ಪತ್ರಿಕೆಗಳಲ್ಲಿ ಪ್ರಕಟಿಸಬೇಕು; ಪವನ್ ಕುಮಾರ್