ಆರ್ಬಿಐಗೆ ನೂತನ ಡೆಪ್ಯುಟಿ ಗವರ್ನರ್ ನೇಮಕ
Team Udayavani, Jan 14, 2020, 9:33 PM IST
ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ನ ಉಪ ಗವರ್ನರ್ ಆಗಿ ಮೈಕೆಲ್ ದೇಬಬ್ರತಾ ಪಾತ್ರಾ ಅವರನ್ನು ನೇಮಕ ಮಾಡಲಾಗಿದೆ. ಕಳೆದ ಜೂನ್ನಲ್ಲಿ ಡೆಪ್ಯುಟಿ ಗವರ್ನರ್ ವಿರಳ್ ಆಚಾರ್ಯ ರಾಜೀನಾಮೆಯಿಂದ ತೆರವಾದ ಸ್ಥಾನವನ್ನು ಇವರು ತುಂಬಲಿದ್ದಾರೆ. ಪಾತ್ರಾ ಅವರು 3 ವರ್ಷಗಳ ಕಾಲ ಈ ಹುದ್ದೆಯಲ್ಲಿರಲಿದ್ದಾರೆ ಎಂದು ಕೇಂದ್ರ ಸಿಬ್ಬಂದಿ ಸಚಿವಾಲಯದ ಆದೇಶದಲ್ಲಿ ತಿಳಿಸಲಾಗಿದೆ.