ಮಣಿಪಾಲ ಶಿಕ್ಷಣ ಸಂಸ್ಥೆಗಳ ಮಹತ್ವದ ಸಾಧನೆ
ಕೇಂದ್ರದ ರಾಷ್ಟ್ರೀಯ ಸಾಂಸ್ಥಿಕ ರ್ಯಾಂಕಿಂಗ್ನ ಬಹುತೇಕ ವಿಭಾಗಗಳಲ್ಲಿ ಸ್ಥಾನ
Team Udayavani, Jun 13, 2020, 9:25 AM IST
ಹೊಸದಿಲ್ಲಿ: ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ ರಾಷ್ಟ್ರೀಯ ಸಾಂಸ್ಥಿಕ ರ್ಯಾಂಕಿಂಗ್ ಪ್ರೇಮ್ವರ್ಕ್ (ಎನ್ಐಆರ್ಎಫ್)ನ ಶ್ರೇಯಾಂಕ ಪಟ್ಟಿಯಲ್ಲಿ ಮಣಿಪಾಲ ಶಿಕ್ಷಣ ಸಂಸ್ಥೆಗಳು ಬಹುತೇಕ ಪಟ್ಟಿಯಲ್ಲಿ ಸ್ಥಾನ ಪಡೆದ ಹೆಗ್ಗಳಿಕೆಗೆ ಪಾತ್ರವಾಗಿವೆ.
ದಂತವೈದ್ಯ ವಿಭಾಗದಲ್ಲಿ ಮಣಿಪಾಲ್ ಕಾಲೇಜ್ ಆಫ್ ಡೆಂಟಲ್ ಕಾಲೇಜ್ಗೆ 2ನೇ ಸ್ಥಾನ, ಮಂಗಳೂರಿನಲ್ಲಿರುವ ಮಣಿಪಾಲ್ ಕಾಲೇಜ್ ಆಫ್ ಡೆಂಟಲ್ ಸೈನ್ಸಸ್ ಸಂಸ್ಥೆಗೆ 6ನೇ ಸ್ಥಾನ ಲಭ್ಯವಾಗಿದೆ. ಫಾರ್ಮಸಿ (ಔಷಧ ವಿಜ್ಞಾನ) ವಿಭಾಗದಲ್ಲಿ ಮಣಿಪಾಲ್ ಕಾಲೇಜ್ ಆಫ್ ಫಾರ್ಮಾಸ್ಯುಟಿಕಲ್ ಸೈನ್ಸಸ್ ಸಂಸ್ಥೆ 7ನೇ ರ್ಯಾಂಕಿಂಗ್ ಪಡೆದಿದೆ. ವೈದ್ಯಕೀಯ ವಿಭಾಗದಲ್ಲಿ ಮಣಿಪಾಲದಲ್ಲಿರುವ ಕಸ್ತೂರ್ಬಾ ವೈದ್ಯಕೀಯ ಕಾಲೇಜು 9ನೇ ಸ್ಥಾನ ಪಡೆದಿದೆ ಹಾಗೂ ಮಂಗಳೂರಿನಲ್ಲಿರುವ ಕಸ್ತೂರ್ಬಾ ಮೆಡಿಕಲ್ ಕಾಲೇಜ್ 21ನೇ ಸ್ಥಾನ ಪಡೆದಿದೆ. ಮ್ಯಾನೇಜ್ಮೆಂಟ್ ವಿಭಾಗದಲ್ಲಿ ಮಣಿಪಾಲದಲ್ಲಿರುವ ಟಿ.ಎ. ಪೈ ಮ್ಯಾನೇಜ್ಮೆಂಟ್ ಇನ್ಸ್ಟಿಟ್ಯೂಟ್ 27ನೇ ಸ್ಥಾನ ಗಳಿಸಿದ್ದು, ವಿಶ್ವವಿದ್ಯಾಲಯಗಳ ರ್ಯಾಂಕಿಂಗ್ನಲ್ಲಿ ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಷನ್ (ಮಾಹೆ) 8ನೇ ಸ್ಥಾನ ಲಭಿಸಿದೆ. ಇನ್ನುಳಿದಂತೆ, ವಾಸ್ತುಶಿಲ್ಪ ವಿಭಾಗದಲ್ಲಿ ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಷನ್ (ಉಡುಪಿ) ಸಂಸ್ಥೆಗೆ 12ನೇ ಸ್ಥಾನ ಹಾಗೂ ಎಂಜಿನಿಯರಿಂಗ್ ವಿಭಾಗದಲ್ಲಿ ಮಣಿಪಾಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಗೆ 45ನೇ ಸ್ಥಾನ ಸಿಕ್ಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
B.Y. Raghavendra: ಕಾಂಗ್ರೆಸ್ನವರ ಬಳಿ ಗ್ಯಾರಂಟಿ ಅಡ್ವಾನ್ಸ್ ಹಣ ಕೇಳಿ: ಬಿವೈಆರ್
Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ
Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ
Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ
ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ