ದೇಶದ ಪ್ರಧಾನಿಯ ಹೆಸರೇ ಗೊತ್ತಿಲ್ಲದ ವರ… ಕೋಪಗೊಂಡ ನವವಧು ಮಾಡಿದ ಕೆಲಸವೇನು ಗೊತ್ತಾ… ?

Team Udayavani, Jun 21, 2023, 2:21 PM IST

ದೇಶದ ಪ್ರಧಾನಿಯ ಹೆಸರು ಗೊತ್ತಿಲ್ಲದ ವರ… ಕೋಪಗೊಂಡ ವಧು ಮಾಡಿದ ಕೆಲಸವೇನು ಗೊತ್ತಾ… ?

ಲಕ್ನೋ: ಇತ್ತೀಚಿನ ದಿನಗಳಲ್ಲಿ ಕ್ಷುಲ್ಲಕ ಕಾರಣಕ್ಕಾಗಿ ಮದುವೆ ಮುರಿಯುವ ಪ್ರಕರಣ ಹೆಚ್ಚಾಗಿ ಕೇಳಿ ಬರುತ್ತಿದೆ. ಅದರಂತೆ ಉತ್ತರ ಪ್ರದೇಶದ ಗಾಜಿಪುರದ ನಾಸಿರ್‌ಪುರ ಗ್ರಾಮದಲ್ಲಿ ವಿಚಿತ್ರ ಘಟನೆಯೊಂದು ನಡೆದಿದೆ. ವರನಿಗೆ ದೇಶದ ಪ್ರಧಾನಿ ಯಾರೆಂದು ಗೊತ್ತಿಲ್ಲ ಎಂಬ ಕಾರಣಕ್ಕೆ ವಧು ತಾನು ಮದುವೆಯಾಗಬೇಕಿದ್ದ ಹುಡುಗ ತನಗೆ ಬೇಡವೆಂದು ಕೋಪದಿಂದ ಅಲ್ಲಿದ್ದ ವರನ ಕಿರಿಯ ಸಹೋದರನನ್ನೇ ವರಿಸಿಕೊಂಡಿದ್ದಾಳೆ.

ಏನಿದು ಪ್ರಕರಣ:
ಉತ್ತರ ಪ್ರದೇಶದ ನಸೀರಪುರ ಗ್ರಾಮದ ಶಿವಶಂಕರರಾಮ ಅವರು ಕರಂಡದ ಬಸಂತ್ ಪಟ್ಟಿಯಲ್ಲಿರುವ ಯುವತಿಯೊಂದಿಗೆ ವಿವಾಹವಾಗಬೇಕಿತ್ತು. ಅದರಂತೆ ಜೂನ್ 11ರಂದು ಹಿಂದೂ ಸಂಪ್ರದಾಯಗಳ ಪ್ರಕಾರ ಮದುವೆಗೆ ಮಂಗಳಕರ ದಿನವೆಂದು ನಿಗದಿಪಡಿಸಲಾಗಿದೆ. ಜೂನ್ 11 ರಂದು ಶಿವಶಂಕರ್ ಮದುವೆಯ ಮೆರವಣಿಗೆಯೊಂದಿಗೆ ವಧುವಿನ ಮನೆಗೆ ಬಂದಿದ್ದು. ಹಿಂದೂ ಸಂಪ್ರದಾಯದಂತೆ ಮದುವೆ ಕಾರ್ಯಗಳು ನಡೆದಿದೆ.

ಮರುದಿನ ಬೆಳಗ್ಗೆ ನಡೆದ ಖಿಚಡಿ ಸಮಾರಂಭದಲ್ಲಿ ವರನು ತನ್ನ ಸೊಸೆ ಹಾಗೂ ಸೋದರ ಮಾವನ ಜೊತೆ ಮೋಜು ಮಸ್ತಿ ಮಾಡಿಕೊಂಡಿದ್ದ ಸಂದರ್ಭ. ಶಿವಶಂಕರ್ ಅವರಿಗೆ ವಧುವಿನ ಕಡೆಯಿಂದ ಪ್ರಶ್ನೆ ಎದುರಾಗಿದೆ. ನಮ್ಮ ದೇಶದ ಪ್ರಧಾನಿ ಯಾರು ಎಂದು ಕೇಳಿದ್ದಾಳೆ. ಆದರೆ ಶಿವಶಂಕರನಿಗೆ ಆ ಪ್ರಶ್ನೆಗೆ ಉತ್ತರಿಸಲಾಗಲಿಲ್ಲ. ಅಲ್ಲಿದ್ದವರೆಲ್ಲ ಶಿವಶಂಕರ್ ಅವರನ್ನು ಗೇಲಿ ಮಾಡಲು ಆರಂಭಿಸುತ್ತಾರೆ. ‘ಪ್ರಧಾನಿ ಹೆಸರು ಗೊತ್ತಿಲ್ಲದಿದ್ದರೆ ಹೇಗೆ?’ ಎಂದು ನಿಂದಿಸಿದ್ದಾರೆ, ಇದನ್ನೇ ದೊಡ್ಡ ಅವಮಾನ ಎಂದು ಪರಿಗಣಿಸಿದ ಪತ್ನಿ ಶಿವಶಂಕರ್ ಅವರನ್ನು ತೊರೆದು ಅವರ ಕಿರಿಯ ಸಹೋದರ ಅನಂತ್ ಅವರನ್ನು ಸ್ಥಳದಲ್ಲೇ ಮದುವೆಯಾಗಿದ್ದಾಳೆ.

ಇತ್ತ ಘಟನೆ ಕುರಿತು ಪೊಲೀಸ್ ದೂರು ದಾಖಲಿಸುವುದಾಗಿ ವರನ ತಂದೆ ತಿಳಿಸಿದ್ದಾರೆ.

ಯಾವುದೇ ಕಡೆಯಿಂದ ನಮಗೆ ದೂರು ಬಂದಿಲ್ಲ ಎಂದು ಪೊಲೀಸ್ ಅಧಿಕಾರಿ ಸೈದ್‌ಪುರ್ ಕೊತ್ವಾಲ್ ವಂದನಾ ಸಿಂಗ್ ಹೇಳಿದ್ದಾರೆ. ದೂರು ಬಂದ ತಕ್ಷಣ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಯುವಕನೊಬ್ಬ ಠಾಣೆಗೆ ಬಂದು ಪ್ರಧಾನಿ ಹೆಸರು ಬಹಿರಂಗಪಡಿಸದ ಕಾರಣ ತನ್ನ ಮದುವೆ ನಿಲ್ಲಿಸಲಾಗಿದೆ ಎಂದು ಹೇಳಿದ್ದಾನೆ. ಈ ಬಗ್ಗೆ ಲಿಖಿತ ದೂರು ಬಂದ ನಂತರ ಮಧ್ಯ ಪ್ರವೇಶಿಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಕೊತ್ವಾಲ್ ಸಿಂಗ್ ತಿಳಿಸಿದ್ದಾರೆ.

ಇದನ್ನೂ ಓದಿ: ಮೈಸೂರು: ದಕ್ಷಿಣ ಕಾಶಿ ನಂಜನಗೂಡಿಗೆ ನಟ ಯಶ್ ದಂಪತಿ‌ ಭೇಟಿ

ಟಾಪ್ ನ್ಯೂಸ್

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Rahul Gandhi 3

PM Modiಗೆ ನಾಜಿ ಪ್ರಚಾರಕ ಗೋಬೆಲ್ಸ್‌ನೇ ಸ್ಫೂರ್ತಿ: ಕಾಂಗ್ರೆಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.