ಗುಜರಾತ್‌: ಕಾಂಗ್ರೆಸ್‌ ನೇತೃತ್ವದ ಮಹಾಮೈತ್ರಿ?


Team Udayavani, Oct 19, 2017, 9:57 AM IST

Congress.jpg

ಹೊಸದಿಲ್ಲಿ: ಗುಜರಾತ್‌ನಲ್ಲಿ ಗೆಲ್ಲುವ ಮೂಲಕ ತವರು ರಾಜ್ಯದಲ್ಲೇ ನರೇಂದ್ರ ಮೋದಿ- ಅಮಿತ್‌ ಶಾ ಜೋಡಿಗೆ ಮುಖಭಂಗ ಮಾಡಬೇಕೆಂದು ಹಠ ತೊಟ್ಟಿರುವ ಕಾಂಗ್ರೆಸ್‌ ಈ ಗುರಿ ಸಾಧಿಸಿಕೊಳ್ಳಲು ಚಿಕ್ಕಪುಟ್ಟ ಪಕ್ಷಗಳನ್ನು ಸೇರಿಸಿಕೊಂಡು ಮಹಾಮೈತ್ರಿಕೂಟ ರಚಿಸಲು ಪ್ರಯತ್ನಿಸುತ್ತಿದೆ. 
ಜನತಾ ದಳ (ಯು) ಬಂಡಾಯ ನಾಯಕ ಛೋಟು ವಾಸವ, ಪಟಿದಾರ್‌ ಆಂದೋಲನದ ನಾಯಕ ಹಾರ್ದಿಕ್‌ ಪಟೇಲ್‌, ಒಬಿಸಿ ನಾಯಕ ಅಲ್ಪೇಶ್‌ ಠಾಕೂರ್‌, ದಲಿತ ಹೋರಾಟಗಾರ ಜಿಗ್ನೇಶ್‌ ಮೇವಾನಿ ಈ ಮಹಾ ಮೈತ್ರಿಕೂಟದಲ್ಲಿ ಸೇರಿಕೊಳ್ಳುವ ಸಾಧ್ಯತೆಯಿದೆ.

ಗುಜರಾತಿನಲ್ಲಿ ಕಾಂಗ್ರೆಸ್‌ ನೇತೃತ್ವದ ಮಹಾಮೈತ್ರಿ ಕೂಟ ರಚನೆಯಾಗುತ್ತಿರುವುದನ್ನು ರಾಜ್ಯದ ಕಾಂಗ್ರೆಸ್‌ನಾಯಕರೊಬ್ಬರು ದೃಢಪಡಿಸಿದ್ದಾರೆ. ಮಹಾಮೈತ್ರಿ ಕೂಟ ರಚನೆಯಾಗುತ್ತಿರುವುದ ನಿಜ. ಇದಕ್ಕಾಗಿಯೇ ರಾಹುಲ್‌ ಗಾಂಧಿ ಮುಂದಿನ ತಿಂಗಳು ಗುಜರಾತ್‌ಗೆಆಗಮಿಸಲಿದ್ದಾರೆ. ಆದರೆ ಮೈತ್ರಿಯ ಸ್ವರೂಪ ಹೇಗಿರುತ್ತದೆ ಎನ್ನುವುದು ಇನ್ನೂ ಅಂತಿಮಗೊಂಡಿಲ್ಲ. ಮಹಾ ಮೈತ್ರಿ ಕೂಟ ರಚನೆಯಾದರೆ ಸೀಟು ಹಂಚಿಕೆಯ ಮೇಲೆ ಪ್ರಭಾವವಾಗುತ್ತದೆ ಎಂದವರು ಹೇಳಿದ್ದಾರೆ.

ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಅಹ್ಮದ್‌ ಪಟೇಲ್‌ಗೆ ಮತ ಹಾಕಿ ಬಂಡಾಯದ ಬಾವುಟ ಹಾರಿಸಿರುವ ಛೋಟು ವಾಸವ ಮಹಾಮೈತ್ರಿಕೂಟ ರಚಿಸುವ ನಿಟ್ಟಿನಲ್ಲಿ ಗುಜರಾತ್‌ ಕಾಂಗ್ರೆಸ್‌ ಉಸ್ತುವಾರಿ ನೋಡಿಕೊಳ್ಳುತ್ತಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ಅಶೋಕ್‌ ಗೆಹೊÉàಟ್‌, ಗುಜರಾತ್‌ ಕಾಂಗ್ರೆಸ್‌ ಅಧ್ಯಕ್ಷ ಭರತ್‌ ಸೋಳಂಕಿ ಜತೆಗೆ ಮಾತುಕತೆ ನಡೆಸಿದ್ದಾರೆ. ಬುಡ
ಕಟ್ಟು ಸಮೂಹದ ಪ್ರಬಲ ನಾಯಕ ವಾಸವ ಗುಜರಾತಿ ನಲ್ಲಿ ಜೆಡಿ(ಯು) ಮುಖವಾಗಿ ಗುರುತಿಸಿಕೊಂಡಿದ್ದಾರೆ. ಶರದ್‌ ಯಾದವ್‌ ನೇತೃತ್ವದ ಜೆಡಿ(ಯು) ಬಣ ಅವರನ್ನು ಇತ್ತೀಚೆಗೆ ಹಂಗಾಮಿ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಮಾತುಕತೆಯ ಜವಾಬ್ದರಿ ವಹಿಸಿದೆ. ಈ ಸಲ ಗುಜರಾತಿನಲ್ಲಿ ಬಿಜೆಪಿ ಆಳ್ವಿಕೆಯನ್ನು ಕೊನೆಗಾಣಿಸಿ ಮೋದಿ -ಶಾ ಜೋಡಿಗೆ ತವರು ರಾಜ್ಯದಲ್ಲೇ ಮುಖಭಂಗ ಮಾಡುವ ಮೂಲಕ 2019ರ ಲೋಕಸಭಾ ಚುನಾವಣೆಗೆ ಆತ್ಮಸ್ಥೈರ್ಯ ಹೆಚ್ಚಸಿಕೊಳ್ಳಲು ಕಾಂಗ್ರೆಸ್‌ ತೀವ್ರ ಪ್ರಯತ್ನ ಮಾಡುತ್ತಿದೆ. ಉಪಾಧ್ಯಕ್ಷ ರಾಹುಲ್‌ ಗಾಂಧಿ ಪದೇ ಪದೇ ಗುಜರಾತ್‌ಗೆ ಭೇಟಿ ನೀಡಿ ಕಾರ್ಯಕರ್ತರಲ್ಲಿ ಹುರಪು ತುಂಬುವ ಕೆಲಸ ಮಾಡುತ್ತಿದ್ದಾರೆ.

ಟಾಪ್ ನ್ಯೂಸ್

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ARMY (2)

ಕಾಶ್ಮೀರದ ಉಧಂಪುರದಲ್ಲಿ ಗ್ರಾಮ ರಕ್ಷಣ ಸಿಬಂದಿ ಹತ್ಯೆ

arrested

ಮಹಾದೇವ್‌ ಆ್ಯಪ್‌ ಕೇಸು: ನಟ ಸಾಹಿಲ್‌ ಖಾನ್‌ ಬಂಧನ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

ARMY (2)

ಕಾಶ್ಮೀರದ ಉಧಂಪುರದಲ್ಲಿ ಗ್ರಾಮ ರಕ್ಷಣ ಸಿಬಂದಿ ಹತ್ಯೆ

arrested

ಮಹಾದೇವ್‌ ಆ್ಯಪ್‌ ಕೇಸು: ನಟ ಸಾಹಿಲ್‌ ಖಾನ್‌ ಬಂಧನ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.