ಗುಜರಾತ್: ವಿದ್ಯಾರ್ಥಿನಿಯರಿಗೆ ಬಿಜೆಪಿ ಸೇರುವಂತೆ ಪ್ರಾಂಶುಪಾಲರ ಸೂಚನೆ: ಕಾಂಗ್ರೆಸ್ ಆಕ್ಷೇಪ
Team Udayavani, Jun 27, 2022, 10:26 PM IST
ಗಾಂಧಿನಗರ: ಗುಜರಾತ್‌ನ ಭಾವನಗರದ ಮಹಿಳಾ ಕಾಲೇಜಿನ ಪ್ರಾಂಶುಪಾಲರು ವಿದ್ಯಾರ್ಥಿನಿಯರಿಗೆ ಬಿಜೆಪಿಯ ಪೇಜ್ ಕಮಿಟಿಯ ಸದಸ್ಯರಾಗಲು ಸೂಚಿಸಿದ್ದಾರೆ.
ಜೂ.24ರಂದು ನೀಡಿದ್ದ ಆದೇಶದಲ್ಲಿ ಪ್ರಾಂಶುಪಾಲರು ಭಾವನಗರ ಪಾಲಿಕೆ ವ್ಯಾಪ್ತಿಯಲ್ಲಿ ವಾಸ ಇರುವವರು ಪಾಸ್‌ಪೋರ್ಟ್ ಸೈಜ್ ಫೋಟೋ, ಮೊಬೈಲ್ ಫೋನ್ ಜತೆಗೆ ಬರುವಂತೆ ಸೂಚಿಸಿದ್ದಾರೆ. ಜತೆಗೆ ಸದಸ್ಯತ್ವ ಮಾಡಿಕೊಳ್ಳಿ ಎಂದು ಸೂಚಿಸಿದ್ದಾರೆ.
ಇದನ್ನೂ ಓದಿ:ಮಹೀಂದ್ರಾ ಸ್ಕಾರ್ಪಿಯೋ-ಎನ್ ಬಿಡುಗಡೆ: ಜು.30ರಿಂದ ಮುಂಗಡ ಬುಕಿಂಗ್ ಆರಂಭ
ಸ್ಥಳೀಯ ಕಾಂಗ್ರೆಸ್ ಘಟಕ ಈ ಬೆಳವಣಿಗೆ ಬಗ್ಗೆ ಆಕ್ಷೇಪ ಮಾಡಿದ್ದು, ಬಿಜೆಪಿ ಶಿಕ್ಷಣ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿದೆ.