Gujarat: ಹಿಂಬದಿಯಿಂದ ಟ್ರಕ್ಗೆ ಕಾರು ಢಿಕ್ಕಿ; ಭೀಕರ ಅಪಘಾತದಲ್ಲಿ 10 ಮಂದಿ ದುರ್ಮರಣ
Team Udayavani, Apr 17, 2024, 4:41 PM IST
ಗಾಂಧಿನಗರ್: ಕಾರು – ಟ್ರೇಲರ್ ಟ್ರಕ್ ನಡುವಿನ ಭೀಕರ ಅಪಘಾತದಲ್ಲಿ 10 ಮಂದಿ ಮೃತಪಟ್ಟಿರುವ ಘಟನೆ ಅಹಮದಾಬಾದ್-ವಡೋದರಾ ಎಕ್ಸ್ಪ್ರೆಸ್ವೇಯಲ್ಲಿ ಬುಧವಾರ(ಏ.17 ರಂದು) ನಡೆದಿರುವುದು ವರದಿಯಾಗಿದೆ.
ವಡೋದರಾದಿಂದ ಅಹಮದಾಬಾದ್ಗೆ ತೆರಳುತ್ತಿದ್ದ ಕಾರು ಮುಂದೆ ಹೋಗುತ್ತಿದ್ದ ಟ್ರೇಲರ್ ಟ್ರಕ್ ಗೆ ವೇಗವಾಗಿ ಬಂದು ಢಿಕ್ಕಿ ಹೊಡೆದಿದೆ. ಪರಿಣಾಮ ಕಾರು ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ 8 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಉಳಿದ ಇಬ್ಬರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.
ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಎರಡು ಆಂಬ್ಯುಲೆನ್ಸ್ಗಳು ಸ್ಥಳಕ್ಕೆ ಧಾವಿಸಿ ಮೃತದೇಹಗಳನ್ನು ಆಸ್ಪತ್ರೆಗೆ ಸಾಗಿಸಿದೆ. ಘಟನೆಯಲ್ಲಿ ಓರ್ವ ಗಂಭೀರ ಗಾಯಗೊಂಡಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ ಎನ್ನಲಾಗಿದೆ.
ಅಪಘಾತದಿಂದ ವಾಹನ ಸಂಚಾರಕ್ಕೆ ಅಡ್ಡಿ ಉಂಟಾಗಿದೆ. ಭೀಕರ ಅಪಘಾತದ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ.
ಸದ್ಯ ಯಾವ ರೀತಿಯಾಗಿ ಈ ಅಪಘಾತ ನಡೆದಿದೆ ಎನ್ನುವುದರ ಬಗ್ಗೆ ತಿಳಿಯಲು ತನಿಖೆ ಆರಂಭಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ
Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ
Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ
Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ
Manipal ಹಾಸ್ಪಿಟಲ್ಸ್ ಪಾಲಾದ ಮೆಡಿಕಾ ಸಿನರ್ಜಿ