ಗುರುಗ್ರಾಮ ಬಾಲಕನ ಹತ್ಯೆ: ಸರಕಾರಗಳಿಗೆ ಸುಪ್ರೀಂ ನೋಟಿಸ್
Team Udayavani, Sep 12, 2017, 8:10 AM IST
ಗುರುಗ್ರಾಮ/ಹೈದರಾಬಾದ್: ಹರ್ಯಾಣದ ಗುರುಗ್ರಾಮದಲ್ಲಿ 2ನೇ ತರಗತಿ ಬಾಲಕನ ಕತ್ತು ಸೀಳಿ ಹತ್ಯೆಗೈದ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸುವಂತೆ ಕೋರಿ ಆತನ ತಂದೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿ ದ್ದಾರೆ. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಪೀಠ, ಪ್ರಕರಣ ಸಂಬಂಧ 3 ವಾರಗಳೊಳಗೆ ವರದಿ ನೀಡುವಂತೆ ಸೂಚಿಸಿ ಕೇಂದ್ರ ಸರಕಾರ, ಹರ್ಯಾಣ ಸರಕಾರ ಹಾಗೂ ಸಿಬಿಎಸ್‌ಇಗೆ ನೋಟಿಸ್ ಜಾರಿ ಮಾಡಿದೆ. ಇದೇ ವೇಳೆ, ರ್ಯಾನ್ ಇಂಟರ್‌ನ್ಯಾಷನಲ್ ಶಾಲೆಯ ಸಿಇಒ ಮತ್ತು ನಿರ್ದೇಶಕರನ್ನು ಪೊಲೀಸರು ಬಂಧಿಸಿದ್ದಾರೆ.
ಟಾಯ್ಲೆಟ್‌ನಲ್ಲಿ ನಿಲ್ಲುವ ಶಿಕ್ಷೆ: ಗುರುಗ್ರಾಮ ಘಟನೆ ಆಕ್ರೋಶ ಹುಟ್ಟಿಸಿರುವ ನಡುವೆಯೇ ಹೈದರಾಬಾದ್‌ನ ಶಾಲೆಯೊಂದರಲ್ಲಿ ಅಮಾನವೀಯ ಘಟನೆಯೊಂದು ನಡೆದಿದೆ. ಸಮವಸ್ತ್ರ ಧರಿಸಿಕೊಂಡು ಬರಲಿಲ್ಲ ಎಂದು 5ನೇ ತರಗತಿ ವಿದ್ಯಾರ್ಥಿನಿಯನ್ನು ಹುಡುಗರ ಟಾಯ್ಲೆಟ್‌ನಲ್ಲಿ ನಿಂತುಕೊಳ್ಳುವ ಶಿಕ್ಷೆಯನ್ನು ನೀಡಲಾಗಿದೆ. ಘಟನೆ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಹೆತ್ತವರು ಮತ್ತು ಸ್ಥಳೀಯರು ಪ್ರತಿಭಟನೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್