ಹೊಸ ಸಂವತ್ಸರ ಸರ್ವರಿಗೆ ಶುಭ ತರಲಿ, ಸರಳವಾಗಿ ಹಬ್ಬ ಆಚರಿಸಿ: ಪ್ರಧಾನಿ ಮೋದಿ
Team Udayavani, Mar 25, 2020, 11:00 AM IST
ನವದೆಹಲಿ: ಇಂದು ದೇಶದ ಪ್ರಮುಖ ಹಬ್ಬಗಳಲ್ಲಿ ಒಂದಾದ ಯುಗಾದಿಯನ್ನು ಸಂಭ್ರಮ ಸಡಗರದಿಂದ ಆಚರಿಸಬೇಕಾಗಿತ್ತು. ಆದರೇ ಕೋವಿಡ್ 19 ಸಾಮಾನ್ಯ ಜನರನ್ನು ಕೂಡ ಕಂಗಾಲಾಗಿಸಿದೆ. ಹಾಗಾಗಿ ಮನೆಮಂದಿಯೆಲ್ಲಾ ಸೇರಿ ಸಂಭ್ರಮದಿಂದ ಆಚರಿಸಬೇಕಾಗಿದ್ದ ಹಬ್ಬವನ್ನು ಸರಳವಾಗಿ ಆಚರಿಸಬೇಕಾದ ಅನಿವಾರ್ಯತೆಯಿದೆ.
ಯುಗಾದಿ ಹಬ್ಬದ ಪ್ರಯುಕ್ತ ಪ್ರಧಾನಿ ಮೋದಿ ದೇಶದ ಜನತೆಗೆ ಶುಭ ಕೋರಿದ್ದಾರೆ. ಭಾರತದಾದ್ಯಂತ ಹಲವಾರು ಹಬ್ಬಗಳನ್ನು ಸಂಭ್ರಮ-ಸಡಗರದಿಂದ ಆಚರಿಸುತ್ತೇವೆ. ಹಾಗೆಯೇ ಸಾಂಪ್ರದಾಯಿಕವಾಗಿ ಯುಗಾದಿ ಭಾರತೀಯರಿಗೆ ಹೊಸ ವರುಷ ಎನಿಸಿಕೊಳ್ಳುತ್ತದೆ. ಹಾಗಾಗಿ ದೇಶದ ಎಲ್ಲಾ ಜನರಿಗೆ ಯುಗಾದಿಯ ಶುಭ ಕೋರುತ್ತೇನೆ. ಈ ಶುಭ ಸಂದರ್ಭದಲ್ಲಿ ಎಲ್ಲರಿಗೂ ಉತ್ತಮ ಆರೋಗ್ಯ , ಸಂತೋಷ, ಜೀವನದಲ್ಲಿ ಏಳಿಗೆ ಪ್ರಾಪ್ತಿಯಾಗಲಿ ಎಂದು ಟ್ವೀಟ್ ಮಾಡಿದ್ದಾರೆ.
ದೇಶದಲ್ಲಿ ಕೋವಿಡ್ 19 ಭೀತಿ ಸೃಷ್ಟಿಸಿರುವಾಗಲೇ ನಾವು ಯುಗಾದಿ ಹಬ್ಬಕ್ಕೆ ಸಾಕ್ಷಿಯಾಗಿದ್ದೇವೆ. ಹಾಗಾಗಿ ನಾವು ಪ್ರತಿವರ್ಷದಂತೆ ಈ ವರ್ಷ ಹಬ್ಬವನ್ನು ಆಚರಿಸಲಾಗುವುದಿಲ್ಲ. ಸರಳವಾಗಿ ಆಚರಿಸಿ. ಮಾತ್ರವಲ್ಲದೆ ದೃಢನಿರ್ಧಾರ ಮಾಡಿ ಕೋವಿಡ್ 19 ವಿರುದ್ಧ ಹೋರಾಡಿ ಎಂದಿದ್ದಾರೆ.
ಕರ್ನಾಟಕ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಕೂಡ ಟ್ವೀಟ್ ಮಾಡಿದ್ದು, ನಾಡಿನ ಸಮಸ್ತ ಜನತೆಗೆ ಯುಗಾದಿ ಹಬ್ಬದ ಶುಭಾಶಯಗಳು. ಹೊಸ ಸಂವತ್ಸರ ಸರ್ವರಿಗೆ ಶುಭವನ್ನು ತರಲಿ. ಕೋವಿಡ್ 19 ಸೋಂಕು ತಡೆಗಟ್ಟಲು ಮನೆಗಳಲ್ಲಿಯೇ ಯುಗಾದಿ ಆಚರಿಸಿ ಎಂದು ಕರೆನಿಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ