ಬಕ್ರೀದ್ ವೇಳೆ ಗೋರಕ್ಷಕರ ಮೇಲೆ ಕಣ್ಗಾವಲಿಗೆ ಸೂಚನೆ
Team Udayavani, Aug 22, 2017, 9:25 AM IST
ಮುಂಬಯಿ: ಮುಂದಿನ ತಿಂಗಳು ಬಕ್ರೀದ್ ಹಬ್ಬ ನಡೆಯಲಿರುವ ಹಿನ್ನೆಲೆಯಲ್ಲಿ ಗೋರಕ್ಷಕರ ಮೇಲೆ ಕಣ್ಣಿಡುವಂತೆ ಪೊಲೀಸರಿಗೆ ಬಾಂಬೆ ಹೈಕೋರ್ಟ್ ಸೂಚಿಸಿದೆ. ಆದರೆ ಈ ಬಗ್ಗೆ ಯಾವುದೇ ನಿರ್ದೇಶನಗಳನ್ನು ನೀಡುವುದಿಲ್ಲ. ಕಾನೂನು ಪಾಲನೆ ಪೊಲೀಸರ ಜವಾಬ್ದಾರಿಯಾಗಿರುತ್ತದೆ ಎಂದು ಕೋರ್ಟ್ ಹೇಳಿದೆ. ಬಕ್ರೀದ್ ವೇಳೆ ಗೋರಕ್ಷಕರು ಸಮಸ್ಯೆ ತಂದೊಡ್ಡಬಹುದು ಎಂದು ಶದಾಬ್ ಪಟೇಲ್ ಎಂಬುವವರು ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಬಾಂಬೆ ಹೈಕೋರ್ಟ್ನ ವಿಭಾಗೀಯ ಪೀಠ, ಕಾನೂನು, ಸುವ್ಯವಸ್ಥೆ ಪಾಲಿಸಬೇಕು ಎಂದು ಪೊಲೀಸರಿಗೆ ಸೂಚಿಸಿತು. ಬಕ್ರೀದ್ ವೇಳೆ ಜಾನುವಾರು ಸಾಗಾಟಗಾರರ ಮೇಲೆ ಹಲ್ಲೆ ಸಾಧ್ಯತೆ ಇದೆ, ಜನರ ರಕ್ಷಿಸಲು ಹೆಲ್ಪ್ ಲೈನ್ ಆರಂಭಿಸಲು ಸರಕಾರಕ್ಕೆ ಸೂಚಿಸಬೇಕು ಎಂದು ಅರ್ಜಿಯಲ್ಲಿ ಕೇಳಿಕೊಳ್ಳಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ