ಮುಂಬಯಿಯಲ್ಲಿ ಭಾರೀ ಮಳೆ; ಅಸ್ಸಾಂ ಪ್ರವಾಹಕ್ಕೆ ಮತ್ತಿಬ್ಬರು ಬಲಿ

Team Udayavani, Jul 17, 2020, 8:51 AM IST

ಮುಂಬಯಿಯಲ್ಲಿ ಭಾರೀ ಮಳೆ; ಅಸ್ಸಾಂ ಪ್ರವಾಹಕ್ಕೆ ಮತ್ತಿಬ್ಬರು ಬಲಿ

ಹೊಸದಿಲ್ಲಿ: ಮಹಾರಾಷ್ಟ್ರ, ಬಿಹಾರ, ಕರ್ನಾಟಕ, ತಮಿಳುನಾಡು, ಈಶಾನ್ಯ ಭಾಗ ಸೇರಿದಂತೆ ದೇಶದ ಹಲವು ಭಾಗಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು ಹಲವೆಡೆ ಪ್ರವಾಹ ಪರಿಸ್ಥಿತಿ ತಲೆದೋರಿದೆ. ಮುಂಬಯಿಯಲ್ಲಿ ಬುಧವಾರ ರಾತ್ರಿಯಿಂದ ನಿರಂತರವಾಗಿ ಮಳೆ ಸುರಿಯುತ್ತಿದೆ. ಜುಲೈ ತಿಂಗಳ ಮೊದಲ 16 ದಿನಗಳ ಕಾಲ ಇಲ್ಲಿ 1,024 ಮಿ.ಮೀ. ಮಳೆಯಾಗಿದ್ದು, ಮಾಸಿಕ ಸರಾಸರಿಗಿಂತ ಶೇ.122ರಷ್ಟು ಹೆಚ್ಚು ಮಳೆಯಾದಂತಾಗಿದೆ. ಅಲ್ಲದೆ, ಬುಧವಾರದಿಂದ ಗುರುವಾರದವರೆಗೆ 24 ಗಂಟೆಗಳಲ್ಲಿ 191.2 ಮಿ.ಮೀ. ಮಳೆ ಸುರಿಯುವ ಮೂಲಕ, 2015ರ ಬಳಿಕ ಒಂದೇ ದಿನದ ಗರಿಷ್ಠ ಮಳೆ ಎಂಬ ದಾಖಲೆ ಸೃಷ್ಟಿಯಾಗಿದೆ. ಗುರುವಾರವೂ ಕೊಂಕಣ ಪ್ರದೇಶ, ರಾಯಗಡ, ರತ್ನಗಿರಿ, ಥಾಣೆ ಸೇರಿದಂತೆ ಬಹುತೇಕ ಕಡೆ ಧಾರಾಕಾರ ಮಳೆಯಾಗಿದೆ. ಭಾರೀ ಮಳೆಯ ಮುನ್ಸೂಚನೆ ಇದ್ದ ಕಾರಣ ಮುಂಬಯಿಯಲ್ಲಿ ರೆಡ್‌ ಅಲರ್ಟ್‌ ಘೋಷಿಸಿ ಬುಧವಾರವೇ ಹವಾಮಾನ ಇಲಾಖೆಯು ಆದೇಶ ಹೊರಡಿಸಿತ್ತು.

68ಕ್ಕೇರಿಕೆ: ಅಸ್ಸಾಂನಲ್ಲಿ ಗುರುವಾರ ಪ್ರವಾಹದಲ್ಲಿ ಮತ್ತಿಬ್ಬರು ಕೊಚ್ಚಿಹೋಗಿದ್ದು, ಮಳೆ ಹಾಗೂ ಪ್ರವಾಹ ಸಂಬಂಧಿ ಘಟನೆಯಿಂದ ಮೃತಪಟ್ಟವರ ಸಂಖ್ಯೆ 68ಕ್ಕೇರಿದೆ. ನೆರೆಯಿಂದಾಗಿ 30 ಜಿಲ್ಲೆಗಳ 4500 ಗ್ರಾಮಗಳ 48 ಲಕ್ಷಕ್ಕೂ ಅಧಿಕ ಮಂದಿ ಅತಂತ್ರರಾಗಿದ್ದಾರೆ.

66 ಪ್ರಾಣಿಗಳ ಸಾವು: ಪ್ರವಾಹದಿಂದಾಗಿ ಕಾಜಿರಂಗಾ ರಾಷ್ಟ್ರೀಯ ಉದ್ಯಾನ ಮುಳುಗಡೆಯಾಗಿದ್ದು, ಈವರೆಗೆ 66 ಪ್ರಾಣಿಗಳು ಸಾವಿಗೀಡಾಗಿವೆ. 170ರಷ್ಟು ಪ್ರಾಣಿಗಳನ್ನು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸಲಾಗಿದೆ.

ಕುಸಿದ 3 ಕಟ್ಟಡ: ನಾಲ್ವರ ಸಾವು
ಧಾರಾಕಾರ ಮಳೆಯಿಂದಾಗಿ ಗುರುವಾರ ಮುಂಬಯಿಯಲ್ಲಿ 3 ಕಟ್ಟಡಗಳು ಭಾಗಶಃ ಕುಸಿದಿದ್ದು, ನಾಲ್ವರು ಮೃತಪಟ್ಟ ಘಟನೆ ನಡೆದಿದೆ. ಘಟನೆಯಲ್ಲಿ ಸುಮಾರು 15ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಫೋರ್ಟ್‌ ಏರಿಯಾದಲ್ಲಿ 7 ಮಹಡಿಯ ಕಟ್ಟಡ ಕುಸಿದುಬಿದ್ದ ಪರಿಣಾಮ, ಕನಿಷ್ಠ ಇಬ್ಬರು ಮೃತಪಟ್ಟು, ಮತ್ತಿಬ್ಬರು ಗಾಯಗೊಂಡಿದ್ದಾರೆ. ಮಲ್ವಾನಿ ಎಂಬಲ್ಲಿ 3 ಅಂತಸ್ತಿನ ಮನೆಯ ಒಂದು ಭಾಗ ಕುಸಿದು ಬಿದ್ದು, ಇಬ್ಬರು ಸಾವಿಗೀಡಾಗಿದ್ದಾರೆ. 13 ಮಂದಿ ಗಾಯಗೊಂಡಿದ್ದಾರೆ. ಇದಕ್ಕೂ ಮುನ್ನ, ಥಾಣೆಯಲ್ಲಿ 3 ಮಹಡಿಯ ಕಟ್ಟಡವು ಭಾಗಶಃ ಕುಸಿದುಬಿದ್ದಿದೆ. ಆದರೆ ಅದೃಷ್ಟವಶಾತ್‌ ಈ ಘಟನೆಯಲ್ಲಿ ಸಾವು-ನೋವು ಸಂಭವಿಸಿಲ್ಲ.

ಟಾಪ್ ನ್ಯೂಸ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

10-fusion

UV Fusion: ಭಕ್ತಿಯ ಜಾತ್ರೆ ನೋಡುವುದೇ ಚೆಂದ

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

9-fusion

Drama: ಪ್ರೇಕ್ಷಕರ ಮನಗೆದ್ದ “ಸೀತಾರಾಮ ಚರಿತಾ”

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.