Himachal Pradesh: ಭಾರೀ ಮಳೆ ಮತ್ತು ಭೂಕುಸಿತದಿಂದ ರಸ್ತೆ ಬಂದ್; 50 ಮಂದಿಯ ರಕ್ಷಣೆ
Team Udayavani, Aug 26, 2023, 12:15 AM IST
ಶಿಮ್ಲಾ: ಹಿಮಾಚಲ ಪ್ರದೇಶದ ಮಂಡಿ ಜಿಲ್ಲೆಯಲ್ಲಿ ಭಾರೀ ಮಳೆ ಹಾಗೂ ಭೂಕುಸಿತದಿಂದ ಸಿಲುಕಿದ್ದ 50ಕ್ಕೂ ಹೆಚ್ಚು ಮಂದಿಯನ್ನು ರಾಷ್ಟ್ರೀಯ ವಿಪತ್ತು ನಿರ್ವಹಣಾ ದಳದ(ಎನ್ಡಿಆರ್ಎಫ್) ಸಿಬಂದಿ ರಕ್ಷಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಭಾರೀ ಮಳೆ ಮತ್ತು ಭೂಕುಸಿತದಿಂದ ಮಂಡಿ ಜಿಲ್ಲೆಯಲ್ಲಿ ಹಲವು ರಸ್ತೆಗಳು ಬಂದ್ ಆಗಿವೆ. ಇದರಿಂದ ಗ್ರಾಮಸ್ಥರು ಅಪಾಯ ದಲ್ಲಿ ಸಿಲುಕಿದ್ದರು. ಎನ್ಡಿಆರ್ಎಫ್ ಸಿಬಂದಿ ಸುಮಾರು 15 ಕಿ.ಮೀ. ನಡಿಗೆ ಮೂಲಕ ಪ್ರಯಾ ಣಿಸಿ, 15 ಮಕ್ಕಳು ಸೇರಿದಂತೆ 52 ಮಂದಿ ಗ್ರಾಮಸ್ಥರನ್ನು ರಕ್ಷಿಸಿ, ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ಇನ್ನೊಂದೆಡೆ ಇತ್ತೀಚಿಗೆ ಸುರಿದ ನಿರಂತರ ಮಳೆಯ ಪರಿಣಾಮ ಬಲಾಡ್ ನದಿಯ ಹರಿವು ಹೆಚ್ಚಿದೆ. ಇದರ ಪರಿ ಣಾಮವಾಗಿ ಬಡ್ಡಿ ಕೈಗಾರಿಕಾ ಪ್ರದೇಶ ಹಾಗೂ ಪಿಂಜೌರ್ ಸಂಪರ್ಕಿಸುವ ಮಾರನ್ವಾಲಾ ಸೇತುವೆ ನೀರಿನಲ್ಲಿ ಕೊಚ್ಚಿ ಹೋಗಿದೆ. ಘಟನೆಯಲ್ಲಿ ಯಾವುದೇ ಸಾವು-ನೋವು ಸಂಭವಿಸಿಲ್ಲ. ಭಾರೀ ಮಳೆಯ ಕಾರಣ ರಾಜ್ಯದಲ್ಲಿ 709 ರಸ್ತೆಗಳು ಬಂದ್ ಆಗಿವೆ. ಜೂ.24ರಿಂದ ಇಲ್ಲಿಯವರೆಗೆ ಮಳೆಗೆ ಸಂಬಂಧಿಸಿದ ಘಟನೆಗಳಿಂದ 242 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಲ್ಮಾನ್ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ
Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ
Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ
ಧ್ರುವ್ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್ ಪೋಸ್ಟ್ನ ಸತ್ಯಾಸತ್ಯತೆ ಏನು?
ಇನ್ಸ್ಟಾ ಪ್ರೊಫೈಲ್ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..
MUST WATCH
ಹೊಸ ಸೇರ್ಪಡೆ
Gangolli: ಸ್ವಯಂ ಪ್ರೇರಣೆಯಿಂದ ಚಿತ್ರ ಕಲಾವಿದೆಯಾದ ತುಳಸಿ
ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ
ಗುಲ್ವಾಡಿ: ಗುಜಿರಿ ಅಂಗಡಿಯಲ್ಲಿ ಅರಳಿದ ಗ್ರಂಥಾಲಯ-ತರಂಗ ವಾರಪತ್ರಿಕೆ ಪ್ರೇರಣೆ
Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್ಗೆ ಮತಹಾಕಲಿ: ಯೋಗೇಂದ್ರ ಯಾದವ್
Manipal ಆಸ್ಪತ್ರೆಯ ಡಾ.ರಾಮದಾಸ್ ಪೈ ಬ್ಲಾಕ್; 161 ವಿಶೇಷ ಹಾಸಿಗೆಗಳ ವಾರ್ಡ್ ಸೇವೆ ಆರಂಭ