ಕೇರಳ, ತಮಿಳುನಾಡಿನಲ್ಲಿ ಇಂದಿನಿಂದ ಭಾರೀ ಮಳೆ

ಭಾರತೀಯ ಹವಾಮಾನ ಇಲಾಖೆಯಿಂದ ಮುನ್ನೆಚ್ಚರಿಕೆ

Team Udayavani, Oct 20, 2021, 6:50 AM IST

ಕೇರಳ, ತಮಿಳುನಾಡಿನಲ್ಲಿ ಇಂದಿನಿಂದ ಭಾರೀ ಮಳೆ

ಹೊಸದಿಲ್ಲಿ: ಈಗಾಗಲೇ ಮಳೆರಾಯನ ದಾಳಿಯಿಂದ ತತ್ತರಿಸಿ ಹೋಗಿರುವ ಕೇರಳದಲ್ಲಿ ಅ. 20ರಿಂದ 23ರ ಅವಧಿಯಲ್ಲಿ ಮತ್ತಷ್ಟು ಧಾರಾಕಾರವಾಗಿ ಮಳೆ ಸುರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ.

ಕೇರಳ ಮಾತ್ರವಲ್ಲದೆ, ತಮಿಳುನಾಡು, ಪುದುಚೇರಿಯಲ್ಲೂ ಧಾರಾಕಾರ ಮಳೆಯಾಗಲಿದೆ ಎಂದಿರುವ ಇಲಾಖೆ, ಲಡಾಖ್‌ ಹಾಗೂ ಜಮ್ಮು ಕಾಶ್ಮೀರದಲ್ಲಿ ಅತೀವ ಹಿಮಪಾತವಾಗ ಲಿದೆ ಎಂದು ಮುನ್ನೆಚ್ಚರಿಕೆ ನೀಡಿದೆ.

ಕಳೆದ ಮೂರು ದಿನಗಳಿಂದ ಕೇರಳದಲ್ಲಿ ಅಗಾಧವಾಗಿ ಸುರಿದ ಮಳೆಯಿಂದಾಗಿ ಅಲ್ಲಿನ ಜನಜೀವನ ಅಸ್ತವ್ಯಸ್ತಗೊಂಡಿದೆ. ಈಗಾಗಲೇ ಅಲ್ಲಿ 30 ನಾಗರಿಕರು ಸಾವನ್ನಪ್ಪಿದ್ದಾರೆ. ಅಲ್ಲಿನ ಎಲ್ಲ ಅಣೆಕಟ್ಟುಗಳೂ ತುಂಬಿದ್ದು ಎಲ್ಲೆಡೆ ಹೈ ಅಲರ್ಟ್‌ ಘೋಷಿಸಲಾಗಿದೆ. ಇದರ ನಡುವೆಯೇ ಮತ್ತಷ್ಟು ಮಳೆ ಸುರಿಯುವ ಬಗ್ಗೆ ಐಎಂಡಿ ಹೇಳಿರುವುದು ಮತ್ತಷ್ಟು ಆತಂಕ ಸೃಷ್ಟಿಸಿದೆ.

11 ಜಿಲ್ಲೆಗಳಲ್ಲಿ ಆರೆಂಜ್‌ ಅಲರ್ಟ್‌: ಅ. 20ರಂದು ತಿರುವನಂತಪುರ, ಪತ್ತನಂತಿಟ್ಟ, ಕೊಟ್ಟಾಯಂ, ಎರ್ನಾಕುಲಂ, ಇಡುಕ್ಕಿ, ತೃಶೂರ್‌, ಪಾಲಕ್ಕಾಡ್‌, ಮಲ ಪ್ಪುರಂ, ಕೋಳಿಕ್ಕೋಡ್‌, ವಯನಾಡ್‌ ಹಾಗೂ ಕಣ್ಣೂರುಗಳಲ್ಲಿ ಅ. 20ರಂದು ಹೆಚ್ಚು ಮಳೆ ಸುರಿ ಯಲಿದೆ ಎಂದು ಐಎಂಡಿ ತಿಳಿಸಿದೆ.

ಇದಕ್ಕೆ ಹೆಚ್ಚುವರಿಯಾಗಿ ಕೇರಳದ ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳನ್ನು ಹೊರತುಪಡಿಸಿ ಉಳಿದೆಲ್ಲ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ (6ರಿಂದ 20 ಸೆಂ.ಮೀ. ಮಳೆಯಾಗುವ ಸಾಧ್ಯತೆ) ಘೋಷಿಸಿದೆ.

ಅಣೆಕಟ್ಟುಗಳ ಗೇಟ್‌ ಓಪನ್‌
ಮಳೆಯಿಂದಾಗಿ ಕೇರಳದ ನಾನಾ ಭಾಗಗಳಲ್ಲಿರುವ ಅಣೆಕಟ್ಟುಗಳು ತುಂಬಿವೆ. ಈ ಹಿನ್ನೆಲೆಯಲ್ಲಿ ಪ್ರಮುಖ ಅಣೆಕಟ್ಟು ಗಳಾದ ಇಡುಕ್ಕಿ, ಇದಮಲಯಾರ್‌, ಪಂಬಾ ಹಾಗೂ ಕಕ್ಕಿಯಿಂದ ಯಥೇತ್ಛ ನೀರನ್ನು ಹರಿಯಬಿಡ ಲಾಗಿದೆ. ಇದರಿಂದಾಗಿ ಈ ನದಿ ಪಾತ್ರದಲ್ಲಿ ಬರುವ ನಗರಗಳು, ಗ್ರಾಮಗಳಲ್ಲಿನ ಜನರು ಸುರಕ್ಷಿತ ಸ್ಥಳಗಳಿಗೆ ತೆರಳಬೇಕೆಂದು ಸಂಬಂಧಪಟ್ಟ ಜಿಲ್ಲಾಡಳಿತಗಳು ಸೂಚನೆ ನೀಡಿವೆ.

ಬಂಗಾಲದಲ್ಲೂ ವರುಣನ ಆರ್ಭಟ: ಪಶ್ಚಿಮ ಬಂಗಾಲದ ಎಲ್ಲ ಜಿಲ್ಲೆಗಳಲ್ಲಿ ಗುರುವಾರ ಮಳೆ ವ್ಯಾಪಕವಾಗಿ ಸುರಿಯಲಿದೆ ಎಂದು ಐಎಂಡಿಯ ಅಧಿಕಾರಿ ಯೊಬ್ಬರು ತಿಳಿಸಿದ್ದಾರೆ. ಈ ನಡುವೆ, ಕಲೀಮ್‌ಪಾಂಗ್‌ ಜಿಲ್ಲೆಯ ಝಾಲೊಂಗ್‌ ಪ್ರಾಂತ್ಯದಲ್ಲಿ ಸೋಮವಾರ -ಮಂಗಳವಾರ ನಡುವಿನ 24 ಗಂಟೆಗಳ ಅವಧಿಯಲ್ಲಿ 200 ಮಿ.ಮೀ. ಗಳಷ್ಟು ಮಳೆಯಾಗಿದೆ.

ಇದನ್ನೂ ಓದಿ:ಪಿಎನ್‌ಬಿ ಹಗರಣದ ಪ್ರಮುಖ ಆರೋಪಿ ದೇಶಭ್ರಷ್ಟ ನೀರವ್‌ ಮೋದಿಗೆ ಮತ್ತೆ ನಿರಾಶೆ

ಇದೇ ಅವಧಿಯಲ್ಲಿ ಡಾರ್ಜಿಲಿಂಗ್‌ನಲ್ಲಿ 170 ಮಿ.ಮೀ., ಪೆಡಾಂಗ್‌ ಹಾಗೂ  ಕ್ಯಾನಿಂಗ್‌ನಲ್ಲಿ 100 ಮೀ., ಡೈಮಂಡ್‌ ಹಾರ್ಬರ್‌ನಲ್ಲಿ 90 ಮಿ.ಮೀ. ಹಾಗೂ ಪುರುಲಿಯಾದಲ್ಲಿ 80 ಮಿ.ಮೀ. ಮಳೆಯಾಗಿದೆ. ಡಾರ್ಜಿಲಿಂಗ್‌, ಸಿಕ್ಕಿಂ, ಕಲೀಂಪೋಗ್‌ನ ಕೆಲವು ಪ್ರಾಂತ್ಯಗಳಲ್ಲಿ ಅತೀ ಮಳೆಯಿಂದಾಗಿ ಭೂಕುಸಿತವೂ ಉಂಟಾಗಿದೆ ಎಂದು ಐಎಂಡಿ ತಿಳಿಸಿದೆ.

ಮಕ್ಕಳ ಮದುವೆ ಮುಂದೂಡಿದ ಮಹಾರಾಷ್ಟ್ರ ರೈತರು
ಮಹಾರಾಷ್ಟ್ರದಲ್ಲಿ ಇತ್ತೀಚೆಗೆ ಸುರಿದ ಮಳೆಯಿಂದಾಗಿ ಮುಂಗಾರು ಫ‌ಸಲು ನಷ್ಟವಾಗಿರುವುದು ಅಲ್ಲಿನ ರೈತರ ಮಕ್ಕಳ ಜೀವನದ ಮೇಲೂ ಪರಿಣಾಮ ಬೀರಿದೆ. ಮುಂಗಾರು ಫ‌ಸಲನ್ನು ಮಾರಾಟ ಮಾಡಿ ಬಂದ ಹಣದಿಂದ ತಮ್ಮ ಮಕ್ಕಳ ಮದುವೆ ಮಾಡಬೇಕೆಂದು ಕನಸು ಕಂಡಿದ್ದ ವಿಹಾಮಂದ್ವ, ಔರಂಗಾಬಾದ್‌, ಪೈತಾನ್‌ ಪ್ರಾಂತ್ಯಗಳ ಅನೇಕ ರೈತ ಕುಟುಂಬಗಳು, ಈಗಾಗಲೇ ತಮ್ಮ ಮಕ್ಕಳಿಗೆ ಮದುವೆ ನಿಶ್ಚಯ ಮಾಡಿದ್ದರು. ಅಸಲಿಗೆ ಈ ಪ್ರಾಂತ್ಯಗಳು ಈವರೆಗೆ ಕಡಿಮೆ ಮಳೆ ಬೀಳುವ ಪ್ರಾಂತ್ಯಗಳೆಂದೇ ಗುರುತಿಸಲ್ಪಟ್ಟಿರುವಂಥವು. ಈ ಭಾಗದಲ್ಲಿ ವಾರ್ಷಿಕವಾಗಿ, ಒಟ್ಟಾರೆ 564.6 ಮಿ.ಮೀ. ಮಳೆಯಾಗುತ್ತಿತ್ತು. ಆದರೆ, ಈ ವರ್ಷ ಇನ್ನೇನು ಮುಂಗಾರು ಫ‌ಸಲು ಕೈ ಸೇರುವ ಹೊತ್ತಿಗೆ 1,365.9 ಮಿ.ಮೀ.ನಷ್ಟು ಮಳೆಯಾಗಿದೆ. ಇದರಿಂದ ಬೆಳೆಗಳು ನಾಶವಾಗಿ, ರೈತರು ನಷ್ಟ ಅನುಭವಿಸಿದ್ದಾರೆ. ಅದರಿಂದ ಅವರ ಮಕ್ಕಳ ಮದುವೆಗಳೂ ಮುಂದಕ್ಕೆ ಹೋಗಿವೆ ಎನ್ನಲಾಗಿದೆ.

ಟಾಪ್ ನ್ಯೂಸ್

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌

Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!

Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.