Heroin smuggling case: ಎನ್ ಐಎ ಯಿಂದ ಲಾರೆನ್ಸ್ ಬಿಷ್ಣೋಯ್ ವಿರುದ್ಧ ಚಾರ್ಜ್ ಶೀಟ್
Team Udayavani, Oct 19, 2023, 7:49 PM IST
ಹೊಸದಿಲ್ಲಿ: ಗುಜರಾತ್ ಪೊಲೀಸರು ಸುಮಾರು 39 ಕೆಜಿ ಹೆರಾಯಿನ್ ವಶಪಡಿಸಿಕೊಂಡ ಪ್ರಕರಣದಲ್ಲಿ ದರೋಡೆಕೋರ ಲಾರೆನ್ಸ್ ಬಿಷ್ಣೋಯ್ ವಿರುದ್ಧ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಗುರುವಾರ ಚಾರ್ಜ್ ಶೀಟ್ ಸಲ್ಲಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಭಾರತೀಯ ದಂಡ ಸಂಹಿತೆಯ ಸೆಕ್ಷನ್ 120-ಬಿ (ಕ್ರಿಮಿನಲ್ ಪಿತೂರಿ), 201 (ಸಾಕ್ಷಾಧಾರಗಳ ಕಣ್ಮರೆಗೆ ಕಾರಣವಾಗುವುದು), 465 (ನಕಲಿ) ಮತ್ತು 471 (ವಂಚನೆ) ಅಡಿಯಲ್ಲಿ ವಿಶೇಷ ನ್ಯಾಯಾಲಯದಲ್ಲಿ ಪೂರಕ ಚಾರ್ಜ್ ಶೀಟ್ ಅನ್ನು ಸಲ್ಲಿಸಿದ್ದಾರೆ. ಜತೆಗೆ ಮಾಹಿತಿ ತಂತ್ರಜ್ಞಾನ ಕಾಯಿದೆಯ ನಿಬಂಧನೆಗಳು, ನಾರ್ಕೋಟಿಕ್ ಡ್ರಗ್ಸ್ ಮತ್ತು ಸೈಕೋಟ್ರೋಪಿಕ್ ಸಬ್ಸ್ಟೆನ್ಸ್ (NDPS) ಕಾಯ್ದೆ ಮತ್ತು ಭಯೋತ್ಪಾದನಾ ವಿರೋಧಿ ಕಾನೂನು ಕಾನೂನುಬಾಹಿರ ಚಟುವಟಿಕೆಗಳ (Prevention) ಕಾಯ್ದೆಯಲ್ಲಿ ಚಾರ್ಜ್ ಶೀಟ್ ಸಲ್ಲಿಸಿರುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಆರಂಭದಲ್ಲಿ ಅಹಮದಾಬಾದ್ ಭಯೋತ್ಪಾದನಾ ನಿಗ್ರಹ ದಳ (ATS) ಸೆಪ್ಟೆಂಬರ್ 15, 2022 ರಂದು ಎಫ್ಐಆರ್ ದಾಖಲಿಸಿತ್ತು.