ಹಿಮಾಚಲ ಸಿಎಂಗೆ ಸೇರಿದ ಫಾರ್ಮ್ಹೌಸ್ ಮುಟ್ಟುಗೋಲು
Team Udayavani, Apr 4, 2017, 3:45 AM IST
ನವದೆಹಲಿ: ಅಕ್ರಮ ಆಸ್ತಿ ಕುರಿತು ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ, ಹಿಮಾಚಲಪ್ರದೇಶ ಮುಖ್ಯಮಂತ್ರಿ ವೀರಭದ್ರ ಸಿಂಗ್ ಅವರ ಕುಟುಂಬಕ್ಕೆ ಸೇರಿದ, 27 ಕೋಟಿ ರೂ. ಮೌಲ್ಯದ ಫಾರ್ಮ್ಹೌಸ್ ಅನ್ನು ಮುಟ್ಟುಗೋಲು ಹಾಕಿಕೊಂಡಿದೆ. ದಕ್ಷಿಣ ದೆಹಲಿಯ ಮೆಹೌಲಿಯಲ್ಲಿರುವ ಈ ಫಾರ್ಮ್ಹೌಸ್ನ ಸರ್ಕಾರಿ ಮೌಲ್ಯ 6.6 ಕೋಟಿ ರೂ. ಇದ್ದು, ಮಾರುಕಟ್ಟೆ ಮೌಲ್ಯ 27 ಕೋಟಿ ರೂ.ಗಳಾಗಿದೆ. 10 ಕೋಟಿ ರೂ. ಅಕ್ರಮ ಹಣ ಹೊಂದಿದ್ದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸುತ್ತಿರುವ ಸಿಬಿಐ, ಇತ್ತೀಚೆಗಷ್ಟೇ ವೀರಭದ್ರಸಿಂಗ್ ಹಾಗೂ ಅವರ ಪತ್ನಿ ಸೇರಿ ಹಲವರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿತ್ತು. ಈ ಕ್ರಮದ ಬೆನ್ನಲ್ಲೇ ಜಾರಿ ನಿರ್ದೇಶನಾಲಯ ಕೂಡ ಕಠಿಣ ಕ್ರಮಕ್ಕೆ ಮುಂದಾಗಿದೆ. ಹಿಮಾಚಲಪ್ರದೇಶ ಸಿಎಂ ವಿರುದ್ಧ ಸಲ್ಲಿಕೆಯಾಗಿರುವ ಚಾರ್ಜ್ ಶೀಟ್ ಕುರಿತ ವಿಚಾರಣೆಯನ್ನು ವಿಶೇಷ ನ್ಯಾಯಲಯವು ಬರುವ ವಾರ ಕೈಗೆತ್ತಿಕೊಳ್ಳುವ ಸಾಧ್ಯತೆಯಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ