ಬಸ್ಗೂ ತಟ್ಟಿದ ಭಾಷೆ ಬಿಸಿ
Team Udayavani, Jul 8, 2019, 5:46 AM IST
ಚೆನ್ನೈ: ತಮಿಳುನಾಡಿನಲ್ಲಿ ಈಗ ಸರ್ಕಾರಿ ಬಸ್ಸುಗಳು ಕೂಡ ‘ಭಾಷಾ ವಿವಾದ’ಕ್ಕೆ ತುತ್ತಾಗಿವೆ. ಇತ್ತೀಚೆಗಷ್ಟೇ ತಮಿಳುನಾಡು ಸರ್ಕಾರವು 500 ಹೊಸ ಬಸ್ಸುಗಳನ್ನು ಖರೀದಿಸಿತ್ತು. ಈ ಬಸ್ಸುಗಳಲ್ಲಿ ‘ತುರ್ತು ನಿರ್ಗಮನ’ ಸೇರಿದಂತೆ ಪ್ರಯಾಣಿಕರಿಗೆ ಅಗತ್ಯವಾದ ಹಲವು ಸೂಚನೆಗಳನ್ನು ಹಿಂದಿ ಭಾಷೆಯಲ್ಲಿ ಪ್ರಕಟಿಸಲಾಗಿತ್ತು. ಹಿಂದಿ ಭಾಷೆಯ ಸ್ಟಿಕರ್ಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಲು ಶುರುವಾದಂತೆ, ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಡಿಎಂಕೆ ಹಾಗೂ ತಮಿಳು ಹೋರಾಟಗಾರರು, ಹಿಂದಿ ಹೇರಿಕೆ ವಿರುದ್ಧ ಸಿಡಿದೆದ್ದಿದ್ದಾರೆ. ಬಿಸಿ ತಟ್ಟುತ್ತಲೇ ಎಚ್ಚೆತ್ತ ಸರ್ಕಾರ ಹಿಂದಿ ಸ್ಟಿಕರ್ಗಳನ್ನು ತೆಗೆದುಹಾಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಜಗತ್ತಿಗಿಂತ ಮೊದಲು ಪಾಕ್ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್ ದಾಳಿ ಬಗ್ಗೆ ಪ್ರಧಾನಿ
Encounter: ಛತ್ತೀಸ್ಗಢದಲ್ಲಿ ಎನ್ಕೌಂಟರ್… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ
Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್
Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ