ಸಾವರ್ಕರ್‌ ಬಗ್ಗೆ ಹೆಚ್ಚು ಅಧ್ಯಯನ ನಡೆದಿಲ್ಲ

Team Udayavani, Nov 15, 2019, 10:15 PM IST

ನವದೆಹಲಿ: ದೇಶದ ಇತಿಹಾಸಕಾರರು ವೀರ ಸಾವರ್ಕರ್‌ ಸೇರಿದಂತೆ ಹಲವು ಸ್ವಾತಂತ್ರ್ಯ ಹೋರಾಟಗಾರರ ಬಗ್ಗೆ ಸರಿಯಾದ ರೀತಿಯಲ್ಲಿ ಅಧ್ಯಯನ ನಡೆಸಿಲ್ಲ. ಹೀಗಾಗಿ ಅವರ ನಿಜವಾಗಿ ತ್ಯಾಗ, ಕೊಡುಗೆಗಳನ್ನು ಮಾಡಿದ್ದರೂ, ಸಾರ್ವಜನಿಕರಿಗೆ ಅದರ ಬಗ್ಗೆ ಮಾಹಿತಿ ಇಲ್ಲವೆಂದು ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಹೇಳಿದ್ದಾರೆ.

ನವದೆಹಲಿಯಲ್ಲಿ “ಸಾವರ್ಕರ್‌’ ಎಂಬ ಶೀರ್ಷಿಕೆಯ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಅವರು ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಕೆಲವು ಇತಿಹಾಸಕಾರರು ಸಾವರ್ಕರ್‌ ಮತ್ತು ಇತರರ ಬಗ್ಗೆ ನಕಾರಾತ್ಮಕ ಅಂಶಗಳ ಬಗ್ಗೆಯೇ ಹೆಚ್ಚು ಪ್ರಚಾರ ನೀಡಿದ್ದಾರೆ ಎಂದು ವಿಷಾದಿಸಿದ್ದಾರೆ.


ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ