ಜಮ್ಮು-ಕಾಶ್ಮೀರ; ಸೇನೆ, ಪೊಲೀಸ್ ಜಂಟಿ ಕಾರ್ಯಾಚರಣೆ, ಹಿಜ್ಬುಲ್ ಉಗ್ರ ಜುನೈದ್ ಬಂಧನ
ಹಿಜ್ಬುಲ್ ಉಗ್ರ ಜುನೈದ್ ಹಲವಾರು ಭಯೋತ್ಪಾದಕ ಸಂಬಂಧಿತ ಘಟನೆಗಳಲ್ಲಿ ಬೇಕಾದ ವ್ಯಕ್ತಿಯಾಗಿದ್ದ.
Team Udayavani, Feb 22, 2020, 6:16 PM IST
ಶ್ರೀನಗರ್: ಜಮ್ಮು-ಕಾಶ್ಮೀರದ ಭದ್ರತಾ ಪಡೆಗಳ ಮಹತ್ವದ ಕಾರ್ಯಾಚರಣೆಯಲ್ಲಿ ಹಿಜ್ಬುಲ್ ಮುಜಾಹಿದೀನ್ ಉಗ್ರಗಾಮಿ ಸಂಘಟನೆಯ ನಾಯಕನನ್ನು ಶನಿವಾರ ಬಂಧಿಸಿದ್ದು, ಈತನನ್ನು ಜುನೈದ್ ಫಾರೂಖ್ ಪಂಡಿತ್ ಎಂದು ಗುರುತಿಸಲಾಗಿದೆ ಎಂದು ವರದಿ ತಿಳಿಸಿದೆ.
ಹಿಜ್ಬುಲ್ ಉಗ್ರ ಜುನೈದ್ ಹಲವಾರು ಭಯೋತ್ಪಾದಕ ಸಂಬಂಧಿತ ಘಟನೆಗಳಲ್ಲಿ ಬೇಕಾದ ವ್ಯಕ್ತಿಯಾಗಿದ್ದ. ಗುಪ್ತಚರ ಇಲಾಖೆ ನೀಡಿದ ಖಚಿತ ಮಾಹಿತಿ ಆಧಾರದ ಮೇಲೆ ಬಾರಾಮುಲ್ಲಾ ಜಿಲ್ಲೆಯ ಟಪ್ಪಾರ್ ಪಟ್ಟಾನ್ ಪ್ರದೇಶದಲ್ಲಿ ಕಾರ್ಯಾಚರಣೆ ನಡೆಸಿ ಸೆರೆ ಹಿಡಿಯಲಾಯಿತು ಎಂದು ವರದಿ ವಿವರಿಸಿದೆ.
ಜಮ್ಮು ಕಾಶ್ಮೀರ ಪೊಲೀಸರು, ಸೇನೆ ಹಾಗೂ ಸಿಆರ್ ಪಿಎಫ್ ಜಂಟಿ ಕಾರ್ಯಾಚರಣೆಯಲ್ಲಿ ಉಗ್ರನನ್ನು ಬಂಧಿಸಲಾಗಿದೆ. ಬಾರಾಮುಲ್ಲಾ ಡಿಐಜಿ ಎಂ.ಸುಲೇಮಾನ್ ಈ ಕುರಿತು ಮಾಹಿತಿ ನೀಡಿದ್ದು, ಹಿಜ್ಬುಲ್ ಮುಜಾಹಿದೀನ್ ಸಂಘಟನೆಯ ಸ್ಥಳೀಯ ಉಗ್ರ ಜುನೈದ್ ಫಾರೂಖ್ ನನ್ನು ಬಂಧಿಸಲಾಗಿದೆ ಎಂದು ತಿಳಿಸಿದರು.
ಬಂಧಿತ ಉಗ್ರನಿಂದ ಒಂದು ಚೀನಾ ತಯಾರಿಕೆಯ ಪಿಸ್ತೂಲ್, 13 ಜೀವಂತ ಗುಂಡುಗಳು, 2 ಮ್ಯಾಜಜೀನ್ಸ್ ಗಳನ್ನು ವಶಪಡಿಸಿಕೊಳ್ಳಲಾಗಿದೆ. ಜುನೈದ್ ವಿಚಾರಣೆ ಮುಂದುವರಿದಿದೆ ಎಂದು ಡಿಐಜಿ ಪತ್ರಿಕಾಗೋಷ್ಠಿಯಲ್ಲಿ ವಿವರಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!
ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್ ರೆಡ್ಡಿ ಲೆಕ್ಕಚಾರವೇನು!
Delhi ; ಬಿಕಿನಿಯಲ್ಲೇ ಬಸ್ ಹತ್ತಿದ ಮಹಿಳೆ; ವಿಡಿಯೋ ವೈರಲ್
EVM VVPAT case: ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ
Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ
MUST WATCH
ಹೊಸ ಸೇರ್ಪಡೆ
Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!
Election; ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು
Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್
ದಳಪತಿ ಅಭಿಮಾನಿಗಳ ಟ್ರೋಲ್ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?
RCB: ಈ ಸಲ ಕಪ್ ನಮ್ಮದು…