ಗುಂಡಿನ ಚಕಮಕಿಯಲ್ಲಿ ಹಿಜ್ಬುಲ್ ಉಗ್ರ ಸಾವು
Team Udayavani, May 18, 2020, 6:01 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಜಮ್ಮು: ಜಮ್ಮು-ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಭಾನುವಾರ ನಡೆದ ಗುಂಡಿನ ಚಕಮಕಿಯಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆಯ ಭಯೋತ್ಪಾದಕನೊಬ್ಬ ಮೃತಪಟ್ಟಿದ್ದಾನೆ.
ಇದೇ ವೇಳೆ, ಸೇನಾಪಡೆಯ ಯೋಧನೊಬ್ಬ ಹುತಾತ್ಮನಾಗಿದ್ದಾನೆ.
ದೋಡಾ ಪಟ್ಟಣಕ್ಕೆ 26 ಕಿ.ಮೀ.ದೂರದ ಗುಂಡಾನಾ ವಲಯದ ಪೋಸ್ಟಾ-ಪೋತ್ರಾ ಹಳ್ಳಿಯಲ್ಲಿ ಭಯೋತ್ಪಾದಕರು ತಂಗಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಸೇನಾಪಡೆ ಈ ಪ್ರದೇಶದಲ್ಲಿ ಕಾರ್ಯಾಚರಣೆ ನಡೆಸಿತು.
ಈ ವೇಳೆ ನಡೆದ ಗುಂಡಿನ ಚಕಮಕಿಯಲ್ಲಿ ಉಗ್ರನೊಬ್ಬ ಮೃತಪಟ್ಟಿದ್ದಾನೆ. ಇದೇ ವೇಳೆ, ಸೇನಾಪಡೆಯ ಯೋಧ ಗಾಯಗೊಂಡಿದ್ದು, ಬಳಿಕ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಉಗ್ರರ ತೆರವಿಗೆ ಕಾರ್ಯಾಚರಣೆ ಮುಂದುವರಿದಿದೆ ಎಂದು ಜಮ್ಮು ವಲಯದ ಐಜಿಪಿ ಮುಖೇಶ್ ಸಿಂಗ್ ತಿಳಿಸಿದ್ದಾರೆ.
ಎಲ್.ಒ.ಸಿ.ಯಲ್ಲಿ ಪಾಕ್ನಿಂದ ಗುಂಡಿನ ದಾಳಿ
ಈ ಮಧ್ಯೆ, ಜಮ್ಮು-ಕಾಶ್ಮೀರದ ಪೂಂಛ್ ಜಿಲ್ಲೆಯಲ್ಲಿ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ಥಾನದ ಸೇನಾಪಡೆಗಳು ರವಿವಾರ ಬೆಳಗ್ಗೆ ಅಪ್ರಚೋದಿತ ಗುಂಡಿನ ದಾಳಿ ನಡೆಸಿವೆ.
ಇದಕ್ಕೆ ಪ್ರತಿಯಾಗಿ ಭಾರತೀಯ ಸೇನಾಪಡೆಗಳೂ ಗುಂಡಿನ ದಾಳಿ ನಡೆಸಿದವು. ಯಾವುದೇ ಸಾವು-ನೋವು ಸಂಭವಿಸಿದ ಬಗ್ಗೆ ವರದಿಯಾಗಿಲ್ಲ ಎಂದು ಸೇನಾಪಡೆಯ ವಕ್ತಾರರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ