ಎಂಬಿಬಿಎಸ್: ದೇಶದ ಮೊದಲ ಹಿಂದಿ ಆವೃತ್ತಿ ಪುಸ್ತಕಗಳ ಬಿಡುಗಡೆ

ಮಧ್ಯ ಪ್ರದೇಶದಲ್ಲಿ ಹೊಸ ಶೈಕ್ಷಣಿಕ ಬದಲಾವಣೆಗೆ ಮುನ್ನುಡಿ

Team Udayavani, Oct 16, 2022, 6:09 PM IST

1-assadad

ಭೋಪಾಲ್‌ (ಮಧ್ಯ ಪ್ರದೇಶ) : ಎಂಬಿಬಿಎಸ್ ಕೋರ್ಸ್ ಪುಸ್ತಕಗಳ ದೇಶದ ಮೊದಲ ಹಿಂದಿ ಆವೃತ್ತಿಯನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಮತ್ತು ರಾಜ್ಯ ವೈದ್ಯಕೀಯ ಶಿಕ್ಷಣ ಸಚಿವ ವಿಶ್ವಾಸ್ ಕೈಲಾಶ್ ಸಾರಂಗ್ ಅವರ ಸಮ್ಮುಖದಲ್ಲಿ ಭಾನುವಾರ ಬಿಡುಗಡೆ ಮಾಡಿದರು.

ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯ ಮೂಲಕ ಪ್ರಧಾನಿ ಮೋದಿ ವಿದ್ಯಾರ್ಥಿಗಳ ಮಾತೃಭಾಷೆಗೆ ಹೆಚ್ಚಿನ ಒತ್ತು ನೀಡಿದ್ದಾರೆ. ಇದೊಂದು ಐತಿಹಾಸಿಕ ನಿರ್ಧಾರ ಎಂದು ಅಮಿತ್ ಶಾ ಹೇಳಿದರು.

ಇದನ್ನೂ ಓದಿ : ಕಾಂಗ್ರೆಸ್ ಅಧ್ಯಕ್ಷ ಚುನಾವಣೆ : ರಾಹುಲ್ ಗಾಂಧಿ ಮತ ಚಲಾಯಿಸುವ ಕುರಿತು ಸ್ಪಷ್ಟನೆ

‘NEP-2020 ರ ಪ್ರಕಾರ ಹಿಂದಿಯಲ್ಲಿ ವೈದ್ಯಕೀಯ ಕೋರ್ಸ್ ಮಾಡುವ ಮೂಲಕ ತಮ್ಮ ಮಾತೃಭಾಷೆಯಲ್ಲಿ ವೈದ್ಯಕೀಯ ಶಿಕ್ಷಣಕ್ಕೆ ಪ್ರವೇಶ ಪಡೆಯುವ 75% ಹಿಂದಿ ಮಾತನಾಡುವ ಮಕ್ಕಳಿಗೆ ಮಧ್ಯಪ್ರದೇಶ ಸರಕಾರವು ಅವಕಾಶವನ್ನು ನೀಡಿದೆ. ಅವಿರತ ಪ್ರಯತ್ನದಿಂದ ಈ ಕೆಲಸವನ್ನು ಸಾಧ್ಯವಾಗಿಸಿದ ಎಲ್ಲಾ ವೈದ್ಯಕೀಯ ಕಾಲೇಜು ಶಿಕ್ಷಕರಿಗೆ ನಾನು ಕೃತಜ್ಞತೆ ಸಲ್ಲಿಸುತ್ತೇನೆ’ ಎಂದು ಅಮಿತ್ ಶಾ ಹೇಳಿದರು.

‘ಅಧ್ಯಯನದಿಂದ ಸಂಶೋಧನೆಯವರೆಗೆ, ತನ್ನ ಸ್ವಂತ ಭಾಷೆಯಲ್ಲಿ ಯೋಚಿಸುವ ಮಗು ಮಾತ್ರ ಉತ್ತಮವಾಗಿ ಕಾರ್ಯನಿರ್ವಹಿಸಬಲ್ಲದು ಏಕೆಂದರೆ ಅವನ ಮೂಲ ಆಲೋಚನಾ ಸಾಮರ್ಥ್ಯ ಆ ಭಾಷೆಯಲ್ಲಿ ಉತ್ತಮವಾಗಿರುತ್ತದೆ. ಅದಕ್ಕಾಗಿಯೇ ಮೋದಿ ಅವರು ಹೊಸ ಶಿಕ್ಷಣ ನೀತಿಯಲ್ಲಿ ತಾಂತ್ರಿಕ, ಉನ್ನತ ಮತ್ತು ವೈದ್ಯಕೀಯ ಶಿಕ್ಷಣವನ್ನು ಮಾತೃಭಾಷೆಯಲ್ಲಿ ಕಲಿಸುವ ಅವಕಾಶವನ್ನು ಮಾಡಿದ್ದಾರೆ’ ಎಂದು ಶಾ ಹೇಳಿದರು.

‘ಇಂದು ಭಾರತದ ಶಿಕ್ಷಣ ಕ್ಷೇತ್ರಕ್ಕೆ ಅತ್ಯಂತ ಮಹತ್ವದ ದಿನ. ಮುಂದಿನ ದಿನಗಳಲ್ಲಿ ಇತಿಹಾಸ ಬರೆಯುವುದಾದರೆ, ಈ ದಿನ ಸುವರ್ಣಾಕ್ಷರಗಳಲ್ಲಿ ಬರೆಯಲ್ಪಡುತ್ತದೆ’ ಎಂದು ಅಮಿತ್ ಶಾ ಹೇಳಿದರು.

ಸಿಎಂ ಶಿವರಾಜ್ ಸಿಂಗ್ ಮಾತನಾಡಿ, ‘ವೈದ್ಯಕೀಯ ಕಾಲೇಜಿಗೆ ಪ್ರವೇಶ ಪಡೆಯುವ ವೇಳೆ ಇಂಗ್ಲಿಷ್‌ನ ಜಾಲಕ್ಕೆ ಸಿಲುಕಿ ಹಲವು ಬಾರಿ ಪರೀಕ್ಷೆಯಲ್ಲಿ ತೇರ್ಗಡೆಯಾಗದೇ ವ್ಯಾಸಂಗವನ್ನೇ ತೊರೆದ ಬಡವರ ಮಕ್ಕಳ ಜೀವನದಲ್ಲಿ ಇಂದು ಅಮಿತ್ ಶಾ ಹೊಸ ಉದಯ ತಂದಿದ್ದಾರೆ’ ಎಂದರು.

ಟಾಪ್ ನ್ಯೂಸ್

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

Rajeev Chandrashekhar

Corrupt ಡಿಕೆಶಿ ಸರ್ಟಿಫಿಕೆಟ್‌ ಬೇಕಾಗಿಲ್ಲ: ಕೇಂದ್ರ ಸಚಿವ ರಾಜೀವ್‌ ತಿರುಗೇಟು

1-wqewqe

2014 ಭರವಸೆ, 2019 ನಂಬಿಕೆ, 2024ರಲ್ಲಿ ಗ್ಯಾರಂಟಿ: ಮೋದಿ

mamata

CAA, NRC ರದ್ದು: ದೀದಿ ಶಪಥ ಪ್ರಣಾಳಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

naksal (2)

ನಕ್ಸಲರನ್ನು ಬೇರು ಸಮೇತ ಕಿತ್ತೂಗೆಯುತ್ತೇವೆ: ಅಮಿತ್‌ ಶಾ

1-wqewqe

2014 ಭರವಸೆ, 2019 ನಂಬಿಕೆ, 2024ರಲ್ಲಿ ಗ್ಯಾರಂಟಿ: ಮೋದಿ

1-qwqwqeqw

Ban: ಎಕ್ಸ್ ಮೇಲೆ ನಿರ್ಬಂಧ ಹೇರಿದ ಪಾಕಿಸ್ಥಾನ

1-aaaa

Kochi; ವಿದೇಶಿ ಮಹಿಳಾ ಪ್ರವಾಸಿಗರಿಂದ ಪ್ಯಾಲೆಸ್ತೀನ್ ಪರ ಬೋರ್ಡ್‌ಗಳು ಧ್ವಂಸ!!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

suicide

ಕಾಶ್ಮೀರದಲ್ಲಿ ಗುಂಡು ಹಾರಿಸಿ ಬಿಹಾರ ಕಾರ್ಮಿಕನ ಹತ್ಯೆ  

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.