ತೀರ್ಪು ಜಾರಿಗೆ ಉಸ್ತುವಾರಿ ಸಮಿತಿ

ಅಯೋಧ್ಯೆ ತೀರ್ಪು ಜಾರಿಗೆ ಕೇಂದ್ರದಿಂದ ಕ್ರಮ ಮಸೀದಿಗೆ ಜಮೀನು ಆಯ್ಕೆಯ ಬಗ್ಗೆಯೂ ಚರ್ಚೆ

Team Udayavani, Jan 3, 2020, 7:05 AM IST

45

ನವದೆಹಲಿ: ಅಯೋಧ್ಯೆಯ ರಾಮಜನ್ಮಭೂಮಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸುಪ್ರೀಂ ಕೋರ್ಟ್‌ ನೀಡಿದ ತೀರ್ಪಿನ ನಂತರದ ವಿದ್ಯಮಾನಗಳು ಹಾಗೂ ನ್ಯಾಯಾಲಯದ ತೀರ್ಪುಗಳ ಅನುಷ್ಠಾನದ ಮೇಲುಸ್ತುವಾರಿಗಾಗಿ ಉನ್ನತಾಧಿಕಾರಿಗಳ ಸಮಿತಿಯೊಂದನ್ನು ಕೇಂದ್ರ ಸರ್ಕಾರ ರಚಿಸಿದೆ. ಕೇಂದ್ರ ಗೃಹ ಸಚಿವಾಲಯದ ಹೆಚ್ಚುವರಿ ಕಾರ್ಯದರ್ಶಿ ಗ್ಯಾನೇಶ್‌ ಕುಮಾರ್‌ ನೇತೃತ್ವದಲ್ಲಿ ಇಬ್ಬರು ಹಿರಿಯ ಅಧಿಕಾರಿಗಳು ಈ ಸಮಿತಿಯಲ್ಲಿ ಇರಲಿದ್ದಾರೆ.

ನ.9ರಂದು ಐತಿಹಾಸಿಕ ತೀರ್ಪು ನೀಡಿದ್ದ ಸುಪ್ರೀಂ ಕೋರ್ಟ್‌, ವಿವಾದಿತ ಸ್ಥಳದಲ್ಲೇ ರಾಮಮಂದಿರ
ನಿರ್ಮಾಣವಾಗಬೇಕು. ಮಂದಿರ ನಿರ್ಮಾಣಕ್ಕಾಗಿ ಟ್ರಸ್ಟ್‌ ರಚಿಸಬೇಕು. ವಿವಾದಿತ ಪ್ರದೇಶದ ಮೇಲಿನ
ಹಕ್ಕುಗಳಿಗಾಗಿ ಕಾನೂನಾತ್ಮಕ ಹೋರಾಟ ನಡೆಸಿದ್ದ ಉತ್ತರ ಪ್ರದೇಶದ ಸುನ್ನಿ ವಕ್ಫ್ ಮಂಡಳಿಗೆ ಮಸೀದಿ ನಿರ್ಮಿಸಲು ಅಯೋಧ್ಯೆಯಲ್ಲೇ 5 ಎಕರೆ ಜಾಗ ನೀಡಬೇಕೆಂದು ಆದೇಶಿಸಿತ್ತು. ಈ ಆದೇಶಗಳ ಅನುಷ್ಠಾನದ ಮೇಲುಸ್ತುವಾರಿಯನ್ನು ಕುಮಾರ್‌ ನೇತೃತ್ವದ ಸಮಿತಿ ವಹಿಸಿಕೊಳ್ಳಲಿದೆ.

ಸಮಿತಿಗೆ: ಮಸೀದಿ ನಿರ್ಮಾಣಕ್ಕಾಗಿ ಅಯೋಧ್ಯೆಯಲ್ಲಿ ಮೂರು ಸಂಭಾವ್ಯ ಸ್ಥಳಗಳನ್ನು ಗುರುತು ಮಾಡಿರುವ ಉತ್ತರ ಪ್ರದೇಶ ಸರ್ಕಾರ, ಆ ಮೂರೂ ಸ್ಥಳಗಳಲ್ಲಿ ಒಂದನ್ನು ಆಯ್ಕೆ ಮಾಡುವಂತೆ ಕೇಂದ್ರ ಗೃಹ ಇಲಾಖೆಯನ್ನು ಕೋರಿತ್ತು. ಅದೂ ಸೇರಿದಂತೆ, ತೀರ್ಪಿಗೆ ಸಂಬಂಧಿಸಿದ ವಿದ್ಯಮಾನಗಳೂ ಅಸ್ತಿತ್ವಕ್ಕೆ ಬಂದಿರುವ ಸಮಿತಿಯ ಸುಪರ್ದಿಗೆ ಬರಲಿದೆ ಎಂದು ಗೃಹ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮಹತ್ವದ ಜವಾಬ್ದಾರಿ?: ಕುತೂಹಲದ ವಿಚಾರವೆಂದರೆ, ಜಮ್ಮು ಕಾಶ್ಮೀರ ಮತ್ತು ಲಡಾಖ್‌ಗಳನ್ನು
ಕೇಂದ್ರಾಡಳಿತ ಪ್ರದೇಶಗಳನ್ನಾಗಿ ಘೋಷಿಸಿದ ನಂತರ, ಆ ಎರಡೂ ಪ್ರಾಂತ್ಯಗಳ ವಿದ್ಯಮಾನಗಳ ಮೇಲುಸ್ತುವಾರಿ ವಹಿಸುವ ಜವಾಬ್ದಾರಿಯನ್ನೂ ಗ್ಯಾನೇಶ್‌ ಕುಮಾರ್‌ ಅವರೇ ಹೊತ್ತಿದ್ದಾರೆ.

ಸಿಬಿಐನ ಮಾಜಿ ನಿರ್ದೇಶಕರ ವಿಚಾರಣೆ ಲಕ್ನೋದ ವಿಶೇಷ ನ್ಯಾಯಾಲಯದಲ್ಲಿ ನಡೆಯುತ್ತಿರುವ 1992 ಡಿ. 6ರ ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ವಿಚಾರಣೆ ನಿರ್ಣಾಯಕ ಹಂತಕ್ಕೆ ಬಂದು ನಿಂತಿದೆ ಎಂದು ವರದಿಯಾಗಿದೆ. ಬಾಬ್ರಿ ಮಸೀದಿ ನೆಲಸಮ ಪ್ರಕರಣದ ತನಿಖೆ ನಡೆಸಿದ್ದ ಅಂದಿನ ಸಿಬಿಐ ಜಂಟಿ ನಿರ್ದೇಶಕ ಎಂ. ನಾರಾಯಣ ಸ್ವಾಮಿ, ಮಸೀದಿ ಕೆಡವುವ 2ವಿಡಿಯೋಗಳನ್ನು ಕಲೆ ಹಾಕಿದ್ದರು. 15 ಎಂಎಂ ಹಾಗೂ 35 ಎಂಎಂ ಫಿಲ್ಮ್ಗಳಲ್ಲಿ ಚಿತ್ರೀಕರಿಸಲಾಗಿರುವ ಆ ವಿಡಿಯೋಗಳನ್ನು ಚಾಲೂಗೊಳಿಸಿ ತೋರಿಸುವಂತೆ ‌ ಹಳೆಯ ತಂತ್ರಜ್ಞಾನದ ಪ್ರೊಜೆಕ್ಟರ್‌ಗಳು ಈಗ ಲಭ್ಯವಿಲ್ಲವಾದ್ದರಿಂದ ಆ ವಿಡಿಯೋಗಳನ್ನು ಅವಲೋಕಿಸುವ ಕೆಲಸಕ್ಕೆ ಕೋರ್ಟ್‌ ಮುಂದಾಗಿಲ್ಲ. ಹೀಗಾಗಿ ನಾರಾಯಣ ಸ್ವಾಮಿ ಅವರನ್ನೇ ಕೂಲಂಕಶವಾಗಿ ಪ್ರಶ್ನೆ ಮಾಡಿ ಮಾಹಿತಿಗಳನ್ನು ಕಲೆ ಹಾಕಲು ನ್ಯಾಯಾಲಯ ತೀರ್ಮಾನಿಸಿದೆ.

ಟಾಪ್ ನ್ಯೂಸ್

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌

Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!

Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.